ಒಂದು ದೇಶ ಒಂದು ಚುನಾವಣೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದು ಅಸಾಧ್ಯ -ಡಿಕೆ ಶಿವಕುಮಾರ

ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಸಾಧ್ಯವಿಲ್ಲ. ಆಪರೇಷನ್‌ ಕಮಲದ ಮೂಲಕ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಒಂದು ದೇಶ, ಒಂದು ಚುನಾವಣೆ ಜಾರಿಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Karnataka dcm dk shivakumar reacts about one nation one election at bengaluru rav

ಬೆಂಗಳೂರು (ಸೆ.19): ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಸಾಧ್ಯವಿಲ್ಲ. ಆಪರೇಷನ್‌ ಕಮಲದ ಮೂಲಕ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಒಂದು ದೇಶ, ಒಂದು ಚುನಾವಣೆ ಜಾರಿಗೆ ಮುಂದಾಗಿರುವುದು ಹಾಸ್ಯಾಸ್ಪದ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಕುಮಾರಕೃಪ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳ ಬೆಳವಣಿಗೆಯನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಮುಂದಾಗಿದೆ. ಅನೇಕ ರಾಜ್ಯಗಳಲ್ಲಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಬಿಜೆಪಿಯೇ ಒಂದು ದೇಶ, ಒಂದು ಚುನಾವಣೆ ಜಾರಿಗೆ ತರುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ಈ ಕ್ರಮವನ್ನು ವಿರೋಧಿಸಿದ್ದು, ಅವರ ಅಭಿಪ್ರಾಯವೇ ನಮ್ಮ ನಿಲುವು ಎಂದರು.

'ಒಂದು ದೇಶ ಒಂದು ಚುನಾವಣೆ' ಒಕ್ಕೂಟ ವ್ಯವಸ್ಥೆ, ಪ್ರಜಾಪ್ರಭುತ್ವಕ್ಕೆ ಮಾರಕ: ಮಲ್ಲಿಕಾರ್ಜುನ ಖರ್ಗೆ

ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕ:

ದೇವೇಗೌಡರೇ ಒಕ್ಕಲಿಗರ ಸರ್ವೋಚ್ಚ ನಾಯಕ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ದೇವೇಗೌಡ ಅವರು ದೇಶದ ಪ್ರಧಾನಿಯಾಗಿದ್ದವರು. ಅವರು ಸರ್ವೋಚ್ಚ ನಾಯಕರಲ್ಲ ಎಂದು ಹೇಳಲು ಸಾಧ್ಯವೇ? ದೇವೇಗೌಡ ಅವರನ್ನು ಪ್ರಧಾನಿಯನ್ನಾಗಿ ಮಾಡಿದ್ದೇ ಕಾಂಗ್ರೆಸ್‌. ಅವರಿಗೆ ಬಿಜೆಪಿ ಯಾವುದೇ ಸ್ಥಾನ ನೀಡಲಿಲ್ಲ. ಬಿಜೆಪಿಗೆ ಅಧಿಕಾರ ನೀಡದಿದ್ದಾಗ ದೇವೇಗೌಡ ಅವರ ವಿರುದ್ಧ ಬಿ.ಎಸ್‌.ಯಡಿಯೂರಪ್ಪ, ಆರ್‌. ಅಶೋಕ್‌ ಏನೆಲ್ಲ ಮಾತನಾಡಿದ್ದರು ಎಂಬುದು ತಿಳಿದಿದೆ. ಸುಮ್ಮನೆ ಸಮಯಕ್ಕೆ ತಕ್ಕಂತೆ ಮಾತನಾಡಬಾರದು ಎಂದರು.

ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆಯಲ್ಲಿ ಬಂಧನಕ್ಕೊಳಗಾಗಿರುವ ಮುನಿರತ್ನ ವಿಚಾರವಾಗಿ ಒಕ್ಕಲಿಗ ನಾಯಕರ ನಿಯೋಗದ ಭೇಟಿ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ನಿಯೋಗವು ಭೇಟಿಗೆ ಸಮಯ ಕೇಳಿದ್ದು, ಗುರುವಾರ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.

ಒಂದು ದೇಶ ಒಂದು ಚುನಾವಣೆಗೆ ಮೋದಿ ಸರ್ಕಾರ ಅಸ್ತು: 2029ರಿಂದ ಏಕಕಾಲಕ್ಕೆ ಎಲೆಕ್ಷನ್‌?

ಮುನಿರತ್ನ ವಿರುದ್ಧ ಡಿ.ಕೆ. ಶಿವಕುಮಾರ್‌ ಮತ್ತು ಡಿ.ಕೆ. ಸುರೇಶ್‌ ಪಿತೂರಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಮುನಿರತ್ನ ಆಡಿರುವ ಮಾತನ್ನು ನಾವು ನೋಡಿದ್ದೇವೆ. ನಮ್ಮ ಸ್ವಾಮೀಜಿಗಳು ನೋಡಿದ್ದಾರೆ. ಇಲ್ಲಿ ನಿರ್ದೇಶಕರು, ನಿರ್ಮಾಪಕರು ಬಿಜೆಪಿಯವರ ಜತೆಯಲ್ಲೇ ಇದ್ದಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios