'ಸೆಕ್ಸ್ CD ಕೇಸ್:ಯಡಿಯೂರಪ್ಪನವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ'?
ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ರಾಜಕೀಯಕ್ಕೆ ತಿರುವುಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ.
ಬೆಂಗಳೂರು, (ಮಾ.16): ರಾಸಲೀಲೆ ಸಿ.ಡಿ. ಪ್ರಕರಣದ ಹಿಂದೆ ಮಹಾನ್ ನಾಯಕನ ಕೈವಾಡವಿದೆ ಎಂದು ಸ್ವತಃ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.
ಇದೀಗ ಈ ಮಹಾನ್ ನಾಯಕನ ಸುಳಿವನ್ನು ರಾಜ್ಯ ಬಿಜೆಪಿ ಬಹಿರಂಗಪಡಿಸಿದೆ. ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
CD ಪ್ರಕರಣ ಹಿಂದಿರುವ ಕಾಣದ ಕೈ ಯಾರದ್ದು? ಬಿಜೆಪಿಯಿಂದ ಮೊದಲ ಅಧಿಕೃತ ಹೇಳಿಕೆ!
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ" ಎನ್ನುತ್ತ ಬಿಎಸ್ ಯಡಿಯೂಪರಪ್ಪ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ?! ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ #BSYmuktaBJP ಅಭಿಯಾನ ಮುಂದುವರೆಸುತ್ತಿರುವಿರಾ! ಎಂದು ಪ್ರಶ್ನೆ ಮಾಡಿದೆ.
ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ರಾಜಕೀಯಕ್ಕೆ ತಿರುವು ಪಡೆದುಕೊಂಡಿದ್ದು, ಮುಂದೆ ಯಾವ ರೀತಿ ಸ್ವರೂಪ ಪಡೆದುಕೊಳ್ಳುತ್ತೇ ಎನ್ನುವುದನ್ನು ಕಾದುನೋಡಬೇಕಿದೆ.