ನವದೆಹಲಿ, [ಅ24]: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರ ಬಂದಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ರಾಜಕೀಯ ಅಖಾಡಕ್ಕಿಳಿದಿದ್ದಾರೆ. 

ಇದಕ್ಕೆ ಪೂರಕವೆಂಬಂತೆ ತಿಹಾರ್ ಜೈಲಿನಿಂದ ಹೊರಬಂದ ಡಿಕೆಶಿ ದಿಢೀರ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದರು. 

ಜೈಲಿನಿಂದ ಹೊರಬರುತ್ತಿದ್ದಂತೆಯೇ ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಮಹತ್ವದ ಹುದ್ದೆ..?

ತಿಹಾರ್ ಜೈಲಿನಿಂದ ಬುಧವಾರ ರಾತ್ರಿ ಬಿಡುಗಡೆಯಾಗಿರುವ ಡಿಕೆಶಿ ಇಂದು [ಗುರವಾರ]  ಮಧ್ಯಾಹ್ನ ಎಐಸಿಸಿ ಕಚೇರಿಯಲ್ಲಿ ಕೆ. ಸಿ. ವೇಣುಗೋಪಾಲ್ ಭೇಟಿ ಮಾಡಿದರು. ಡಿ. ಕೆ. ಶಿವಕುಮಾರ್‌ ಅನ್ನು ವೇಣುಗೋಪಾಲ್ ಅಪ್ಪಿಕೊಂಡು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಸದ ಡಿ. ಕೆ. ಸುರೇಶ್ ಉಪಸ್ಥಿತರಿದ್ದರು.

ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಡಿಕೆಶಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ [ಕೆಪಿಸಿಸಿ] ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ  ರಾಜ್ಯ ಕಾಂಗ್ರೆಸ್ ವಲಯದಲ್ಲಿ ಚರ್ಚೆಗಳು ನಡೆದಿವೆ. ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಮೂಡಿಸಿದೆ.

"

ಈ ಒಂದೇ ಒಂದು ಕಾರಣಕ್ಕೆ ಡಿಕೆಶಿಗೆ ಜಾಮೀನು ಸಿಕ್ಕಿದ್ದು: ಏನದು?

ಅಷ್ಟೇ ಅಲ್ಲದೇ ಉಪಚುನಾವಣೆ ಈ ಬಗ್ಗೆ ಚರ್ಚೆಗಳು ಸಹ ನಡೆದಿವೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಉಪ ಚುನಾವಣೆ ವೇಳೆ ಡಿಕೆಶಿ ಬಂಧನಮುಕ್ತರಾಗಿರುವುದು ಕಾಂಗ್ರೆಸ್ ಗೆ ಆನೆ ಬಲ ಬಂದಂತಾಗಿದೆ. ಅದರಲ್ಲೂ ಡಿಕೆಶಿ ಬೈ ಎಲೆಕ್ಷನ್ ಕಿಂಗ್ ಮೇಕರ್ ಎನ್ನುವುದನ್ನು ಪ್ರೂವ್ ಮಾಡಿ ತೋರಿಸಿದ ಉದಾಹರಣೆಗಳು ಉಂಟು. 

ಇಡಿ ಕೇಸ್ ಬಗ್ಗೆ ತಮ್ಮ ವಕೀಲರೊಮದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ನಾಳೆ ಅಂದ್ರೆ ಶುಕ್ರವಾರ ಬೆಂಗಳೂರಿಗೆ ಆಗಮಿಸುವ ಎಲ್ಲಾ ಸಾಧ್ಯತೆಗಳಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. 50 ದಿನಗಳ ಜೈಲುವಾಸದ ಬಳಿಕ ಬುಧವಾರ ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.