ಕಾಂಗ್ರೆಸ್‌ಗೆ ಪೂರ್ಣ ಪ್ರಮಾಣದ ರಾಜ್ಯಾಧ್ಯಕ್ಷರು ಬೇಕೇಬೇಕು: ಸಚಿವ ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ ಬಂದ ಮೇಲೆ ಈ ಬಗ್ಗೆ ಸುಳಿವು ಸಿಗಬಹುದು. ಅಧಿವೇಶನ ನಂತರ ದೆಹಲಿ ಹೋಗಿ ಬರುತ್ತೇನೆ ಎಂದು ತಿಳಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 

Karnataka Congress needs full-fledged state president Says Minister Satish Jarkiholi grg

ಬೆಳಗಾವಿ(ಡಿ.01):  ಕಾಂಗ್ರೆಸ್‌ಗೆ ಪೂರ್ಣ ಪ್ರಮಾಣದ ರಾಜ್ಯಾಧ್ಯಕ್ಷರು ಬೇಕೇ ಬೇಕು. ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮಾತ್ರ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ದೆಹಲಿಗೆ ಹೋಗಿ ಬಂದ ಮೇಲೆ ಈ ಬಗ್ಗೆ ಸುಳಿವು ಸಿಗಬಹುದು. ಅಧಿವೇಶನ ನಂತರ ದೆಹಲಿ ಹೋಗಿ ಬರುತ್ತೇನೆ ಎಂದು ತಿಳಿಸಿದರು. 

ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ ಜಾರಕಿಹೊಳಿ ಸಮರ್ಥರಿದ್ದಾರೆ: ಸಚಿವ ಜಮೀರ್‌ ಅಹ್ಮದ್

ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಣ್ಣ ಹುದ್ದೆಯಲ್ಲ. ಹೀಗಾಗಿ ಹೈಕಮಾಂಡ್ ಸೂಚನೆ ಬಂದ ಮೇಲೆ ಚರ್ಚೆ ಮಾಡಬೇಕಾಗುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದರ ಬಗ್ಗೆ ಚರ್ಚಿಸಬೇಕು. ನಂತರ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಧ್ಯಕ್ಷರಾಗಲು ಮೂರ್ನಾಲ್ಕು ಜನ ರೇಸ್‌ನಲ್ಲಿ ಇದ್ದೇ ಇರುತ್ತಾರೆ. ಯಾರು ಪಕ್ಷಕ್ಕೆ ವೋಟ್ ತರುತ್ತಾರೆ, ಯಾರಿಗೆ ಮತ ಸೆಳೆಯುವ ಶಕ್ತಿ ಇದೆ ಅಂತವರಿಗೆ ಪಕ್ಷ ಅವಕಾಶ ನೀಡಬೇಕೆಂದರು.

ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷನಾಗುವ ಆಸೆ ಇದೆ: ಸಚಿವ ಸತೀಶ್ ಜಾರಕಿಹೊಳಿ

ಹಾವೇರಿ(ಶಿಗ್ಗಾಂವಿ): ನನಗೂ ಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆಸೆ ಸಹಜ, ರಾಜ್ಯಾಧ್ಯಕ್ಷರ ಬದಲಾವಣೆ, ಮುಖ್ಯಮಂತ್ರಿಗಳ ಬದಲಾವಣೆ ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. 

ಶುಕ್ರವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರದ ಪೂರ್ಣಾವಧಿವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ಮಂತ್ರಿ ಮಂಡಲದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಹಿಂದೆ ಸತೀಶ್ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ ಹರಿದಾಡಿತ್ತು. ಈಗ ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ನಾನು ಯಾವುದೇ ಲಾಬಿನೂ ಮಾಡಿಲ್ಲ. ಒತ್ತಡವನ್ನೂ ಹಾಕಿಲ್ಲ. ಉಪಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಖುಷಿಯಿದೆ. ಮಂತ್ರಿಯಾಗಿದ್ದೇನೆ ತೃಪ್ತಿಯಿದೆ ಎಂದು ಹೇಳಿದ್ದರು. 

ರೆಬಲ್ ಅನ್ನೋದೆ ಸಚಿವ ಸ್ಥಾನವಿದ್ದಂತೆ, ನನಗೆ ಕಾಂಗ್ರೆಸ್‌, ಬಿಜೆಪಿಯಲ್ಲೂ ಅನ್ಯಾಯ: ರಮೇಶ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಅವರು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದಿದ್ದರು. 

ಅಧಿಕಾರ ಹಂಚಿಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಮಾತನಾಡಿ, ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್‌ಪೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕಕ್ಕೆ ಒಳ್ಳೆಯ ಖಾತೆಗಳನ್ನೇ ಕೊಟ್ಟಿದಾರೆ ಎಂದು ತಿಳಿಸಿದ್ದರು. 

ಕಾಂಗ್ರೆಸ್‌ನಲ್ಲಿ ಬಣ ರಾಜಕೀಯದ ಬಗ್ಗೆ ಮಾತನಾಡಿ, ಬಣ ಬಡಿದಾಟ ಇದೆ ಎಂದು ನಾನು ಹೇಳುತ್ತಿದ್ದೇನೆ. ನಮ್ಮ ಪಕ್ಷದಲ್ಲೂ ಇದೆ. ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಣಗಳು ಇರುತ್ತವೆ, ಆದರೆ ಎಂದು ಹೇಳಿದ್ದರು.   

Latest Videos
Follow Us:
Download App:
  • android
  • ios