ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಘೋಷಿಸಿರುವ ಆರು ಗ್ಯಾರಂಟಿ ಯೋಜನೆಗಳು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಹಾಗೂ ಪೇ-ಸಿಎಂ ಸರ್ಕಾರದ ನಿದ್ದೆಗೆಡಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನುಡಿದಂತೆ ನಡೆಯಲಿದೆ.
ಬೆಂಗಳೂರು (ಮೇ.02): ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಘೋಷಿಸಿರುವ ಆರು ಗ್ಯಾರಂಟಿ ಯೋಜನೆಗಳು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಹಾಗೂ ಪೇ-ಸಿಎಂ ಸರ್ಕಾರದ ನಿದ್ದೆಗೆಡಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನುಡಿದಂತೆ ನಡೆಯಲಿದೆ. ಹೀಗಾಗಿ ಭ್ರಷ್ಟ ಬಿಜೆಪಿಯನ್ನು ಮನೆಗೆ ಕಳುಹಿಸಿ, ಕಾಂಗ್ರೆಸ್‌ಗೆ ಅಧಿಕಾರ ನೀಡಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಗ್ಯಾಸ್ ಸಿಲಿಂಡರ್’ ಯೋಜನೆ ಮೂಲಕ 500 ರು.ಗೆ ಸಿಲಿಂಡರ್ ನೀಡಿದ ದೇಶದ ಮೊದಲ ರಾಜ್ಯ ರಾಜಸ್ಥಾನ.
ರಾಜಸ್ಥಾನದಲ್ಲಿ 100 ಯುನಿಟ್ ವಿದ್ಯುತ್ತನ್ನು ಮನೆ ಬಳಕೆ ಹಾಗೂ 2 ಸಾವಿರ ಯುನಿಟ್ ಕೃಷಿ ಉದ್ದೇಶಕ್ಕೆ ಉಚಿತವಾಗಿ ನೀಡಲಾಗಿದ್ದು, ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ತನ್ನು ಉಚಿತವಾಗಿ ಪ್ರತಿ ತಿಂಗಳು ನೀಡಲಾಗುತ್ತದೆ. ಇಂತಹ ಆರು ಗ್ಯಾರಂಟಿ ಹಾಗೂ ಜನಪರ ಯೋಜನೆಗಳಿಗೆ ಜನರು ಗೆಲುವು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜಸ್ಥಾನದಲ್ಲಿ 1 ಕೋಟಿ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಉದ್ದೇಶದಿಂದ ಪಿಂಚಣಿ ನೀಡುತ್ತಿದ್ದು, ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಸಿಕ ಪಿಂಚಣಿಯನ್ನು ಅಗತ್ಯ ಫಲಾನುಭವಿಗಳಿಗೆ ನೀಡುವ ವಿಶ್ವಾಸವಿದೆ.
ಗ್ಯಾರಂಟಿ ಕಾರ್ಡ್ ಬೇಕಿಲ್ಲ, ಸಾಧನೆಯೇ ನಮಗೆ ರಿಪೋರ್ಟ್ ಕಾರ್ಡ್: ಬಿ.ಎಲ್.ಸಂತೋಷ್
ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಯೋಜನೆ ಮೂಲಕ ಬಡವರಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲಾಗಿದೆ ಎಂದರು. ಚಿರಂಜೀವಿ ಆರೋಗ್ಯ ವಿಮಾ ಯೋಜನೆ ಮೂಲಕ 25 ಲಕ್ಷ ರು. ಮೊತ್ತದ ಆರೋಗ್ಯ ವಿಮೆ ಹಾಗೂ 10 ಲಕ್ಷ ರು. ಅಪಘಾತ ವಿಮೆಯನ್ನು ಫಲಾನುಭವಿ ಕುಟುಂಬಗಳಿಗೆ ನೀಡಲಾಗಿದೆ. ಅದೇ ರೀತಿ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲೂ ಇಂತಹ ಹತ್ತು ಹಲವು ಜನಪರ ಕಾರ್ಯಕ್ರಮ ನೀಡಿದೆ. ಆದರೆ, ಬಿಜೆಪಿಯು 40% ಕಮಿಷನ್, ಪೇಸಿಎಂ ಭ್ರಷ್ಟಾಚಾರದ ಮೂಲಕ ಜನರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿದು, ಅನೈತಿಕ ಆಡಳಿತ ನಡೆಸಿದೆ ಎಂದು ದೂರಿದರು.
ಪ್ರಧಾನಿಯ ನಿಂದಿಸುವುದೇ ಕಾಂಗ್ರೆಸ್ ಸಾಧನೆ: ಸಚಿವ ಸುಧಾಕರ್
ಗೆಹ್ಲೋಟ್‌ರನ್ನು ರಾವಣ ಎಂದ ಸಚಿವ ಶೆಖಾವತ್ ವಿರುದ್ಧ ಎಫ್‌ಐಆರ್: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ರಾವಣ ಎಂದು ಕರೆದಿದ್ದಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶೆಖಾವತ್ ಅವರು ಅಪಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಸುರೇಂದ್ರ ಸಿಂಗ್ ಜಡಾವತ್ ದೂರು ನೀಡಿದ್ದು, ಇದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಗುರುವಾರ ನಡೆದ ಜನಾಕ್ರೋಶ ಸಭೆಯಲ್ಲಿ ಮಾತನಾಡಿದ ಶೆಖಾವತ್, ಗೆಹ್ಲೋಟ್ ರಾಜಸ್ಥಾನದ ರಾವಣ ಎಂದು ಹೇಳಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
