ಬಿಜೆಪಿಗೆ ಮತ್ತೆ ಅಧಿಕಾರ ಖಚಿತ: ಬಿ.ಎಲ್‌.ಸಂತೋಷ್‌ ಭವಿಷ್ಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದರಲ್ಲಿ ಸಂಶಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭವಿಷ್ಯ ನುಡಿದಿದ್ದಾರೆ. 

Karnataka Election 2023 BJP is sure of Power Again Says BL Santosh gvd

ಬೊಮ್ಮನಹಳ್ಳಿ (ಏ.07): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರುವುದರಲ್ಲಿ ಸಂಶಯವಿಲ್ಲ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭವಿಷ್ಯ ನುಡಿದಿದ್ದಾರೆ. ಬಿಟಿಎಂ ವಿಧಾನಸಭಾ ಕ್ಷೇತ್ರದ ಕೋರಮಂಗಲ ವಾರ್ಡ್‌ನ ಶ್ರೀನಿವಾಗಿಲುನಲ್ಲಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಭಾರಿ ಚುನಾವಣೆಯಲ್ಲಿ ಬಿಜೆಪಿ 125ರಿಂದ 135 ಸ್ಥಾನ ಗೆದ್ದು, ಮತ್ತೆ ಸರ್ಕಾರ ರಚಿಸಲಿದೆ ಎಂದರು. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿಂದೇಟು ಹಾಕುತ್ತಿದ್ದು, ಈಗಾಗಲೇ ಆಯ್ಕೆ ಮಾಡಿರುವ ಅಭ್ಯರ್ಥಿಗಳನ್ನು ನೋಡಿದರೆ, ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ಸುಲಭವಾಗಲಿದೆ. 

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹಾಗೂ ರಾಜ್ಯದ ಉತ್ತಮ ಆಡಳಿತ ಬಿಜೆಪಿಗೆ ವರದಾನವಾಗಲಿದೆ. ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಈ ಭಾರಿ ಬಿಜೆಪಿ ಗೆಲುವು ಖಚಿತ ಎಂದರು. ಹಾಲಿ ಶಾಸಕರಾದ ರಾಮಲಿಂಗಾರೆಡ್ಡಿ ಅವರ ದುರಾಡಳಿತ ಹಾಗೂ ಈ ಭಾರಿ ಬಿಜೆಪಿಯಲ್ಲಿ ಬಿಟಿಎಂನಲ್ಲಿ ಕಮಲ ಅರಳಿಸಲೇಬೇಕೆಂಬ ಕಾರ‍್ಯಕರ್ತರ ಉತ್ಸಾಹವೇ ಮುಂದಿನ ಗೆಲುವಿನ ಸೋಪಾನವಾಗಲಿದೆ. ಬಿಟಿಎಂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದರಿಂದ ಪಕ್ಕದಲ್ಲಿಯೇ ಇರುವ ಜಯನಗರ, ಆನೇಕಲ್‌ಗೆ ಸೇರಿದಂತೆ ಇತರೇ ಕ್ಷೇತ್ರಗಳಲ್ಲಿ ಬಿಜೆಪಿ ಬಾವುಟ ಹಾರಿಸಲು ಸಾಧ್ಯವಾಗಲಿದೆ. 

'ಮೋದಿ, ನಿನ್ನ ಗೋರಿ ತೋಡ್ತೇವೆ ಅಂತಾರೆ: ಬಿಜೆಪಿ ಯಶಸ್ಸಿನಿಂದ ಕಾಂಗ್ರೆಸ್‌ ತೀವ್ರ ಹತಾಶ

ಆದುದರಿಂದ ಕಾರ್ಯಕರ್ತರು ಬಿಟಿಎಂ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಶ್ರಮವಸಿ ಎಂದು ಕಿಮಾತು ಹೇಳಿದರು. ಇದೇ ವೇಳೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ಸಿಗರು ಈಗಾಗಲೇ ನಿಸ್ಸಾಹಯಕರಾಗಿದ್ದಾರೆ. ಆದ್ದರಿಂದಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿಬಿಡುಗಡೆಗೆ ಮೀನಾಮೇಷ ಎಣಿಸುತ್ತಿದೆ. ಜೆಡಿಎಸ್‌ ಪಕ್ಷ ಕೇವಲ 3-4 ಕುಟುಂಬ ಸದಸ್ಯರು ಕುಳಿತರೇ ಪಟ್ಟಿಬಿಡುಗಡೆಯಾಗುತ್ತೆ. ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅತೀ ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿ, ಗೆಲ್ಲುವ ಕುದುರೆಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದರು.

ರಾಜ್ಯದ ಒಳಮೀಸಲಾತಿಯಿಂದ ದೇಶದಲ್ಲಿ ದೊಡ್ಡ ಬದಲಾವಣೆ: ಸಿಎಂ ಬೊಮ್ಮಾಯಿ

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷವನ್ನು ತೊರೆದು ಸುದ್ದುಗುಂಟೆಪಾಳ್ಯದ ಪ್ರಬಲ ಕಾಂಗ್ರೆಸ್‌ ಮುಖಂಡ ಕೋದಂಡರಾಮ ಹಾಗೂ ಅವರೊಂದಿಗೆ 500ಕ್ಕೂ ಹೆಚ್ಚು ಕಾರ್ಯಕರ್ತರು ಬಿ.ಎಲ್‌.ಸಂತೋಷ್‌ ಅಧ್ಯಕ್ಷತೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಗೋಪಿನಾಥ ರೆಡ್ಡಿ, ಬೆಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ಎನ್‌.ಆರ್‌.ರಮೇಶ್‌, ಬಿಟಿಎಂ ವಿಧಾನಸಭಾ ಕ್ಷೇತ್ರ ಪ್ರಬಲ ಟಿಕೆಟ್‌ ಆಕಾಂಕ್ಷಿ ಶ್ರೀಧರ್‌ ರೆಡ್ಡಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಸರಸ್ವತಮ್ಮ, ಸರಳಾ ಮಹೇಶ್‌, ದೇವದಾಸ್‌, ಮಂಡಲಾಧ್ಯಕ್ಷ ರಾಜೇಂದ್ರ, ಬಿಟಿಎಂ ಹಿರಿಯ ಮುಖಂಡ ಎಚ್‌.ಕೆ.ಮುತ್ತಪ್ಪ ಭಾಗವಹಿಸಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios