Asianet Suvarna News Asianet Suvarna News

ಲಿಂಗಾಯತ ಸಮಾಜ ಸಮುದ್ರ ಇದ್ದಂತೆ: ಕಾಂಗ್ರೆಸ್‌ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದರು. 

Karnataka Election 2023 CM Basavaraj Bommai Slams On Congress At Hubballi gvd
Author
First Published May 8, 2023, 11:48 AM IST

ಹುಬ್ಬಳ್ಳಿ (ಮೇ.08): ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ, ಅದೊಂದು ಕಾಲ್ಪನಿಕ ಸಂಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದರು. ವೀರಶೈವ ಸಮಾಜ ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರನ್ನು ಗೌರವಿಸುವುದಾಗಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆಯ ಹೆಸರು ಬಳಸುವುದು ಸರಿಯಲ್ಲ. ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತದೆಯೇ?

ಲಿಂಗಾಯತ ಸಮಾಜ ಸಮುದ್ರ ಇದ್ದಂತೆ. ಲಿಂಗಾಯತ ವೇದಿಕೆ ಚುನಾವಣೆ ಸಂದರ್ಭಗಳಲ್ಲಿ ಹುಟ್ಟಿಕೊಂಡ ಸಂಘಟನೆ ಎಂದರು. ಬಿಜೆಪಿ ವಿರುದ್ಧ ಯಾವುದೇ ಪ್ರಕರಣ ಇಲ್ಲ, ಸಾಕ್ಷಿಯೂ ಇಲ್ಲ. ಭ್ರಷ್ಟಾಚಾರ ಆರೋಪದ ದಾಖಲೆ‌ ಕೊಡಿ ಎಂದು ಚುನಾವಣಾ ಆಯೋಗವನ್ನು ಕೇಳಿದ್ದು ಅವರಿಗೆ ಕೊಡಲು ಆಗಿಲ್ಲ ಎಂದರು.  ಇಷ್ಟೆಲ್ಲಾ ಮಾತನಾಡುವ ಎಲ್ಲಾ ಕಾಂಗ್ರೆಸ್‌ನವರ ಮೇಲೆ ಭ್ರಷ್ಟಾಚಾರ ಪ್ರಕರಣಗಳಿದ್ದು,  ನ್ಯಾಯಾಲಯಗಳಿಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ? ಎಂದರು.

ಬೊಮ್ಮಾಯಿ ಮತ್ತೆ ಸಿಎಂ ಆದರೆ ಅಭ್ಯಂತರ ಇಲ್ಲ: ಬಿ.ಎಸ್‌.ಯಡಿಯೂರಪ್ಪ

ತಪ್ಪು ಮಾಡುವುದನ್ನು ಕಾಂಗ್ರೆಸ್ ಬಿಡಲಿ: ಐಟಿಯವರು ಎಲ್ಲಾ ಜಿಲ್ಲೆಗಳಲ್ಲಿ ಇದ್ದಾರೆ, ಅವರಿಗೆ ಎಲ್ಲಿ ತಪ್ಪು‌ನಡೆಯುತ್ತೆ ಅನ್ನೋ ಮಾಹಿತಿ ಅವರಿಗೆ ಇರುತ್ತದೆ. ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ  ನಾವು ಏನು  ಮಾಡೋಕಾಗುತ್ತೆ.? ದಾಳಿಯಾಗುತ್ತದೆ ಎಂದು ಎಂ.ಬಿ. ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಮೊದಲೇ ಹೇಳಿ ಬಿಡೋದು ಕಾಂಗ್ರೆಸ್ ನವರ ತಂತ್ರಗಾರಿಕೆ ಎಂದರು. ನಮ್ಮ ರಾಷ್ಟ್ರೀಯ ನಾಯಕರು ಎಲ್ಲಾ ಚುನಾವಣೆಗಳಲ್ಲಿ ರಾಜ್ಯಕ್ಕೆ‌ ಬಂದಿದ್ದಾರೆ. 

ಮೋದಿ ಮ್ಯಾಜಿಕ್‌ ರಾಜ್ಯದಲ್ಲಿ ನಡೆಯಲ್ಲ, ಬೊಮ್ಮಾಯಿ ರಿಮೋಟ್‌ ಕಂಟ್ರೋಲ್‌ ಸಿಎಂ: ಸಲೀಂ ಅಹಮದ್‌

ರಾಷ್ಟ್ರೀಯ ನಾಯಕರದ್ದು ಹಾಗೂ ಕರ್ನಾಟಕದ ಜನರದ್ದು ಭಾವನಾತ್ಮಕ ಸಂಬಂಧ ಇದರಿಂದ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ಕೊಡಲಿದೆ, ಇಂದೊಂದು ಬೂಸ್ಟರ್ ಡೋಸ್ ಎಂದರು. ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ‌. ಎಲ್ಲ ನಾಯಕರು ಬಹಿರಂಗ ಸಭೆ- ರೋಡ್ ಷೋ ನಡೆಸುತ್ತಿದ್ದಾರೆ. 224 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

Follow Us:
Download App:
  • android
  • ios