* ಯಡಿಯೂರಪ್ಪನವರನ್ನ ರಾಜೀನಾಮೆ ಕೊಡಿಸಿದ್ದೇ ಐಟಿ, ಇಡಿ, ಸಿಬಿಐಗಳ ಬೆದರಿಕೆಯೊಡ್ಡಿ* ಕರ್ನಾಟಕ ಕಾಂಗ್ರೆಸ್ ಸ್ಫೋಟಕ ಹೇಳಿಕೆ* ಟ್ವಿಟ್ಟರ್‌ನಲ್ಲಿ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್

ಬೆಂಗಳೂರು, (ಆ.08): ಬಿಎಸ್ ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಏಕೆ ಕೆಳಗಿಳಿಸಿದ್ರು ಎನ್ನುವುದಕ್ಕೆ ಅವರ ಅಭಿಮಾನಿಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ

. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇನ್ನೂ ಎರಡು ವರ್ಷ ಇದೆ. ಆದರೂ ಓರ್ವ ಪ್ರಭಾವಿ ವೀರಶೈವ ಲಿಂಗಾಯತ ನಾಯಕ ಯಡಿಯೂರಪ್ಪನವರನ್ನ ಹೈಕಮಾಂಡ್ ಬದಲಿಸಲು ಕಾರಣ ಏನು ಎನ್ನುವುದು ಮಾತ್ರ ಇನ್ನೂ ಮಿಲಿಯನ್ ಡಾಲರ್ ಪ್ರಶ್ನೆಯಾಗಿಯೇ ಉಳಿದಿದೆ. 

'ಭ್ರಷ್ಟಾಚಾರದ ಕಾರಣಕ್ಕೆ ಬಿಎಸ್‌ವೈರನ್ನ ಸಿಎಂ ಸ್ಥಾನದಿಂದ ಬದಲಿಸಲಾಗಿದೆಯಾ?'

ಕೆಲವರು ವಯಸ್ಸಿನ ಮೇಲೆ ಅವರನ್ನ ಬದಲಿಸಲಾಗಿದೆ ಎನ್ನುತ್ತಿದ್ರೆ, ಇನ್ನೂ ಕೆಲವರು ಪುತ್ರ ವಿಜಯೇಂದ್ರ ಅವರ ನಡೆಯಿಂದ ಯಡಿಯೂರಪ್ಪನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲಾಗಿದೆ ಎನ್ನುತ್ತಿದ್ದಾರೆ.

ಆದ್ರೆ, ಇದೀಗ ಕಾಂಗ್ರೆಸ್ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಬಿಎಸ್ ಯಡಿಯೂರಪ್ಪ ಅವರನ್ನು ಐಟಿ, ಇಡಿ, ಸಿಬಿಐಗಳ ಬೆದರಿಕೆಯೊಡ್ಡಿ ರಾಜೀನಾಮೆ ಕೊಡಿಸಿದೆ ಬಿಜೆಪಿ ಎಂದಿದೆ.

 ಪುತ್ರ ವಿಜಯೇಂದ್ರ ಅವರನ್ನು ಜೈಲಿಗೆ ಕಳಿಸುತ್ತೇವೆ ಎಂದೂ ಸಹ ಬೆದರಿಸಲಾಗಿದೆ. ಕಣ್ಣೀರಿಟ್ಟ BSY ಅವರೂ ಸಹ ರಾಜ್ಯದಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡುವ ಬೆದರಿಕೆಯೊಡ್ಡಿ ಹೈಕಮಾಂಡ್‌ನ್ನು ಮಣಿಸಿದ್ದಾರೆ ಎಂಬ ಸುದ್ದಿ ಇದೆ ಕಾಂಗ್ರೆಸ್ ಟ್ವೀಟ್ ಮಾಡಿದೆ.

Scroll to load tweet…