ಜಗದೀಶ್‌ ಶೆಟ್ಟರ್‌ ಪರಿಸ್ಥಿತಿ ನೋಡಿದರೆ ಅಯ್ಯೋ ಅನಿಸುತ್ತೆ: ಈಶ್ವರಪ್ಪ

ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. 
 

Karnataka Election 2023 BJP Leader KS Eshwarappa Slams On Jagadish Shettar gvd

ಹುಬ್ಬಳ್ಳಿ (ಮೇ.06): ಒಂದು ಟಿಕೆಟ್‌ಗಾಗಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ವಾಭಿಮಾನವನ್ನು ಮಾರಿಕೊಂಡಿದ್ದಾರೆ. ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ. ಆರ್‌ಎಸ್‌ಎಸ್‌, ಬಜರಂಗದಳ, ಹಿಂದೂ ಧರ್ಮದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್‌ ಅವರ ಸ್ವಾಭಿಮಾನವನ್ನು ನಾನು ನಿರೀಕ್ಷೆ ಮಾಡಿದ್ದೆ. ಬಜರಂಗದಳ ನಿಷೇಧದ ಕುರಿತು ಅವರ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಆಗ್ರಹಿಸಿದರು. ಬಜರಂಗದಳ ರಾಷ್ಟ್ರ, ಧರ್ಮ ರಕ್ಷಣೆ ಮಾಡುತ್ತಿದೆ. 

ಯಾವುದೇ ಸಾಮಾನ್ಯ ಜ್ಞಾನ ಇಲ್ಲದೆ ಕಾಂಗ್ರೆಸ್‌ನವರು ಪ್ರಣಾಳಿಕೆ ಸಿದ್ಧಪಡಿಸಿ, ಅದರಲ್ಲಿ ಬಜರಂಗ ದಳ ನಿಷೇಧದ ವಿಷಯ ಸೇರಿಸಿದ್ದಾರೆ. ಕಾಂಗ್ರೆಸ್‌ನವರು ಈ ಪ್ರಣಾಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಆಗ್ರಹಿಸಿದರು. ಮುಸಲ್ಮಾರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್‌ ಕೆಲಸ. ಬಜರಂಗ ದಳ ನಿಷೇಧಿಸುವ ವಿಚಾರದಲ್ಲಿ ಅವರದ್ದೇ ಆದ ಗೊಂದಲ ಇದೆ. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಜಾತಿವಾದಿಗಳಾಗಿದ್ದು, ಡಿ.ಕೆ.ಶಿವಕುಮಾರ್‌ ತಮ್ಮ ಹೆಸರನ್ನು ಕೆಡಿ ಶಿವಕುಮಾರ್‌ ಎಂದು ಇಟ್ಟುಕೊಳ್ಳಲಿ ಎಂದು ಹೇಳಿದರು.

ಮೋದಿ ಗುಜರಾತ್‌ ಮಣ್ಣಿನ ಮಗ, ನಾನು ಕರ್ನಾಟಕದ ಮಣ್ಣಿನ ಮಗ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್‌ ಪ್ರಣಾಳಿಕೆ ವಾಪಸ್‌ ಪಡೆಯಲಿ: ಬಜರಂಗದಳ ರಾಷ್ಟ್ರ, ಧರ್ಮ ರಕ್ಷಣೆ ಮಾಡುತ್ತಿದೆ. ಯಾವುದೇ ಸಾಮಾನ್ಯ ಜ್ಞಾನ ಇಲ್ಲದೆ ಕಾಂಗ್ರೆಸ್‌ನವರು ಪ್ರಣಾಳಿಕೆ ಸಿದ್ಧಪಡಿಸಿ, ಅದರಲ್ಲಿ ಬಜರಂಗ ದಳ ನಿಷೇಧದ ವಿಷಯ ಸೇರಿಸಿದ್ದಾರೆ. ಕಾಂಗ್ರೆಸ್‌ನವರು ಈ ಪ್ರಣಾಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. ಇದೇ ವೇಳೆ ಬಜರಂಗ ದಳ ನಿಷೇಧಕ್ಕೆ ಸಂಬಂಧ ಪಟ್ಟಂತೆ ಜಗದೀಶ ಶೆಟ್ಟರ್‌ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸವಾಲೆಸೆದಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ಸಂಘಟನೆ ನಿಷೇಧಿಸುತ್ತೇವೆ ಎಂದರೆ ಅಂತಹ ನೂರು ಪ್ರಣಾಳಿಕೆಗಳನ್ನು ಬೇಕಾದರೂ ಸುಡುತ್ತೇನೆ. ಧರ್ಮ, ದೇಶ ಉಳಿಯಬೇಕು ಎಂಬುದು ನನ್ನ ಆಸೆ ಎಂದರು.

ನಮ್ಮ ಸರ್ಕಾರ ಈಗಾಗಲೇ ನಿಷೇಧಿಸಿರುವ ಪಿಎಫ್‌ಐ ಸಂಘಟನೆಯನ್ನು ಮತ್ತೆ ನಿಷೇಧಿಸುತ್ತೇವೆ ಎನ್ನುತ್ತಿದ್ದಾರೆ. ಬರಿ ಬಜರಂಗದಳದ ಹೆಸರು ಹೇಳುವ ಧೈರ್ಯ ಅವರಿಗಿಲ್ಲ. ಅದಕ್ಕಾಗಿ ಪಿಎಫ್‌ಐ ಹೆಸರು ಸೇರಿಸಿಕೊಂಡಿದ್ದಾರೆ. ಅವರು ಹೇಡಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಜರಂಗದಳದಲ್ಲಿ ರಾಷ್ಟ್ರೀಯವಾದಿಗಳಿದ್ದಾರೆ. ಅವರು ಸುಮ್ಮನೇ ಕುಳಿತಿಲ್ಲ. ಕಾಂಗ್ರೆಸ್‌ ನಿಲುವು ಖಂಡಿಸಿ ಹನುಮಾನ್‌ ಚಾಲೀಸಾ ಪಠಣ ಮಾಡಿ ಶಾಂತಿಯುತವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಮುಂದಿನ ದಿನಗಲ್ಲಿ ಏನಾಗುತ್ತದೆ ನೋಡಿ ಎಂದರು. ಬಾಲಕ್ಕೆ ಬೆಂಕಿ ಇಟ್ಟರಾವಣನ ರಾಜ್ಯ ಲಂಕೆಯನ್ನು ಆಂಜನೇಯ ಸುಟ್ಟ. ರಾಜ್ಯದಲ್ಲಿ ಕಾಂಗ್ರೆಸ್‌ನವರು ಬಜರಂಗದಳ ನಿಷೇಧದ ಹೆಸರಿನಲ್ಲಿ ಬೆಂಕಿ ಹಚ್ಚಿದ್ದಾರೆ. ರಾಜ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ. ವಿರೋಧ ಪಕ್ಷದ ಸ್ಥಾನವೂ ಸಿಗುವುದಿಲ್ಲ ಎಂದು ಹೇಳಿದರು.

ಜೆಡಿಎಸ್‌ ಅಧಿಕಾರಕ್ಕೆ ತಂದು ಕಣ್ಮುಚ್ಚುವ ಆಸೆ: ದೇವೇಗೌಡರ ಭಾವನಾತ್ಮಕ ಮಾತು

ಕಾಂಗ್ರೆಸ್‌ ಹಿಂದೂ ಸಮಾಜವನ್ನು ಅಪಮಾನ ಮಾಡುತ್ತಾ ಮುಸ್ಲಿಮರನ್ನು ತೃಪ್ತಿಪಡಿಸಲು ಪ್ರಯತ್ನಿಸುತ್ತಿದೆ. ಬಿಜೆಪಿಯನ್ನು ಕೋಮುವಾದಿ ಪಕ್ಷ ಎಂದು ಟೀಕಿಸಿ, ನೇರವಾಗಿ ಜಾತಿವಾದಕ್ಕೆ ಬೆಂಬಲ ಕೊಡುವುದು ಕಾಂಗ್ರೆಸ್‌ನ ನೀತಿಯಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ವಿಷಯವನ್ನು ಏಕೆ ಸೇರಿಸಿದರು, ಯಾರು ಇದರ ಹಿಂದೆ ಇದ್ದಾರೆ ಎಂಬ ಬಗ್ಗೆ ಅವರ ಪಕ್ಷದಲ್ಲೇ ಗೊಂದಲ ಇದೆ ಎಂದು ಹೇಳಿದರು. ಯಾವುದೇ ಸ್ವಾಭಿಮಾನಿ ವ್ಯಕ್ತಿ ಬಜರಂಗದಳವನ್ನು ಈವರೆಗೂ ಟೀಕೆ ಮಾಡಿಲ್ಲ. ದೇಶ ರಕ್ಷಣೆ ಮಾಡುವ, ರಾಷ್ಟ್ರಭಕ್ತಿ ಹೊಂದಿರುವ ಯುವಕರ ಪಡೆ ಆ ಸಂಘಟನೆಯಲ್ಲಿದೆ. ದೇಶದ ಸಂಸ್ಕೃತಿಗೆ ಧಕ್ಕೆ ತಂದರೆ ಅದರ ವಿರುದ್ಧ ಅವರು ನೇರವಾಗಿ ಹೋರಾಟಕ್ಕೆ ಇಳಿಯುತ್ತಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

Latest Videos
Follow Us:
Download App:
  • android
  • ios