ಸಿಇಸಿ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಇಂದು(ಮಂಗಳವಾರ) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸ್ಕ್ರೀನಿಂಗ್ ಸಮಿತಿ ವರದಿ ಆಧರಿಸಿ ಟಿಕೆಟ್ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದೆ. ಬಳಿಕ ಟಿಕೆಟ್ ಅಂತಿಮಗೊಳಿಸಲಾಗುವುದು.
ಬೆಂಗಳೂರು(ಮಾ.19): ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಘೋಷಣೆ ಬಾಕಿ ಇರುವ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಲುವಾಗಿ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಚುನಾವಣಾ ಸಮಿತಿ ಸಭೆಯ ನಂತರ ತೀವ್ರ ಗೊಂದಲವಿರುವ ಕ್ಷೇತ್ರ ಹೊರತುಪಡಿಸಿ ಬಹುತೇಕ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾ.20 ರಂದು ಬುಧವಾರ ಆಗಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬಂಡೆದ್ದ ಡಿವಿಎಸ್ ಕಾಂಗ್ರೆಸ್‌ನತ್ತ?: ಬಿಜೆಪಿಯ ಇನ್ನೊಬ್ಬ ಹಿರಿಯ ನಾಯಕನಿಂದ ಬಂಡಾಯ?
ಸಿಇಸಿ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಇಂದು(ಮಂಗಳವಾರ) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಸ್ಕ್ರೀನಿಂಗ್ ಸಮಿತಿ ವರದಿ ಆಧರಿಸಿ ಟಿಕೆಟ್ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದೆ. ಬಳಿಕ ಟಿಕೆಟ್ ಅಂತಿಮಗೊಳಿಸಲಾಗುವುದು ಎಂದು ತಿಳಿದು ಬಂದಿದೆ.
