Asianet Suvarna News Asianet Suvarna News

ಕಾಂಗ್ರೆಸ್‌ ಸರ್ಕಾರದ ತುಘಲಕ್‌ ಆಡಳಿತದಿಂದ ಬೇಸತ್ತ ಬಿಜೆಪಿ, ಟ್ವಿಟರ್‌ ಖಾತೆ ಬ್ಲ್ಯಾಕ್ ಮಾಡಿ ಆಕ್ರೋಶ

ವಿಧಾನಸಭೆ ಅಧಿವೇಶನದಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಬಿಜೆಪಿ ಟ್ವಿಟರ್‌ ಖಾತೆಯನ್ನು ಬ್ಲ್ಯಾಕ್ ಮಾಡಿ ವಿನೂತನ ಪ್ರತಿಭಟನೆಗೆ ಮುಂದಾಗಿದೆ.

Karnataka Congress government Tughlaq rule BJP blacked its Twitter account and outrage sat
Author
First Published Jul 19, 2023, 7:21 PM IST | Last Updated Jul 19, 2023, 7:21 PM IST

ಬೆಂಗಳೂರು (ಜು.20): ರಾಜ್ಯದ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಬಿಜೆಪಿಯ 10 ಶಾಸಕರನ್ನು ಅಧಿವೇಶನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಬೇಸತ್ತಿರುವ ಬಿಜೆಪಿ ನಾಯಕರು ಟ್ವಿಟರ್‌ ಖಾತೆಯನ್ನು ಬ್ಲ್ಯಾಕ್ ಮಾಡಿ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಅಧಿವೇಶನದ ವೇಳೆ ಬುಧವಾರ ಹಲವು ಹೈಡ್ರಾಮಾಗಳು ನಡೆದಿವೆ. ಸದನ ನಡೆಯುವ ವೇಳೆ ಸ್ಪೀಕರ್‌ ಸ್ಥಾನದಲ್ಲಿ ಕುಳಿತಿದ್ದ ರುದ್ರಪ್ಪ ಲಮಾಣಿ ಅವರ ವಿರುದ್ಧ ಸರ್ಕಾರದ ಬಿಲ್‌ ಪ್ರತಿಯೊಂದನ್ನು ಹಿಡಿದು ಹರಿದು ಮೈಮೇಲೆ ತೂರಾಡಿದ್ದಾರೆ. ಇದು ಆಶಿಸ್ತಿನ ಘಟನೆಯೆಂದು ಪರಿಗಣಿಸಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಬಿಜೆಪಿಯ 10 ಶಾಸಕರನ್ನು ಅಧಿವೇಶನದಿಂದ ಅಮಾನತು ಮಾಡಿದ್ದಾರೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್‌ ಅವರು ನಿರ್ಣಯ ಮಂಡಿಸಿದ್ದಾರೆ. ಕೂಡಲೇ ಅಮಾನತ್ತಾದ ಬಿಜೆಪಿ ಶಾಸಕರನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಹೊರಗೆ ಬೀಸಾಡಲಾಯಿತು.

Breaking: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

ಪ್ರತಿಭಟನಾ ನಿರತ ಶಾಸಕರನ್ನು ವಶಕ್ಕೆ ಪಡೆದ ಪೊಲೀಸರು: ಇನ್ನು ಬಿಜೆಪಿ ಶಾಸಕರನ್ನು ಹೊರಗೆ ಹಾಕಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸ್ಪೀಕರ್‌ ಕಚೇರಿ ಬಳಿ ಪ್ರತಿಭಟನೆ ಮಾಡಲು ಮುಂದಾಗುತ್ತಾರೆ.ಈ ವೇಳೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಅನಾರೋಗ್ಯ ಉಂಟಾಗಿ ಕುಸಿದು ಬಿದ್ದ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತದೆ. ನಂತರ ಪ್ರತಿಭಟನೆಯನ್ನು ಮುಂದುವರೆಸಿದ ಬಿಜೆಪಿ ಶಾಸಕರು, ವಿಧಾನಸಭಾ ಆವರಣದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿದ್ದ 'ಗೃಹಲಕ್ಷ್ಮಿ' ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೋಲೀಸರಿಂದ ಪ್ರತಿಭಟನಾ ನಿರತ ಶಾಸಕರನ್ನು ವಶಕ್ಕೆ ಪಡೆಯಲಾಯಿತು. ಇದರ ಬೆನ್ನಲ್ಲೇ ಬಿಜೆಪಿಯು ಟ್ವಿಟರ್‌ ಖಾತೆಯನ್ನು ಬ್ಲ್ಯಾಕ್‌ (ಕಪ್ಪು) ಮಾಡಿ ವಿನೂತನವಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿದೆ. 

ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ:  "ರಾಜ್ಯದಲ್ಲಿ ಸರ್ವಾಧಿಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ತುಘಲಕ್ ದರ್ಬಾರ್ ಮಿತಿ ಮೀರಿದೆ. ಇವರು ಮಾಡುವ ಅನಾಚರಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನಮ್ಮ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನೀವು ನಮ್ಮ ಶಾಸಕರನ್ನು ಅಮಾನತು ಮಾಡಬಹುದು, ಹತ್ತಿಕ್ಕಲು ಸಾಧ್ಯವಿಲ್ಲ. ನಿಮ್ಮ ಈ ರಣಹೇಡಿ ದಬ್ಬಾಳಿಕೆಗೆ ನಾವು ಕುಗ್ಗುವುದಿಲ್ಲ. ನಿಮ್ಮ ಜನ ವಿರೋಧಿ, ನಾಡ ವಿರೋಧಿ ನಿಲುವುಗಳ ವಿರುದ್ಧ ನಮ್ಮ ಹೋರಾಟ ಶತ ಸಿದ್ಧ" ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವಿಟ್ಟರ್‌ ಖಾತೆ ಡಿಪಿಯನ್ನು ಬ್ಲ್ಯಾಕ್‌ ಮಾಡಿದೆ. 

ವಿಧಾನಸೌಧದಲ್ಲಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌, ಆರ್.ಅಶೋಕ್‌ ಅಸ್ವಸ್ಥ: ಆಸ್ಪತ್ರೆ ರವಾನೆ

ಸರಣಿ ಟ್ವೀಟ್‌ ಮಾಡಿ ಆಕ್ರೋಶ:  "ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಲು ನಿಮಗೆ ಯಾವುದೇ ಅರ್ಹತೆ, ನೈತಿಕತೆ ಇಲ್ಲ.  ಭಾರತದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಕುಖ್ಯಾತಿ ನಿಮ್ಮ ಪಕ್ಷದ್ದು. ಭಾರತದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ನಿಂತು ಪ್ರಶ್ನಿಸಿದ್ದು ನಿಮ್ಮ ಅನರ್ಹ ‘ನಾಯಕ’. ಸದನದ ಸ್ಪೀಕರ್ ಹಾಗೂ ಸರಕಾರದ ಉನ್ನತ ಅಧಿಕಾರಿಗಳ ವಿಶೇಷಾಧಿಕಾರವನ್ನು ದುರ್ಬಳಕೆ ಮಾಡುತ್ತಿರುವ ನೀವು ಅನರ್ಹರು ಎಂದು ಸರಣಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Latest Videos
Follow Us:
Download App:
  • android
  • ios