Chitradurga: ನಾಮಪತ್ರಕ್ಕೂ ಮುನ್ನ ತರಳಬಾಳು ಮಠದಲ್ಲಿ ಪೂಜೆ ಸಲ್ಲಿಸಿದ ಆಂಜನೇಯ

ಹೊಳಲ್ಕೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್‌.ಆಂಜನೇಯ ಗುರುವಾರ ನಾಮಪತ್ರ ಸಲ್ಲಿಸಿದರು. 30 ಸಹಸ್ರಕ್ಕೂ ಅಧಿಕ ಬೆಂಬಲಿಗರೊಂದಿಗೆ ಆಗಮಿಸಿದ ಆಂಜನೇಯ ರೋಡ್‌ ಶೋ ನಡೆಸಿದರು. ಇಡೀ ಹೊಳಲ್ಕೆರೆ ಪಟ್ಟಣ ಕಾಂಗ್ರೆಸ್‌ ಕಾರ್ಯಕರ್ತರಿಂದ ತುಂಬಿ ತುಳುಕಾಡಿತು. ಒಂದರ್ಥದಲ್ಲಿ ನಾಮಪತ್ರ ಸಲ್ಲಿಸುವಾಗಲೇ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ತೋರಿದಂತಿತ್ತು.

Karnataka election 2023 Congress candidate H Anjaney filed his nomination at chitradurga rav

ಹೊಳಲ್ಕೆರೆ (ಏ.21) : ಹೊಳಲ್ಕೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್‌.ಆಂಜನೇಯ ಗುರುವಾರ ನಾಮಪತ್ರ ಸಲ್ಲಿಸಿದರು. 30 ಸಹಸ್ರಕ್ಕೂ ಅಧಿಕ ಬೆಂಬಲಿಗರೊಂದಿಗೆ ಆಗಮಿಸಿದ ಆಂಜನೇಯ ರೋಡ್‌ ಶೋ ನಡೆಸಿದರು. ಇಡೀ ಹೊಳಲ್ಕೆರೆ ಪಟ್ಟಣ ಕಾಂಗ್ರೆಸ್‌ ಕಾರ್ಯಕರ್ತರಿಂದ ತುಂಬಿ ತುಳುಕಾಡಿತು. ಒಂದರ್ಥದಲ್ಲಿ ನಾಮಪತ್ರ ಸಲ್ಲಿಸುವಾಗಲೇ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ತೋರಿದಂತಿತ್ತು.

ಕೊಟ್ರೆನಂಜಪ್ಪ ಪದವಿ ಪೂರ್ವಕಾಲೇಜು ಮೈದಾನದ ಬಳಿ ಬೆಳಗ್ಗೆ 11 ಗಂಟೆಗೆ ಆರಂಭವಾದ ಮೆರವಣಿಗೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ದಾಖಲೆ ಎನ್ನುವಷ್ಟರ ಮಟ್ಟಿಗೆ ಪಾಲ್ಗೊಂಡು ಹಿಗ್ಗಿದರು. ಮೆರವಣಿಗೆ ಯುದ್ಧಕ್ಕೂ ಹಲಗೆ ಸದ್ದಿಗೆ ಹೆಜ್ಜೆ ಹಾಕಿದರು. ಕೆಲವರಂತೂ ನೃತ್ಯ ಮಾಡುತ್ತಲೇ ಸಾಗಿದರು.ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸಾಗಿದ ಆಂಜನೇಯಗೆ ದಾರಿಯುದ್ದಕ್ಕೂ ಸ್ವಾಗತ ಕೋರಲಾಯಿತು. ರಸ್ತೆಯ ಎರಡೂ ಬದಿಯಲ್ಲಿ ನಿಂತು ಜನರು ಜೈ ಕಾರ ಹಾಕಿದರು. ಹೂವಿನ ಮಳೆ ಸುರಿಸಿ, ಬೃಹದಾಕಾರದ ಸೇಬಿನ ಹಾರ ಹಾಕಿ ಜಯಘೋಷ ಮೊಳಗಿಸಿದರು.

KARNATAKA ELECTION 2023: ತಿಪ್ಪಾರೆಡ್ಡಿ ರೋಡ್‌ ಶೋಗೆ ಚಿತ್ರದುರ್ಗ ಕೇಸರಿಮಯ!

ನಾಮಪತ್ರ ಸಲ್ಲಿಕೆಗೂ ಮುನ್ನ ಮೆರವಣಿಗೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಚ್‌.ಆಂಜನೇಯ, ಹೊಳಲ್ಕೆರೆ ಕ್ಷೇತ್ರದ ಜನರ ಋುಣ ನನ್ನ ಮೇಲಿದೆ. ಸಮಾಜಕಲ್ಯಾಣ ಸಚಿವನಾಗಿ ಐದು ವರ್ಷ ಆಡಳಿತ ನಡೆಸಲು ಅವಕಾಶ ಕೊಟ್ಟವರು ಹೊಳಲ್ಕೆರೆ ಕ್ಷೇತ್ರದ ಜನ ಎಂದು ಭಾವುಕರಾಗಿ ನುಡಿದರು. ಸಚಿವನಾಗಿದ್ದ ಸಂದರ್ಭದಲ್ಲಿ ಎಲ್ಲ ಸಮುದಾಯದವರಿಗೆ ಸಾವಿರಾರು ಕೊಳವೆಬಾವಿ ಕೊರೆಯಿಸಿದ್ದು, ಕೊನೇ ಗಳಿಗೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮಂದಿಗೆ ಬೋರ್‌ವೆಲ್‌ ಸೌಲಭ್ಯ ಮಂಜೂರು ಮಾಡಿದ್ದೇ. ಆದರೆ, ಚುನಾವಣೆ ಘೋಷಣೆ ಕಾರಣಕ್ಕೆ ಕೊರೆಯಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಗೆದ್ದ ಎಂ.ಚಂದ್ರಪ್ಪ, ರೈತರಿಗೆ ನನ್ನ ಅವಧಿಯಲ್ಲಿ ಕೊಟ್ಟಿದ್ದ ಕೊಳವೆಬಾವಿ ಸೌಲಭ್ಯ ಕಸಿದುಕೊಂಡರು ಎಂದು ಆರೋಪಿಸಿದರು.

ಜಿ.ಎಸ್‌. ಮಂಜುನಾಥ್‌, ಓ.ಶಂಕರ್‌, ಸವಿತಾ ಸೇರಿ ಅನೇಕರು ಕ್ಷೇತ್ರದಲ್ಲಿ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಆಗಿದ್ದರು. ಯಾರಿಗೆ ಟಿಕೆಟ್‌ ಕೊಟ್ಟಿದ್ದರೂ ನಾನು ಅವರ ಗೆಲುವಿಗೆ ಶ್ರಮಿಸಲು ಸಿದ್ಧನಿದ್ದೇ. ಆದರೆ, ಪಕ್ಷ, ಕೊನೇ ಗಳಿಗೆಯಲ್ಲಿ ನಡೆಸಿದ ಸರ್ವೇ ಆಧಾರದಡಿ ನನಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇಂತಹ ಸಂದರ್ಭ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಎಲ್ಲರೂ ನನ್ನ ಗೆಲುವಿಗೆ ಕೈಜೋಡಿಸಿ, ಮೆÃವಣಿಗೆಯಲ್ಲಿ ಪಾಲ್ಗೊಂಡಿರುವುದು ಪಕ್ಷದ ಬಲವರ್ಧನೆಗೆ ಸಹಕಾರಿಆಗಿದೆ ಎಂದರು.

ವೀಕ್ಷಕ ಸಂಜಯ್‌ದತ್‌, ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಎಂ.ಕೆ. ತಾಜಪೀರ್‌, ಕೆಪಿಸಿಸಿ ಕೋಆರ್ಡಿನೇಟ್‌ ಡಾ.ರಾಘವೇಂದ್ರ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ್‌, ಹನುಮಲಿ ಷಣ್ಮುಖಪ್ಪ, ಮಾಜಿ ಶಾಸಕ ಎ.ವಿ. ಉಮಾಪತಿ, ಜೆ.ಜೆ.ಹಟ್ಟಿಡಾ.ಬಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್‌.ಶಿವಕುಮಾರ್‌, ಮಾಜಿ ಉಪಾಧ್ಯಕ್ಷ ಗಂಗಾಧರ್‌, ಸದಸ್ಯರಾದ ಶಿವಮೂರ್ತಿ ಲೋಹಿತ್‌ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಆರ್‌. ಕೃಷ್ಣಮೂರ್ತಿ, ಹೊಳಲ್ಕೆರೆ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹನುಮಂತಪ್ಪ, ಎಂ.ಪ್ರಕಾಶ್‌, ಜಿಪಂ ಮಾಜಿ ಉಪಾಧ್ಯಕ್ಷ ಎಸ್‌.ಎಂ.ಎಲ್‌.ತಿಪ್ಪೇಸ್ವಾಮಿ, ಜಿಲ್ಲಾಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್‌. ಮೈಲಾರಪ್ಪ, ಕೆ.ಪಿ.ಸಂಪತ್‌ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಚಂದ್ರಪ್ಪಗೆ ಪಾಠ ಕಲಿಸಲು ಜನ ಕಾತರ

ಸರ್ವಾಧಿಕಾರಿ ಧೋರಣೆಯ ವ್ಯಕ್ತಿಯನ್ನು ಸೋಲಿಸಲೇಬೇಕೆಂದು ನನ್ನ ಮೇಲೆ ಒತ್ತಡ ತಂದು ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಚುನಾವಣೆಗೆ ನಿಲ್ಲಿಸಿದ್ದಾರೆ. ಜನರ ಮನವಿಗೆ ಸ್ಪಂದಿಸಿ ಸ್ಪರ್ಧಿಸಿದ್ದು, ಸುಳ್ಳಿನ ರಾಜ ಚಂದ್ರಪ್ಪನಿಗೆ ಜನ ಪಾಠ ಕಲಿಸಲು ಕಾತುರÜದಿಂದ ಕಾಯುತ್ತಿದ್ದಾರೆ ಎಂದು ಆಂಜನೇಯ ಹೇಳಿದರು. ಕ್ಷೇತ್ರದಲ್ಲಿ ಎಷ್ಟುಕೆರೆಗಳು ಇವೆ ಎಂಬ ಲೆಕ್ಕ ಶಾಸಕರಿಗೆ ಗೊತ್ತಿಲ್ಲ. 300 ಕೆರೆ ಅಭಿವೃದ್ಧಿಗೊಳಿಸಿದ್ದೇನೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು. ತಾವು ಸಚಿವರಾಗಿದ್ದಾಗ ಹೊಳಲ್ಕೆರೆ ಕ್ಷೇತ್ರದಲ್ಲಿ ಸಾವಿರಾರು ಕೋಟಿ ರು. ಅನುದಾನ ತಂದು, ಶಾಲೆ, ಕಾಲೇಜು, ತರಬೇತಿ ಕೇಂದ್ರದ ಕಟ್ಟಡಗಳನ್ನು ನಿರ್ಮಿಸಿದ್ದೇನೆ. ಪ್ರತಿ ಹಳ್ಳಿಗಳ ರಸ್ತೆ ಅಭಿವೃದ್ಧಿಗೊಳಿಸಿದ್ದೇನೆ. ಹತ್ತಾರು ಸಮುದಾಯ ಭವನಗಳ ನಿರ್ಮಾಣ ಮಾಡಲಾಗಿದೆ. ನನ್ನಅವಧಿ ಕೆಲಸಗಳನ್ನು ಉದ್ಘಾಟಿಸಿದ ಚಂದ್ರಪ್ಪ, ಇವುಗಳು ನಾನೇ ಮಾಡಿದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ಜನರನ್ನು ದಡ್ಡರು ಎಂದು ಭಾವಿಸಿದಂತೆ ಇದೆ ಎಂದು ವ್ಯಂಗ್ಯವಾಡಿದರು.

ನಾಮಪತ್ರಕ್ಕೂ ಮುನ್ನ ತರಳಬಾಳು ಮಠದಲ್ಲಿ ಪೂಜೆ ಸಲ್ಲಿಸಿದ ಆಂಜನೇಯ

ಹೊಳಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಎಚ್‌. ಆಂಜನೇಯ ತರಳಬಾಳು ಜಗದ್ಗುರು ಬೃಹನ್ಮಠದ ಐಕ್ಯಮಂಟಪದಲ್ಲಿ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಪಕ್ಷವು ತಮಗೆ ನೀಡಿರುವ ಬಿ ಫಾರಂನ್ನು ಶ್ರೀಗಳವರ ಪದತಲದಲ್ಲಿಟ್ಟು ಶ್ರೀಗಳಿಗೆ ನಮಸ್ಕರಿಸಿದರು. ನಂತರ ನಾಮಪತ್ರ ಸಲ್ಲಿಸಲು ತೆರಳಿದರು. ಪತ್ನಿ ವಿಜಯಾ, ರಾಜ್ಯ ಕಾಂಗ್ರೆಸ್‌ ಮುಖಂಡ ಜಿ.ಎಸ್‌. ಮಂಜುನಾಥ್‌, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸ್ಥಳೀಯ ಕಾಂಗ್ರೆಸ್‌ ಮುಖಂಡರಾದ ಗ್ರಾಪಂ ಅಧ್ಯಕ್ಷ ಎಂ.ಜಿ. ದೇವರಾಜ್‌, ಎಂ. ಬಸವರಾಜಯ್ಯ, ನಾಗರಾಜ ಬೆಲ್ಲದ, ಲೋಹಿತ್‌ ಕುಮಾರ್‌, ಬಿ.ಎಸ್‌. ತಿಮ್ಮರಾಜ್‌ ಮತ್ತಿತರರು ಭಾಗವಹಿಸಿದ್ದರು.

Karnataka election 2023: ಚಂದ್ರಪ್ಪ ನಾಮಪತ್ರ ಸಲ್ಲಿಕೆಗೆ ಕೇಸರಿಯಲ್ಲಿ ಮಿಂದ ಹೊಳಲ್ಕೆರೆ!

ಅಮವಾಸ್ಯೆಯಂದು ನಾಮಪತ್ರ:

ಹಿರಿಯ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರು ಅಪ್ಪಟ ಬಸವಪ್ರೇಮಿಯಾಗಿದ್ದರು. ನಾಡಿನ ವಿಚಾರಶೀಲ, ವೈಚಾರಿಕ ಶಕ್ತಿಯಾಗಿ ಅವರು ಮಾರ್ಗದರ್ಶನ ಮಾಡಿದವರು. ಬಸವಣ್ಣನವರ ತತ್ವಾದರ್ಶಗಳನ್ನು ಅವರು ನಾಡಿನ ತುಂಬೆಲ್ಲಾ ಹರಡಿದ್ದರು. ಮಠದಲ್ಲಿ ಯಾವುದೇ ಸಂಪ್ರದಾಯಗಳನ್ನು ಅನುಸರಿಸದೆ ಅಮವಾಸ್ಯೆ ದಿನಗಳಂದು ಸಹ ಮದುವೆಗಳು, ಶುಭಕಾರ‍್ಯ ನೆರವೇರಿಸಿ ಶುಭಾಶೀರ್ವಾದ ಮಾಡಿದವರು. ಅಂತಹ ಪುಣ್ಯಪುರುಷರ ಆಶಯದಂತೆ ನಡೆಯುತ್ತಿರುವ ನನಗೆ ಅವರ ಆಶೀರ್ವಾದವೂ ಇದೆ ಎಂದು ಆಂಜನೇಯ ಹೇಳಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios