Asianet Suvarna News Asianet Suvarna News

ನಾಯಕತ್ವ ಬದಲಾವಣೆ ಕೂಗು: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಕರ್ನಾಟಕ ಕಾಂಗ್ರೆಸ್

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಇತ್ತ ಕರ್ನಾಟಕ ಕಾಂಗ್ರೆಸ್ ಸೋನಿಯಾ ಪರ ಬ್ಯಾಟಿಂಗ್ ಮಾಡಿದೆ.

Karnataka Congress opposes challenge to gandhi family leadership
Author
Bengaluru, First Published Aug 23, 2020, 9:00 PM IST

ಬೆಂಗಳೂರು, (ಆ.23): ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬಂದಿದ್ದು, ಸೋಮವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆ  ಭಾರೀ ಕುತೂಹಲ ಮೂಡಿಸಿದೆ.

ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

ಇತ್ತ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯ
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು‌ ನಾವೆಲ್ಲರೂ ಪ್ರಯತ್ನಿಸಬೇಕೇ ಹೊರತು ದುರ್ಬಲಗೊಳಿಸುವುದಲ್ಲ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಪ್ರತಿಕ್ರಿಯೆ
ಕರ್ನಾಟಕ ಕಾಂಗ್ರೆಸ್ ಘಟಕ ಗಾಂಧಿ ಕುಟುಂಬದ ನಾಯಕತ್ವಕ್ಕೆ ಬೆಂಬಲ ನೀಡುತ್ತದೆ. ಬಿಕ್ಕಿಟ್ಟಿನ ಸಂದರ್ಭದಲ್ಲೂ ಸೋನಿಯಾ ಅವರು ಯಾವುದೇ ರೀತಿಯ ದೃತಿಗೆಡದೆ ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ವಿಷಯ ಯಾವುದೇ ಇರಲಿ ಅದನ್ನು ಪಕ್ಷದೊಳಗೆ ಚರ್ಚಿಸಬೇಕೇ ಹೊರತು ಮಾಧ್ಯಮಗಳ ಮೂಲಕ ಅಲ್ಲ ಎಂದಿದ್ದಾರೆ.

Follow Us:
Download App:
  • android
  • ios