Asianet Suvarna News Asianet Suvarna News

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ನಳಿನ್‌ ಕುಮಾರ್ ಕಟೀಲ್‌

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು. 

Karnataka Election 2023 BJP will come to power again Says Nalin Kumar Kateel gvd
Author
First Published Apr 20, 2023, 1:15 PM IST

ಸಿಂಧನೂರು (ಏ.20): ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊರವಲಯದಲ್ಲಿರುವ ಯಲಮಂಚಾಲಿ ವಾಸುದೇವರಾವ್‌ ಕಮ್ಮವಾರಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ವಿಶೇಷವಾಗಿ ರಾಯಚೂರು ಜಿಲ್ಲೆಗೆ ಏಮ್ಸ್‌ ಮಾದರಿ ಆಸ್ಪತ್ರೆ ನೀಡಲಾಗಿದೆ. ಒಳ ಪಂಗಡದ ಮೀಸಲಾತಿ ಜಾರಿ ಮತ್ತು ಪರಿಶಿಷ್ಟಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಮಾಡಲಾಗಿದೆ. 

ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಗತ್ತಿನ ನಾಯಕ ಎಂದು ಎಲ್ಲ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದರು. ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ದೇವದುರ್ಗ ತಾಲ್ಲೂಕಿಗೆ ರು.5 ಸಾವಿರ ಕೋಟಿ ಅನುದಾನ ತಂದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು, 55 ಸಾವಿರ ಆಶ್ರಯ ಮನೆಗಳನ್ನು ಕಟ್ಟಿಸಲಾಗಿದೆ. ಅದರಂತೆ ಕೆ.ಕರಿಯಪ್ಪ ಅವರನ್ನು ಗೆಲ್ಲಿಸಿದರೆ ಸಿಂಧನೂರು ತಾಲೂಕಿಗೂ ಪ್ರತಿ ವರ್ಷ ರು.500 ಕೋಟಿ ಅನುದಾನ ಪಡೆದು ಆಸ್ಪತ್ರೆ ನವೀಕರಣ, ಸರ್ವಋುತು ರಸ್ತೆ, ಶುದ್ಧ ಕುಡಿಯುವ ನೀರು, ನವಲಿ ಜಲಾಶಯಕ್ಕೆ ಕಾಯಕಲ್ಪ ಸೇರಿದಂತೆ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಕನ​ಕ​ಪು​ರ​ದ ಜನರಿಗೆ ಸ್ವಾತಂತ್ರ್ಯ ಸಿಗಬೇಕಿದೆ: ಸಚಿವ ಅಶ್ವತ್ಥ ನಾರಾ​ಯಣ

ಬಿಜೆಪಿ ಪಕ್ಷದ ಅಭ್ಯರ್ಥಿ ಕೆ.ಕರಿಯಪ್ಪ ಮಾತನಾಡಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳಿಗೆ ಹಲವಾರು ಬಾರಿ ಅವಕಾಶ ಕೊಟ್ಟಿದ್ದೀರಿ. ಆದರೆ, ಅವರಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಹೀಗಾಗಿ ತಮಗೆ ಒಂದು ಬಾರಿ ಅವಕಾಶ ಕೊಡಿ ಎಂದು ಕೋರಿದರು. ಕೆಪೆಕ್‌ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ರಾಯಚೂರು ಲೋಕಸಭಾ ಸಂಸದ ರಾಜಾಅಮರೇಶ್ವರ ನಾಯಕ ಸೇರಿ ಅನೇ​ಕ​ರಿ​ದ್ದ​ರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಮೋದಿ, ಶಾ, ಯೋಗಿ ಬಿಜೆಪಿ ಸ್ಟಾರ್‌ ಪ್ರಚಾರಕರು: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಸಚಿವರಾದ ಅಮಿತ್‌ ಶಾ, ನಿತಿನ್‌ ಗಡ್ಕರಿ, ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ರಾಜ್ಯ ವಿಧಾನಸಭೆಯಲ್ಲಿ ಪ್ರಚಾರ ನಡೆಸಲಿರುವ 40 ಮಂದಿ ಸ್ಟಾರ್‌ ಪ್ರಚಾರಕರ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

ಶಿವಮೊಗ್ಗದಲ್ಲಿ ಚನ್ನಬಸಪ್ಪ ಗೆಲುವಿಗೆ ಶ್ರಮಿಸುವೆ: ಕೆ.ಎಸ್‌.ಈಶ್ವರಪ್ಪ

ಪಟ್ಟಿ ಹೀಗಿದೆ: ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಬಿ.ಎಸ್‌.ಯಡಿಯೂರಪ್ಪ, ನಳಿನ್‌ಕುಮಾರ್‌ ಕಟೀಲ್‌, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್‌ ಜೋಶಿ, ಡಿ.ವಿ.ಸದಾನಂದಗೌಡ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌.ಅಶೋಕ್‌, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌, ಮನ್ಸುಖ್‌ ಮಾಂಡವಿಯ, ಕೆ.ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ.ಅರುಣಾ, ಸಿ.ಟಿ.ರವಿ, ಯೋಗಿ ಆದಿತ್ಯನಾಥ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ಹಿಮಂಬಿಸ್ವ ಶರ್ಮ, ದೇವೇಂದ್ರ ಫಡ್ನವೀಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ್‌ ಖೂಬ, ಅರವಿಂದ್‌ ಲಿಂಬಾವಳಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಡಾ.ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್‌.ರವಿಕುಮಾರ್‌, ಜಿ.ವಿ.ರಾಜೇಶ್‌, ಜಗ್ಗೇಶ್‌, ಶ್ರುತಿ ಹಾಗೂ ತಾರಾ ಅನುರಾಧ.

Follow Us:
Download App:
  • android
  • ios