Asianet Suvarna News Asianet Suvarna News

ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತ ಬಿಜೆಪಿ ಅಭ್ಯರ್ಥಿ ಈಗ ವಿಪಕ್ಷ ನಾಯಕ: ಅಶೋಕ್‌ ಬಗ್ಗೆ ಕಾಂಗ್ರೆಸ್‌ ಲೇವಡಿ

ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಆರ್‌.ಅಶೋಕ್‌ ಬಗ್ಗೆ ಲೇವಡಿ ಮಾಡಿದ ಕಾಂಗ್ರೆಸ್‌ 

Karnataka Congress React to R Ashoka Elected as Karnataka Opposition Party Leader grg
Author
First Published Nov 17, 2023, 8:52 PM IST

ಬೆಂಗಳೂರು(ನ.17):  ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಆರ್‌.ಅಶೋಕ್‌ ಬಗ್ಗೆ ಕಾಂಗ್ರೆಸ್‌ ಲೇವಡಿ ಮಾಡಿದೆ.

 

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಬಿಜೆಪಿ ಕೂರಿಸಿದೆ ಎಂದು ಕಾಂಗ್ರೆಸ್‌ ಅನ್ನ ಅಧಿಕೃತ ಎಕ್ಸ್‌ನಲ್ಲಿ ಬರೆದುಕೊಂಡಿದೆ. 

ರಾಜ್ಯಕ್ಕೆ ವಿರೋಧ ಪಕ್ಷದ ನಾಯಕನನ್ನು ಕೊಡಿ ಎಂದರೆ ವಿರೋಧ ಪಕ್ಷವನ್ನೇ ವಿರೋಧಿಸುವ ನಾಯಕರನ್ನು ಬಿಜೆಪಿ ಕೊಡುತ್ತಿದೆ. ಯಾವುದೇ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೂ ಕಿತ್ತಾಡದಷ್ಟು ಬಿಜೆಪಿಯ ಕಿತ್ತಾಟ ಜೋರಾಗಿದೆ.ಬಿಜೆಪಿ ನಾಯಕರು ಸೇರುವ ಜಾಗದಲ್ಲಿ ಕೋಲು, ದೊಣ್ಣೆ ಹಾಗೂ ಇತರೆ ಯಾವುದೇ ಆಯುಧವಾಗಿ ಬಳಸಬಹುದಾದ ವಸ್ತುಗಳನ್ನು ದೊರಕದಂತೆ ನೋಡಕೊಳ್ಳಬೇಕು. ಅಕಸ್ಮಾತ್ ಹೊಡೆದಾಡಿಕೊಂಡರೆ ಆಸ್ಪತ್ರೆಗಳಲ್ಲಿ ನೂಕುನುಗ್ಗಲಾಗುವ ಸಾಧ್ಯತೆ ಇರುತ್ತದೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ. 

ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರದ ತಾಂಡವ, ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಜೆಪಿ

ವಿರೋಧ ಪಕ್ಷದ ನಾಯಕನಾಗಿ ಆರ್‌.ಅಶೋಕ್‌ ಆಯ್ಕೆ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪ್ರಭಾವಿ ಒಕ್ಕಲಿಗ ನಾಯಕನಾಗಿರುವ ಪದ್ಮನಾಭನಗರದ ಶಾಸಕ ಆರ್‌.ಅಶೋಕ್‌ ಅವರನ್ನು ಪ್ರತಿಪಕ್ಷದ ನಾಯಕರಾಗಿ ಘೋಷಣೆ ಮಾಡಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಅಶೋಕ್‌ ಹೆಸರನ್ನು ಸೂಚಿಸಿದರೆ, ಶಾಸಕ ಸುನಿಲ್‌ ಕುಮಾರ್ ಇದಕ್ಕೆ ಅನುಮೋದನೆ ನೀಡಿದರು. ಕೊನೆಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಈ ಹೆಸರಿಗೆ ಅನುಮೋದನೆ ನೀಡಿದರು.ವಿಪಕ್ಷ ನಾಯಕರಾಗಿ ಆರ್‌ ಅಶೋಕ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಶೋಕ್‌ ಅವರ ಆಯ್ಕೆ ಮೂಲಕ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ. 'ಕಾಂಗ್ರೆಸ್‌ ದುರಾಡಳಿತ ಜನರ ಮುಂದೆ ಇಡಲಿದ್ದೇವೆ. ಮುಂಬರುವ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸೋಣ. ಒಂದು ಚುನಾವಣೆಯ ಸೋಲಿನಿಂದ ನಾವು ಹೆದರಿ ಕೂರೋದಿಲ್ಲ. ಹೈಕಮಾಂಡ್‌ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇವೆ' ಎಂದು ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬಳಿಕ ಆರ್‌.ಅಶೋಕ್‌ ಮಾತನಾಡಿದ್ದಾರೆ. ಅದರೊಂದಿಗೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ.

ಕೇಂದ್ರದ ವೀಕ್ಷಕರ ಸಮ್ಮುಖದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್‌ ಅಶೋಕ್‌ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಿಜೆಪಿಯ ಹಿರಿಯ ನಾಯಕರಾಗಿರುವ ಆರ್‌ ಅಶೋಕ್‌, ಉಪಮುಖ್ಯಮಂತ್ರಿಯಾಗಿ ವಿವಿಧ ಇಲಾಖೆಯಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

Follow Us:
Download App:
  • android
  • ios