ಡಿಕೆಶಿ ಯಾವ ಜಾತಿ ಮೀಸಲಾತಿ ಕಡಿಮೆ ಮಾಡ್ತಾರೆ?: ಜೆ.ಪಿ.ನಡ್ಡಾ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ರದ್ದು ಮಾಡಲಾಗುವುದು ಎಂದು ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಯಾವ ಜಾತಿಯ ಮೀಸಲಾತಿ ಕಡಿಮೆ ಮಾಡಲು ಹೊರಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಬೀದರ್ (ಏ.22): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ರದ್ದು ಮಾಡಲಾಗುವುದು ಎಂದು ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಯಾವ ಜಾತಿಯ ಮೀಸಲಾತಿ ಕಡಿಮೆ ಮಾಡಲು ಹೊರಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಪ್ರಬುದ್ಧರ ಸಭೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಳ ಮೀಸಲಾತಿ ಜಾರಿಗೆ ತರುವ ಮೂಲಕ ತುಳಿತಕ್ಕೊಳಗಾದವರಿಗೆ ನ್ಯಾಯ ಒದಗಿಸಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ರದ್ದು ಮಾಡಲಾಗುವುದು ಎನ್ನುತ್ತಿದ್ದಾರೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಅಭಿವೃದ್ಧಿ ವಿರೋಧಿಯಾಗಿದೆ. ಕಾಂಗ್ರೆಸ್ ತಮ್ಮ ಅಧಿಕಾರ ಅವಧಿಯಲ್ಲಿ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ತಡೆ ಹಿಡಿದಿತ್ತು. ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ತಡೆ ಹಿಡಿದಿದ್ದರು. ಈ ಕಾಮಗಾರಿಯನ್ನು ಬಿಜೆಪಿ ಸರ್ಕಾರ ಬಂದ ನಂತರ ಮುಂದುವರಿಸಲಾಯಿತು. ಕಾಂಗ್ರೆಸ್ ದೇಶದಲ್ಲಿ ಭಾಷೆ, ಪ್ರಾಂತ್ಯದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಿದೆ. ಬಿಜೆಪಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ನೀತಿ ಮೇಲೆ ನಡೆದು ದೇಶದ ಸರ್ವಾಂಗೀಣ ಅಭಿವೃದ್ಧಿ ಮಾಡಿದೆ ಎಂದರು. ಇದೇ ವೇಳೆ ನಡ್ಡಾ ಅವರು ಬೀದರ್‌ನಲ್ಲಿ ರೋಡ್‌ಶೋ ನಡೆಸಿದರು.
ಲಿಂಗಾಯತ ಡ್ಯಾಂ ಒಡೆವ ಭ್ರಮೆಯಲ್ಲಿ ಡಿಕೆಶಿ: ಸಿಎಂ ಬೊಮ್ಮಾಯಿ ಟಾಂಗ್
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಬಸವರಾಜ ಬೊಮ್ಮಾಯಿ ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿ ಗೆಲುವು ನಿಶ್ಚಿತ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು. ಶಿಗ್ಗಾಂವಿಯಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಿದ್ದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ ಹರಿಯುವಂತಾಗಲು ಕಮಲದ ಚಿಹ್ನೆಗೆ ಮತ ಕೊಡಬೇಕು ಎಂದು ಮನವಿ ಮಾಡಿದರು.
ಕರ್ನಾಟಕದಲ್ಲಿ ವಿಕಾಸದ ಸ್ಥಿರತೆ ಇರಬೇಕು ಎಂಬುದು ಚುನಾವಣೆಯ ವಿಷಯ. ಮೋದಿಜಿ ಆಶೀರ್ವಾದ ಮುಂದುವರಿಯಲು ಮತ್ತು ಅಭಿವೃದ್ಧಿ ಮುಂದುವರಿಸಲು ಬಿಜೆಪಿಯನ್ನೇ ಗೆಲ್ಲಿಸಿ ಎಂದು ವಿನಂತಿಸಿದರು. ಕಾಂಗ್ರೆಸ್ ಎಂದರೆ ಕಮಿಷನ್, ಭ್ರಷ್ಟಾಚಾರ, ಅಪರಾಧೀಕರಣದ ಪಕ್ಷ. ಕಾಂಗ್ರೆಸ್ ಮುಖಂಡರು ನೇತಾರರಾಗಿ ಉಳಿದಿಲ್ಲ. ಅವರು ಎಟಿಎಂ ಚಲಾಯಿಸುವ ವ್ಯಕ್ತಿಗಳಾಗಿದ್ದಾರೆ. ಮೋದಿ ಕಳುಹಿಸಿದ ಅಭಿವೃದ್ಧಿಗೆ ಸಂಬಂಧಿಸಿದ ಹಣವನ್ನು ದೆಹಲಿ ಕಾಂಗ್ರೆಸ್ಸಿಗೆ ವರ್ಗಾಯಿಸುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೇಕೇ? ಎಂದು ಪ್ರಶ್ನಿಸಿದ ಅವರು, ಕರ್ನಾಟಕಕ್ಕೆ ಮೋದಿಜಿ ಕಳುಹಿಸಿದ ಹಣ ಸಮರ್ಪಕವಾಗಿ ಬಳಕೆಯಾಗಲು ಇಲ್ಲಿ ಅಭಿವೃದ್ಧಿ ಕಾರ್ಯ ನಿರಂತರವಾಗಿ ನಡೆಯಲು ಕಮಲದ ಚಿಹ್ನೆ ಬೆಂಬಲಿಸಿ ಎಂದು ಕೋರಿದರು.
ಈಶ್ವರಪ್ಪಗೆ ಮೋದಿ ಕರೆ ನಾಚಿಕೆಗೇಡು: ರಣದೀಪ್ ಸಿಂಗ್ ಸುರ್ಜೇವಾಲಾ
ರಸ್ತೆಗಳ ನಿರ್ಮಾಣ, ಅಭಿವೃದ್ಧಿ, ತುಮಕೂರಿನಲ್ಲಿ ಹೆಲಿಕಾಪ್ಟರ್ ನಿರ್ಮಾಣದ ಕೈಗಾರಿಕೆ ಆರಂಭಿಸಲಾಗಿದೆ. ವಿಮಾನ ನಿಲ್ದಾಣಗಳ ನಿರ್ಮಾಣ, ವಂದೇ ಭಾರತ್ ರೈಲುಗಳ ಆರಂಭಕ್ಕೆ ಕಮಲದ ಚಿಹ್ನೆಗೆ ಮತ ಕೊಡಿ ಎಂದು ಹೇಳಿದರು. ಇದಕ್ಕೂ ಮೊದಲು ಶಿಗ್ಗಾಂವಿಯಲ್ಲಿ ಸಿಎಂ ಬಸರಾಜ ಬೊಮ್ಮಾಯಿಯೊಂದಿಗೆ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಿತ್ರನಟ ಕಿಚ್ಚ ಸುದೀಪ್, ಸಚಿವರಾದ ಬಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಬಿ.ಸಿ. ಪಾಟೀಲ, ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.