ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟ್ ಎಂದ ಬಿಜೆಪಿ ನಾಯಕರು ಹೇಳಿರುವುದು ಮೈತ್ರಿ ಸರ್ಕಾರ ಆತಂಕಗೊಂಡಿದೆ. ಇದ್ರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅಲರ್ಟ್ ಆಗಿದ್ದಾರೆ.
ಬೆಂಗಳೂರು, [ಫೆ.03]: ಒಂದು ಕಡೆ ರಾಜ್ಯ ಮೈತ್ರಿ ಸರ್ಕಾರಕ್ಕೆ ಆತಂಕ, ಮತ್ತೊಂದು ಕಡೆ ಲೋಕಸಭಾ ಟಿಕೆಟ್ ಹಂಚಿಕೆ ಗೊಂದಲ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದರ ನಡುವೆ ಇದೇ ಫೆಬ್ರವರಿ 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆ.6 ರಿಂದ ಜಂಟಿ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಟ್ಟುಗೂಡಿಸುವ ಕೆಲಸ ನಡೆಯುತ್ತಿದೆ.
ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟ್: ಹೊಸ ಬಾಂಬ್ ಸಿಡಿಸಿದ ಅಶೋಕ್
ಬಿಜೆಪಿ ನಾಯಕರು ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದ್ರಿಂದ ಮೈತ್ರಿ ಸರ್ಕಾರ ಆತಂಕ ಸೃಷ್ಟಿಸಿದೆ. ಹಾಗಾಗಿ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಂದೆಡೆ ಸೇರಿಸಲು ಉಭಯ ಪಕ್ಷಗಳ ನಾಯಕರು ಒಂದು ತೀರ್ಮಾನಕ್ಕೆ ಬಂದಿದ್ದಾರೆ.
ಅದೇನೆಂದರೆ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು. ಹೌದು.. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಿಸಿಎಂ ಜಿ. ಪರಮೇಶ್ವರ್ ನೇತೃತ್ವದಲ್ಲಿ ಫೆಬ್ರವರಿ 6 ರಂದು ಖಾಸಗಿ ಹೊಟೇಲ್ನಲ್ಲಿ ದೋಸ್ತಿ ಪಕ್ಷಗಳ ಶಾಸಕರಿಗೆ, ಸಚಿವರಿಗೆ ಔತಣಕೂಟ ಏರ್ಪಡಿಸಲಾಗಿದೆ.
ಔತಣಕೂಟದ ಜತೆಗೆ ಎರಡೂ ಪಕ್ಷಗಳ ಜಂಟಿ ಶಾಸಕಾಂಗ ಸಭೆ ನಡೆಸಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 3, 2019, 8:08 PM IST