Asianet Suvarna News Asianet Suvarna News

ಸಿಎಂ ಬೊಮ್ಮಾಯಿ ಸರ್ಕಾರದಿಂದ ಕನ್ನಡಿಗರ ಮೇಲೆ ಹಗೆ: ಕಾಂಗ್ರೆಸ್‌

ಕರ್ನಾಟಕ ಮಕ್ಕಳ ಮೇಲೆ ಮಹಾರಾಷ್ಟ್ರ ಸರ್ಕಾರಕ್ಕಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವೇ ಹೆಚ್ಚು ಹಗೆ ಸಾಧಿಸುತ್ತಿರುವಂತಿದೆ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.

Karnataka Congress Slams To CM Basavaraj Bommai gvd
Author
First Published Dec 4, 2022, 3:00 AM IST

ಬೆಂಗಳೂರು (ಡಿ.04): ಕರ್ನಾಟಕ ಮಕ್ಕಳ ಮೇಲೆ ಮಹಾರಾಷ್ಟ್ರ ಸರ್ಕಾರಕ್ಕಿಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವೇ ಹೆಚ್ಚು ಹಗೆ ಸಾಧಿಸುತ್ತಿರುವಂತಿದೆ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ಹೊಡೆದರು. ಠಾಣೆಗೆ ಕರೆದೊಯ್ದ ಡಿಸಿಪಿ ಬೂಟುಕಾಲಿನಿಂದ ಒದ್ದರು ಎಂದು ವಿದ್ಯಾರ್ಥಿ ಹೇಳಿಕೆ ನೀಡಿದ್ದಾರೆ. ನಾಡಧ್ವಜ ಹಿಡಿದ ವಿದ್ಯಾರ್ಥಿಗಳಿಗೆ ಪೊಲೀಸರೇ ಥಳಿಸಿದ್ದಾರೆ. ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಪೊಲೀಸರೇ ತೆಗೆದಿದ್ದಾರೆ ಎಂದರೆ ಏನರ್ಥ? 

ಕನ್ನಡಿಗರ ಮೇಲೆ ದೌರ್ಜನ್ಯ ಎಸಗಲು ಸರ್ಕಾರ ಪೊಲೀಸರಿಗೆ ನಿರ್ದೇಶನ ನೀಡಿದೆಯೇ?’  ‘ಇನ್ನು ಮಹಾರಾಷ್ಟ್ರದ ಗಡಿ ಕ್ಯಾತೆ ವಿಚಾರದಲ್ಲಿ ಯಾಕೆ ಎಲ್ಲಾ ಸಚಿವರ ಬಾಯಿ ಬಂದ್‌ ಆಗಿದೆ. ಅಲ್ಲೂ ಬಿಜೆಪಿ, ಇಲ್ಲೂ ಬಿಜೆಪಿ. ಎರಡೂ ಸರ್ಕಾರಗಳು ಸೇರಿಕೊಂಡು ಕನ್ನಡಿಗರನ್ನು ವಂಚಿಸುತ್ತಿವೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯವಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಅಲ್ಲೂ ನಮ್ಮದೇ ಸರ್ಕಾರ ಎಂಬ ಮಮಕಾರವೇ’ ಎಂದು ಕಿಡಿ ಕಾರಿದೆ.

Ticket Fight: ದಕ್ಷಿಣ ಕನ್ನಡ ಬಿಜೆಪಿ ಕೋಟೆಯಲ್ಲಿ ಕಾಂಗ್ರೆಸ್‌ ಪೈಪೋಟಿ

ಸಿ.ಟಿ. ರವಿ ಲೂಟಿ ರವಿಯಾಗಿದ್ದಾರೆ: ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ. ರವಿ ಅವರು ಲೂಟಿ ರವಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕಾರಣದ ಅನುಭವದ ವಯಸ್ಸು ಸಿ.ಟಿ. ರವಿ ಅವರಿಗೆ ಆಗಿಲ್ಲ. ಅವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಅವರಿಗೆ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ತಮ್ಮ ಮಾತಿನ ಚಪಲದಿಂದಾಗಿ ಇತ್ತೀಚಿಗೆ ಸಿದ್ರಾಮಯ್ಯ ಅವರಿಗೆ ಸಿದ್ರಾಮಉಲ್ಲಾಖಾನ್‌ ಎಂದು ಹೇಳಿದ್ದು ಹಾಸ್ಯಾಸ್ಪದ. ಇನ್ನು ಮುಂದಾದರೂ ಸಹ ಸಿದ್ದರಾಮಯ್ಯನವರ ವಿರುದ್ಧವಾಗಿ ಮಾತನಾಡುವುದನ್ನು ಬಿಟ್ಟು ತನ್ನ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಕೊಟ್ಟರೆ ಸಾಕು ಎಂದರು.

ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಿ.ಟಿ. ರವಿ ಮಾಡಲು ಸಾಧ್ಯವಿಲ್ಲ. ಸಿ.ಟಿ. ರವಿ ಕೇವಲ ಜಾತಿ-ಧರ್ಮದ ನಡುವೆ ರಾಜಕಾರಣ ಮಾಡುತ್ತಾರೆ. ಬಿಜೆಪಿ ಸರ್ಕಾರದಲ್ಲಿ ಅನೇಕ ಜನ ಹಿಂದೂಗಳು ಹತ್ಯೆಯಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವಿದೆ. ಆದರೆ ಯಾಕೆ ಕ್ರಮ ಕೈಗೊಂಡಿಲ್ಲ? ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂದು ಹೇಳುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಕೆಂಪೇ​ಗೌ​ಡರಿಗೆ 'ಪ್ರತಿಮೆ' ಗೌರವ ಸಮರ್ಪಣೆ: ಸಚಿವ ಅಶ್ವತ್ಥ್‌ ನಾರಾಯಣ

15,000 ಮತ ಡಿಲೀಟ್‌: ಬಿಜೆಪಿಯವರು ಮತದಾರರ ಪಟ್ಟಿಯಲ್ಲಿರುವ ಕೆಲವು ಮತದಾರರ ಹೆಸರನ್ನು ತೆಗೆದು ಹಾಕುವ ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್‌ಗೆ ಯಾರು ಮತ ಹಾಕುತ್ತಾರೆ ಎಂಬ ಮುಂದಾಲೋಚನೆ ಇಟ್ಟುಕೊಂಡು ಅಂತಹ ಕುಟುಂಬದಲ್ಲಿನ ಕೆಲವರನ್ನು ಕಿತ್ತೆಸೆಯುವ ಕಾರ್ಯ ಮಾಡುತ್ತಿದ್ದಾರೆ. ಮತದಾರರ ಪಟ್ಟಿಪರಿಷ್ಕರಣೆ ನೆಪ ಮಾಡಿಕೊಂಡು ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 15,000 ಮತಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಕೊಪ್ಪಳ ಜಿಲ್ಲಾದ್ಯಂತ ಬರುವ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮತಗಳನ್ನು ಡಿಲೀಟ್‌ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

Follow Us:
Download App:
  • android
  • ios