ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕವು 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಪಟ್ಟಿಸಿದ್ಧಪಡಿಸಿದ್ದು, ಗುರುವಾರ ಈ ಪಟ್ಟಿ ಹೈಕಮಾಂಡ್‌ಗೆ ರವಾನಿಸಲಿದೆ. 

ಬೆಂಗಳೂರು (ಏ.06): ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕವು 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂವರು ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳ ಪಟ್ಟಿಸಿದ್ಧಪಡಿಸಿದ್ದು, ಗುರುವಾರ ಈ ಪಟ್ಟಿ ಹೈಕಮಾಂಡ್‌ಗೆ ರವಾನಿಸಲಿದೆ. ಬುಧವಾರ ತಡರಾತ್ರಿವರೆಗೆ ನಗರದ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯು ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಗಳನ್ನು ಪರಿಶೀಲಿಸಿ ಪಟ್ಟಿಅಖೈರುಗೊಳಿಸಿತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳವಾರ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಅಂತಿಮಗೊಳಿಸಿತ್ತು. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು ಎಂದು ತಿಳಿದು ಬಂದಿದೆ. ಬಹುತೇಕ ಶನಿವಾರ ಅಥವಾ ಭಾನುವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಅಖೈರುಗೊಳಿಸಿ ಬಿಡುಗಡೆಗೊಳಿಸುವ ನಿರೀಕ್ಷೆಯಿದೆ. 

ಚಿತ್ರ ನಟರ ಮುಖ ತೋರಿಸಿ ಬಿಜೆಪಿ ಮತಭಿಕ್ಷೆ: ಎಚ್‌.ಡಿ.ಕುಮಾರಸ್ವಾಮಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಗೋವಿಂದ ಕಾರಜೋಳ ಮತ್ತಿತರ ನಾಯಕರು ಎರಡು ದಿನಗಳ ಕಾಲ ಸತತವಾಗಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶೋಧಿಸಿದರು. ಈಗಾಗಲೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಸ್ಥಳೀಯ ಮುಖಂಡರ ಹಾಗೂ ಜಿಲ್ಲಾ ಕೋರ್‌ ಕಮಿಟಿಗಳ ಸದಸ್ಯರ ಅಭಿಪ್ರಾಯ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಆ ಮಾಹಿತಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಮಟ್ಟದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.

ಬೆಂಬಲಿಗರ ಟಿಕೆಟ್‌, ನಾಳೆ ಸಿಎಂ ದಿಲ್ಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ಶನಿವಾರ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಂಸದೀಯ ಮಂಡಳಿ ಸಭೆ ನಡೆಯುವ ಸಾಧ್ಯತೆ ಇರುವುದರಿಂದ ತಮ್ಮ ಬೆಂಬಲಿಗರಿಗೆ ಟಿಕೆಟ್‌ ಖಾತ್ರಿಪಡಿಸಿಕೊಳ್ಳುವ ಸಂಬಂಧ ಬೊಮ್ಮಾಯಿ ಅವರು ವರಿಷ್ಠರ ಜತೆ ಮಾತುಕತೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಮೋದಿ, ಸಿಎಂ ಕಾರ್ಯ ಮೆಚ್ಚಿ ಸುದೀಪ್‌ ಪ್ರಚಾರಕ್ಕೆ ಒಪ್ಪಿದ್ದಾರೆ: ಸಚಿವ ಸುಧಾಕರ್

ಮೊದಲ ಪಟ್ಟಿ ಸಿದ್ಧ
- ಮಂಗಳವಾರ 102 ವಿಧಾನಸಭಾ ಕ್ಷೇತ್ರದ ಸ್ಪರ್ಧಿಗಳ ಪಟ್ಟಿಸಿದ್ಧಪಡಿಸಿದ್ದ ಬಿಜೆಪಿ
- ಬುಧವಾರ 122 ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರು ಅಂತಿಮ: ಪಕ್ಷದ ಮೂಲಗಳು
- ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆದ ಆಕಾಂಕ್ಷಿಗಳ ಪಟ್ಟಿಸಿದ್ಧಪಡಿಸಿರುವ ಬಿಜೆಪಿ
- ಶನಿವಾರ/ಭಾನುವಾರ ಸಂಸದೀಯ ಮಂಡಳಿ ಸಭೆ: ಮೊದಲ ಪಟ್ಟಿ ಬಿಡುಗಡೆ?