ದೇವರು ಮೆಚ್ಚುವ ಹಾಗೆ ಸೋಮಣ್ಣ ಗೆಲುವಿಗೆ ಶ್ರಮಿಸುವೆ: ಬಿ.ವೈ.ವಿಜಯೇಂದ್ರ
ವರುಣದಲ್ಲಿ ಪ್ರಾಮಾಣಿಕವಾಗಿ, ದೇವರು ಮೆಚ್ಚುವ ರೀತಿಯಲ್ಲಿ ಚುನಾವಣಾ ಕೆಲಸ ಮಾಡುತ್ತೇನೆ. ಸಚಿವ ವಿ.ಸೋಮಣ್ಣ ಅವರು ವರುಣದಲ್ಲೇ ಸ್ಪರ್ಧಿಸಬೇಕೆಂಬುದನ್ನು ಪಕ್ಷ ನಿರ್ಧಾರ ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಚಾಮರಾಜನಗರ (ಏ.22): ವರುಣದಲ್ಲಿ ಪ್ರಾಮಾಣಿಕವಾಗಿ, ದೇವರು ಮೆಚ್ಚುವ ರೀತಿಯಲ್ಲಿ ಚುನಾವಣಾ ಕೆಲಸ ಮಾಡುತ್ತೇನೆ. ಸಚಿವ ವಿ.ಸೋಮಣ್ಣ ಅವರು ವರುಣದಲ್ಲೇ ಸ್ಪರ್ಧಿಸಬೇಕೆಂಬುದನ್ನು ಪಕ್ಷ ನಿರ್ಧಾರ ಮಾಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು ಕೊಳ್ಳೇಗಾಲದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಳಿಕ ದೇವಲ ಮಹರ್ಷಿ ವೃತ್ತದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ಪಕ್ಷದ ಎಲ್ಲ ನಾಯಕರು ಶ್ರಮ ಹಾಕಿ ಸೋಮಣ್ಣ ಅವರನ್ನು ವರುಣದಲ್ಲಿ ಗೆಲ್ಲಿಸುತ್ತೇವೆ ಎಂದು ಖಚಿತವಾಗಿ ಹೇಳಿದರು.
ಇನ್ನು, ಚಾಮರಾಜನಗರದಲ್ಲಿ ಬಿಜೆಪಿ ಟಿಕೆಟ್ ವಂಚಿತ ರುದ್ರೇಶ್‌ರಿಂದ ಪಕ್ಷ ವಿರೋಧಿ ಚಟುವಟಿಕೆ ಕುರಿತು ಮಾತನಾಡಿದ ಅವರು, ‘ ಈ ಬಗ್ಗೆ ಮಾಹಿತಿ ದೊರೆತಿದೆ, ಅವರೊಟ್ಟಿಗೆ ಚರ್ಚೆ ಮಾಡಿದ್ದೇನೆ. ಜೆಡಿಎಸ್‌ನಿಂದ ಸ್ಪರ್ಧಿಸಿರುವ ಅಭ್ಯರ್ಥಿ ಯಾರೆಂದೂ ರುದ್ರೇಶ್‌ಗೆ ಗೊತ್ತಿಲ್ಲ, ಇಂಥ ಊಹಾಪೋಹಗಳಿಗೆ ನಾನು ಉತ್ತರಿಸಲ್ಲ’ ಎಂದು ಸ್ಪಷ್ಟಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಮೋದಿ ರಂಗಪ್ರವೇಶ ಮಾಡಿದ್ರೆ ಬಿಜೆಪಿಗೆ 130 ಸ್ಥಾನ ಖಚಿತ: ಬಿ.ಎಲ್.ಸಂತೋಷ್
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಕೇಂದ್ರದಲ್ಲಿ ಅಧಿಕಾರವಿರುವ ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಪ್ರೀತನ್ ನಾಗಪ್ಪ ಜಯಶೀಲರನ್ನಾಗಿ ಮಾಡಬೇಕೆಂದು ಬಿ.ಎಸ್ ವಿಜಯೇಂದ್ರ ಮನವಿ ಮಾಡಿದರು. ಆರ್.ಎಸ್.ದೊಡ್ಡಿ ಮಲೆಮಹದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಡಾ. ಅಂಬೇಡ್ಕರ್ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಹನೂರು ಅಭಿವೃದ್ಧಿಯಿಂದ ಹಿಂದುಳಿದಿದೆ ಶಿಕಾರಿಪುರ ಕ್ಷೇತ್ರದ ಅಭಿವೃದ್ಧಿಯಂತೆ ಹನೂರನ್ನು ಅಭಿವೃದ್ಧಿ ಮಾಡುತ್ತೇವೆ. ಹನೂರಿನ ಜನತೆ ಸ್ವಾಭಿಮಾನಿಗಳು. ಅವರ ಸ್ವಾಭಿಮಾನಕ್ಕೆ ಬೆಲೆ ಕಟ್ಟಲಾಗದು. ಎಲ್ಲಿಂದಲೋ ಬಂದವರ ಆಸೆ ಆಮಿಷ ಇಲ್ಲಿ ನಡೆಯುವುದಿಲ್ಲ. ಕ್ಷೇತ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಆದುದರಿಂದ ಪ್ರೀತನ್ ನಾಗಪ್ಪ ಅವರಿಗೆ ಆಶೀರ್ವದಿಸಿ ಗೆಲ್ಲಿಸಿ ಎಂದು ತಿಳಿಸಿದರು.
50:50 ಕ್ಷೇತ್ರಗಳು ಅಮಿತ್ ಶಾ ಟಾರ್ಗೆಟ್: ಪರಿಣಾಮಕಾರಿ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ ಸೂಚನೆ
ಡಾ. ಪ್ರೀತನ್ ನಾಗಪ್ಪ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಹನೂರಲ್ಲಿ ಪ್ರೀತನ್ ನಾಗಪ್ಪ. ಬಿಜೆಪಿ ಗೆಲುವನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ. ನಿಮ್ಮ ಜೊತೆ ನಾನಿದ್ದೇನೆ ನನಗೆ ಆಶೀರ್ವಾದ ಮಾಡುವ ಮೂಲಕ ಹನೂರು ಕ್ಷೇತ್ರದ ಜನತೆ ಬಿಜೆಪಿ, ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಬಂದಿದ್ದೇನೆ ನನಗೆ ಆಶೀರ್ವದಿಸುವಂತೆ ಮತದಾರರನ್ನು ಮನವಿ ಮಾಡಿದರು. ಬಿಎಸ್ ಯಡಿಯೂರಪ್ಪ ಹಾಗೂ ಪ್ರೀತನ್ ನಾಗಪ್ಪ ಜೋಡೆತ್ತುಗಳ ಸಮಾಗಮಕ್ಕೆ ಬಿಜೆಪಿ ಕಾರ್ಯಕರ್ತರು ಕಿಕ್ಕಿರಿದು ಆಗಮಿಸಿದ್ದರು. ಬಿಎಸ್ ಯಡಿಯೂರಪ್ಪ, ಹೆಚ್.ನಾಗಪ್ಪ, ವಿಜೇಯೇಂದ್ರ ಪರ ಜಯಕಾರ ಘೋಷಣೆಗಳನ್ನು ಕೂಗಿದರು.