ಬಿಜೆಪಿ ಯಾವುದೇ ಧರ್ಮದ ವಿರೋಧಿ ಅಲ್ಲ: ಸಂಸದ ಮುನಿಸ್ವಾಮಿ
ಬಿಜೆಪಿ ಯಾವ ಧರ್ಮದ ವಿರೋಧಿಯಲ್ಲ. ಯಾರು ದೇಶ ವಿರೋಧಿಗಳು ಇದ್ದಾರೋ ಅವರು ಬಿಜೆಪಿಗೆ ವಿರೋಧಿಗಳು ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಟೇಕಲ್ (ಏ.30): ಬಿಜೆಪಿ ಯಾವ ಧರ್ಮದ ವಿರೋಧಿಯಲ್ಲ. ಯಾರು ದೇಶ ವಿರೋಧಿಗಳು ಇದ್ದಾರೋ ಅವರು ಬಿಜೆಪಿಗೆ ವಿರೋಧಿಗಳು ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ಅವರು ಟೇಕಲ್‌ನ ತೊರಲಕ್ಕಿ ಗ್ರಾಮದಲ್ಲಿ ವಿಧಾನಸಭಾ ಅಭ್ಯರ್ಥಿ ಬಿಜೆಪಿಯ ಮಂಜುನಾಥಗೌಡರ ಪರ ರೋಡ್‌ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡುತ್ತಿದ್ದರು. ನರೇಂದ್ರ ಮೋದಿರವರ ಸರ್ಕಾರವು ಉತ್ತಮ ಅಭಿವೃದ್ಧಿ ಕಾರ್ಯಗಳು ಮಾಡಿದ್ದು, ಮಾಲೂರು ತಾಲೂಕಿಗೆ 197 ಕೋಟಿ ರುಪಾಯಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರತಿ ಮನೆಗೆ ನಲ್ಲಿ ನೀರು, 27 ಸಾವಿರದ ಶೌಚಾಲಯಗಳು ನಿರ್ಮಾಣ, ಕಸ ವಿಲೇವಾರಿ ಘಟಕ, ವಾಹನಗಳು ನೀಡಿದೆ ಎಂದರು.
ಕ್ಷೇತ್ರಕ್ಕೆ ಶಾಸಕರ ಕೊಡುಗೆ ಏನು?: ಮಾಲೂರು ತಾಲೂಕಿನ ಬಹುತೇಕ ಗ್ರಾಮೀಣ ಸಂಪರ್ಕ ರಸ್ತೆಗಳು ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಲ್ಲಿ ನಿರ್ಮಾಣವಾಗಿವೆ. ನರೇಗಾದಡಿಚೆಕ್ ಡ್ಯಾಂ, ಸಿಮೆಂಟ್ ರಸ್ತೆಗಳನ್ನು ನಿರ್ಮಿಸಲಾಗಿದೆ. ಶಾಸಕ ಕೆ.ವೈ.ನಂಜೇಗೌಡರು ತಾಲೂಕಿಗೆ ಏನು ಮಾಡಿದರು ಎಂದು ಸಂಸದರು ಪ್ರಶ್ನೆ ಮಾಡಿದರು. ಶಾಸಕರು ಕ್ರಷರ್‌ಗಳನ್ನು ಮಾಡಿಕೊಂಡು ಭದ್ರಪಡಿಸಿಕೊಂಡಿದ್ದು. ಅಕ್ಕಿ, ಬೆಣ್ಣೆ, ತುಪ್ಪ, ಹಾಲನಲ್ಲಿ ಹಣ ಮಾಡಿದರು ಎಂದು ಆರೋಪಿಸಿದರು.
ಪಂಚರತ್ನ ಯೋಜನೆಗಳ ಅನುಷ್ಠಾನಕ್ಕೆ ಜೆಡಿಎಸ್ ಅಧಿಕಾರಕ್ಕೆ ಬರಬೇಕು: ಎಚ್.ಡಿ.ದೇವೇಗೌಡ
ಹೂಡಿ ವಿಜಯಕುಮಾರ್‌ರವರು ಸುಮ್ಮನೇ ತಾಲೂಕಿನಲ್ಲಿ ಜಾತಿಯ ವಿಷ ಬೀಜ ಬಿತ್ತುತ್ತಿದ್ದಾರೆ. ಈ ಬಾರಿ ಮಂಜುನಾಥಗೌಡರಿಗೆ ತಮ್ಮೆಲ್ಲರ ಮತ ನೀಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕೃಷ್ಣಾರೆಡ್ಡಿ, ಪುರ ನಾರಾಯಣಸ್ವಾಮಿ, ಅರಿದ್ರಾಮಂಜುನಾಥಗೌಡರು ಇನ್ನೂ ಅನೇಕ ಮಂದಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಮೋದಿ ಹೆಸರಿಂದಲೇ ವಿರೋಧಿಗಳಲ್ಲಿ ನಡುಕ: ಸರ್ವವ್ಯಾಪ್ತಿ, ಸರ್ವಸ್ಪರ್ಶಿಯಾಗಿ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಿರುವ ವಿಶ್ವವೇ ಮೆಚ್ಚುವ ನಾಯಕ ಪ್ರಧಾನಿ ಮೋದಿ ಹೆಸರೇ ವಿರೋಧಿಗಳಲ್ಲಿ ನಡುಕ ಹುಟ್ಟಿಸುತ್ತದೆ. ಕೋಲಾರಕ್ಕೆ ಅವರು ಬರುತ್ತಿರುವುದರಿಂದ ಇಲ್ಲಿನ ಪಕ್ಷದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದ್ದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸುನಾಮಿ ಅಪ್ಪಳಿಸಿ, ಭರ್ಜರಿ ಗೆಲುವು ದಾಖಲಿಸಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಂದಟ್ಟಿಸಮೀಪ ಏ.30ರ ಪ್ರಧಾನಿಯವರ ರಾರಯಲಿಯ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಮಾತನಾಡಿ, ಪ್ರಧಾನಿಗಳ ಪ್ರಚಾರದಿಂದ ಹಳೆ ಮೈಸೂರು ಜಿಲ್ಲೆಗಳಲ್ಲಿ ಬಿಜೆಪಿ ಮತ್ತಷ್ಟು ಹೆಚ್ಚಿನ ಸ್ಥಾನ ಗಳಿಸಲು ಸಹಕಾರಿಯಾಗಲಿದೆ. ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಹಾಗೂ ಮೋದಿ ನಾಮಬಲದಿಂದ ನಾನು ಸಂಸದನಾದೆ ಅದೇ ರೀತಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎಂದರು. ಏ.30ರಂದು ಬೆಳಗ್ಗೆ 9.30 ಗಂಟೆಗೆ ಮೋದಿ ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ದತೆ ನಡೆಸಲಾಗಿದೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಾಲಮನ್ನಾ: ನಿಖಿಲ್ ಕುಮಾರಸ್ವಾಮಿ
ರಾಜ್ಯದ ದೇವಮೂಲೆಯಾಗಿರುವ ಇಲ್ಲಿ ಸಮಾವೇಶ ನಡೆಯುತ್ತಿದ್ದು, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ ಸುಮಾರು 2.5 ಲಕ್ಷ ಮಂದಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು. ಕಳೆದ ಒಂದು ವಾರದಿಂದ ಸುಮಾರು 150 ಎಕರೆ ಪ್ರದೇಶದಲ್ಲಿ ಸಿದ್ಧತೆಗಳನ್ನು ನಡೆಸಿದ್ದು, ಮೂರು ಹೆಲಿಪ್ಯಾಡ್ ಸಿದ್ದವಾಗುತ್ತಿದೆ. ಮಳೆ, ಬಿಸಿಲಿನಿಂದ ರಕ್ಷಣೆಗೆ ಸುಸಜ್ಜಿತ ಪೆಂಡಾಲ್ ಹಾಕಲಾಗುತ್ತಿದ್ದು, 10ಕ್ಕೂ ಹೆಚ್ಚು ಜೆಸಿಬಿಗಳು, ಐದು ಕ್ರೈನ್‌ಗಳು ಸಿದ್ದತಾ ಕಾರ್ಯದಲ್ಲಿ ಬಳಕೆಯಾಗುತ್ತಿವೆ ಎಂದರು.