ಕಾಂಗ್ರೆಸ್‌ಗೆ ಬಿಗ್ ಶಾಕ್: ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಕೈ ಹಿರಿಯ ನಾಯಕ
ಕಾಂಗ್ರೆಸ್ ರಾಜ್ಯದಲ್ಲಿ ಒಂದು ಕಡೆ ಸತತ ಸೋಲುಗಳಿಂದ ಕೆಂಗೆಟ್ಟು ಸೊರಗುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ರಾಜಕಿಐ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಕೋಲಾರ, (ಡಿ.07): ಮಾಜಿ ಸಚಿವ, ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್‌ನ ಹಾಲಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದಲ್ಲಿನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದರು.
ಮಾಜಿ ಶಾಸಕ ಬಿಜೆಪಿ ಸೇರ್ಪಡೆ, ಸಿಎಂ ಭೇಟಿ ಮಾಡಿಸಿದ ಸಚಿವ ಸುಧಾಕರ್...
ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕುಂಠಿತಗೊಂಡಿದೆ. ವಯೋವೃದ್ಧರಿಗೆ ಪಿಂಚಣಿ ಬರುತ್ತಿಲ್ಲ. ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಪ್ರಮಾಣ ಕಡಿತಗೊಳಿಸಲಾಗಿದೆ. ಹೊಸದಾಗಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ವಿವಿಧ ವಸತಿ ಯೋಜನೆಗಳಡಿ ಈಗಾಗಲೇ ಮನೆ ಕಟ್ಟಿದವರಿಗೆ ಬಿಲ್ ಪಾವತಿಸಿಲ್ಲ. ಎತ್ತಿನಹೊಳೆ ಯೋಜನೆ ಕಾಮಗಾರಿ ಒಂದಿಂಚೂ ಮುಂದೆ ಹೋಗಿಲ್ಲ ಎಂದು ಅಸಮಧಾನ ಹೊರಹಾಕಿದರು.
ಗ್ರಾಮಗಳ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಬೇಕು. ಇದಕ್ಕಾಗಿ ಕಾಳಜಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.