ರಾಜ್ಯ​ದಲ್ಲಿ ಬಿಜೆಪಿ ಸರ್ಕಾರ, ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ನಿಶ್ಚಿ​ತ: ಯಡಿಯೂರಪ್ಪ

ರಾಜ್ಯದಲ್ಲಿ ಬಿಜೆಪಿ 130 ಸ್ಥಾನಗಳನ್ನು ಗಳಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ. ಯಾವುದೇ ಕಾರಣಕ್ಕೂ ಜೆಡಿಎಸ್‌ ಜೊತೆ ಸಮ್ಮಿಶ್ರ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ನಿಕಟಪೂರ್ವ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Karnataka Election 2023 BJP government in Karnataka BY Vijayendras victory in Shikaripura is certain Says BS Yediyurappa gvd

ಶಿವಮೊಗ್ಗ (ಮೇ.11): ರಾಜ್ಯದಲ್ಲಿ ಬಿಜೆಪಿ 130 ಸ್ಥಾನಗಳನ್ನು ಗಳಿಸಿ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ. ಯಾವುದೇ ಕಾರಣಕ್ಕೂ ಜೆಡಿಎಸ್‌ ಜೊತೆ ಸಮ್ಮಿಶ್ರ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ನಿಕಟಪೂರ್ವ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾವು ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ. ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಸ್ವತಂತ್ರವಾಗಿ ಸರ್ಕಾರ ನಡೆಸುತ್ತವೆ. ರಾಜ್ಯದಲ್ಲಿ ಜೆಡಿಎಸ್‌ ಜೊತೆ ಸಮ್ಮಿಶ ಸರ್ಕಾರ ರಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳಿಂದ ನಾವು ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಈ ಬಾರಿ 125ರಿಂದ 130 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದ್ದೇವೆ. ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಇವರ ಆಸಕ್ತಿ ಮತ್ತು ಆಶೀರ್ವಾದಿಂದ ಹೆಚ್ಚಿನ ಸ್ಥಾನ ಗೆಲ್ಲಲಿದ್ದೇವೆ ಎಂದು ಭರವಸೆ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಮೊದಲ ಬಾರಿ ಸ್ಪರ್ಧೆ ಮಾಡಿರುವ ಬಿ.ವೈ. ವಿಜಯೇಂದ್ರ ಜನರ ಆಶೀರ್ವಾದಿಂದ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಇದರಲ್ಲಿ ಅನುಮಾನವೇ ಬೇಡ ಎಂದು ಹೇಳಿದರು.

 ರಾಜ್ಯದಲ್ಲಿ ಸ್ಥಿರ ಮತ್ತು ಬಹುಮತದ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ: ಸಿಎಂ ಬೊಮ್ಮಾಯಿ

ಶಿಕಾರಿಪುರದಲ್ಲಿ ಭಾರಿ ಅಂತರ ಗೆಲವು ನಿರೀಕ್ಷೆ: ಶಿಕಾರಿಪುರ ಕ್ಷೇತ್ರದಲ್ಲಿ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಸರ್ಕಾರ ರಚನೆ ಮಾಡುವ ಕಾಣುತ್ತಿರುವ ಕನಸು ಖಂಡಿತವಾಗಿಯೂ ನನಸಾಗಲ್ಲ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಜಿ.ಪಿ. ನಡ್ಡಾ ಮೊದಲಾದವರ ಪ್ರವಾಸದಿಂದ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದರು.

ಅನ್ಯ​ಪ​ಕ್ಷ​ಗಳ ನೆರ​ವಿ​ಲ್ಲದೇ ಬಿಜೆಪಿ ಸರ್ಕಾರ ರಚ​ನೆ: ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಆಡಳಿತ ಸೌಧದಲ್ಲಿನ 134ನೇ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ ನಂತರದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿದರು. ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ದಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ. 

ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ. ತಾಲೂಕಿನಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದರು. ಪ್ರಧಾನಿ ಮೋದಿ,ಅಮಿತ್‌ ಶಾ, ನಡ್ಡಾ ಅವರು ಹೆಚ್ಚು ಪ್ರಚಾರ ನಡೆಸಿದ್ದು, ಅವರಿಗೆ ರಾಜ್ಯದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಇವರೆಲ್ಲರ ಆಶೀರ್ವಾದದಿಂದ ಸರ್ಕಾರ ರಚನೆಗೆ ಅಗತ್ಯವಿರುವ ಸ್ಥಾನ ಪಡೆದು ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದು ತಿಳಿಸಿದರು.

ಸಂಸದ ರಾಘವೇಂದ್ರ ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಜಯಸಾಧಿಸಲಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಸಹೋದರ ವಿಜಯೇಂದ್ರ ಸ್ಪರ್ಧಿಸಿದ್ದು, ಈ ಹಿಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಗಳಿಸಿದ ಮತಕ್ಕಿಂತಲೂ ಹೆಚ್ಚಿನ ಅಂತರದಿಂದ ವಿಜಯೇಂದ್ರ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಜರಂಗ ದಳ ಮುಟ್ಟುವ ತಾಕತ್ತು ಯಾರಿಗಿದೆ?: ಸಿಎಂ ಬೊಮ್ಮಾಯಿ ಸವಾಲು

ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಸ್ಥಾನವನ್ನು ಸಹೋದರ ವಿಜಯೇಂದ್ರ ತುಂಬಲಿದ್ದು, ಯಡಿಯೂರಪ್ಪ ಅವರು ಚುನಾವಣಾ ರಾಜಕಾರಣದಿಂದ ದೂರ ಸರಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಈ ವಯಸ್ಸಿನಲ್ಲಿಯೂ ನಿತ್ಯ 5-6 ಸಭೆಗಳಲ್ಲಿ ಪಾಲ್ಗೊಳ್ಳುವ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ, ಬಿಜೆಪಿ ಸಂಘಟನೆಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ 123 ರಿಂದ 127 ಸ್ಥಾನಗಳಿಸಿ ಸ್ವಂತ ಬಲದಿಂದ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios