ಲಿಂಗಾಯತ ಡ್ಯಾಂ ಒಡೆವ ಭ್ರಮೆಯಲ್ಲಿ ಡಿಕೆಶಿ: ಸಿಎಂ ಬೊಮ್ಮಾಯಿ ಟಾಂಗ್
ಬರುವ ಮೇ 13ಕ್ಕೆ ಯಾರ್ಯಾರ ಡ್ಯಾಮ್‌ನಲ್ಲಿ ಎಷ್ಟುನೀರಿದೆ ಎಂಬುದು ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಏ.22): ಬರುವ ಮೇ 13ಕ್ಕೆ ಯಾರ್ಯಾರ ಡ್ಯಾಮ್‌ನಲ್ಲಿ ಎಷ್ಟು ನೀರಿದೆ ಎಂಬುದು ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮ್ ಬಗ್ಗೆ ಮಾತಾಡಿದ್ದೀರಿ. ಇದು ಎಷ್ಟು ಗಟ್ಟಿಇದೆ ಎಂಬ ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018ರಲ್ಲಿ ನಿಮ್ಮದೇ ಸರ್ಕಾರ ಇದ್ದಾಗಲೂ ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ.
ನಿಮ್ಮ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13ರಂದು ಎಷ್ಟುನೀರಿದೆ ಎಂಬುದು ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಬೊಮ್ಮಾಯಿ ಅವರು ಟ್ವೀಟ್ ಮೂಲಕ ಹೇಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ವಿಚಾರವಾಗಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ಆಣೆಕಟ್ಟು ಒಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಅದನ್ನು ಮತ್ತೆ ಹೊಸದಾಗಿ ಕಟ್ಟಬೇಕು. ಈಗ ಒಡೆದು ಹೊರ ಹರಿದಿರುವ ನೀರು ಸಮುದ್ರ ಸೇರಬೇಕು. ಈ ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು ಎಂದು ಹೇಳಿದರು.
ಈಶ್ವರಪ್ಪಗೆ ಮೋದಿ ಕರೆ ನಾಚಿಕೆಗೇಡು: ರಣದೀಪ್ ಸಿಂಗ್ ಸುರ್ಜೇವಾಲಾ
ರಾಜ್ಯದಲ್ಲಿ ಮೋದಿ 20 ರ್ಯಾಲಿ ಆಯೋಜಿಸಲು ಸಿದ್ಧತೆ: ರಾಜ್ಯದಲ್ಲಿ ಮತ್ತೊಂದು ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು, ಮುಂಬರುವ ದಿನಗಳಲ್ಲಿ ರಾಜ್ಯದ 20 ಕಡೆ ರ್ಯಾಲಿ ನಡೆಸಲಿದ್ದಾರೆ. ರಾಜ್ಯದ ಎಲ್ಲ ಭಾಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿಯವರ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅಫಜಲ್ಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಏ.24ರಿಂದಲೇ ಮೋದಿಯವರು ರಾಜ್ಯದ ಚುನಾವಣೆಯ ಪ್ರಚಾರಕ್ಕೆ ಧುಮುಕಲಿದ್ದಾರೆ. ಆ ಮೂಲಕ ಕರುನಾಡು ಚುನಾವಣೆಗೆ ಬಿಜೆಪಿ ಪರ ಮತಬೇಟೆ ನಡೆಸಲಿದ್ದಾರೆ. ರಾಜ್ಯದ ಎಲ್ಲ ವಿಭಾಗಗಳಲ್ಲಿ, ಜೊತೆಗೆ ಪ್ರಮುಖ ಕ್ಷೇತ್ರಗಳಲ್ಲಿ ಮೋದಿಯವರು ರ್ಯಾಲಿ ನಡೆಸಲಿದ್ದಾರೆ. ರ್ಯಾಲಿ ಜೊತೆಗೆ ಹಲವೆಡೆ ಬಹಿರಂಗ ಸಭೆ ಉದ್ದೇಶಿಸಿ ಕೂಡ ಮಾತನಾಡಲಿದ್ದಾರೆ.
ರಾಜಕೀಯದಿಂದ ನನ್ನನ್ನು ದೂರ ಮಾಡಲು ಬಿಜೆಪಿ ಷಡ್ಯಂತ್ರ: ಡಿ.ಕೆ.ಶಿವಕುಮಾರ್
ರಾಜ್ಯದ ಎಲ್ಲ ಭಾಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿಯವರ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.