ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶನಿವಾರ ಶೃಂಗೇರಿಯಲ್ಲಿ ಕ್ಷೇತ್ರ ಮಟ್ಟದ ಸಮಾವೇಶ ಉದ್ಘಾಟಿಸುವ ಮೂಲಕ ರಾಜ್ಯಮಟ್ಟದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಎಂ.ಎಚ್‌.ನಟರಾಜ್‌ ತಿಳಿಸಿದರು.

ಶೃಂಗೇರಿ (ಏ.22) : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಶನಿವಾರ ಶೃಂಗೇರಿಯಲ್ಲಿ ಕ್ಷೇತ್ರ ಮಟ್ಟದ ಸಮಾವೇಶ ಉದ್ಘಾಟಿಸುವ ಮೂಲಕ ರಾಜ್ಯಮಟ್ಟದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಎಂ.ಎಚ್‌.ನಟರಾಜ್‌ ತಿಳಿಸಿದರು.

ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್‌(DK Shivakumar) ಸಂಜೆ ಶೃಂಗೇರಿ(Shringeri) ಆಗಮಿಸಲಿದ್ದು, ಶ್ರೀ ಶಾರದಾ ಪೀಠಕ್ಕೆ ತೆರಳಿ ಶಾರದಾಂಬೆಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಿ ನಂತರ ಜಗದ್ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.

ಬಿಜೆಪಿ ವಿರುದ್ಧ ನಾವು ತಂತ್ರಗಾರಿಕೆ ಹೆಣೆಯುತ್ತೇವೆ: ಡಿಕೆಶಿ

ಜೆಸಿಬಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಸಂಜೆ 6 ಗಂಟೆಗೆ ಕ್ಷೇತ್ರ ಮಟ್ಟದ ಸಮಾವೇಶ ಉದ್ಘಾಟಿಸುವುದರೊಂದಿಗೆ ಶೃಂಗೇರಿ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡರ ಪರವಾಗಿ ಪ್ರಚಾರ ಮಾಡುವ ಮೂಲಕ ಶೃಂಗೇರಿಯಿಂದಲೇ ಮೊದಲ ಬಾರಿಗೆ ಚುನಾವಣಾ ಪ್ರಚಾರ ಆರಂಬಿಸಲಿದ್ದಾರೆ ಎಂದರು.

ಸಭೆಯಲ್ಲಿ ಕ್ಷೇತ್ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎಂ.ರಮೇಶ್‌ ಭಟ್‌,ಕಲ್ಕುಳಿ ವೆಂಕಟೇಶ್‌,ನೆಮ್ಮಾರ್‌ ಪುಟ್ಟಪ್ಪ ಹೆಗ್ಡೆ, ಗೋಪಾಲ್‌ ಹೆಗ್ಡೆ, ರಾಜ್‌ಕುಮಾರ್‌, ಉಮೇಶ್‌ ಪುದುವಾಳ್‌,ಭಾಸ್ಕರ್‌ನಾಯಕ್‌,ಕೆ.ಆರ್‌.ಉಮೇಶ್‌ ಹೆಗ್ಡೆ,ಎಚ್‌.ಕೆ.ದಿನೇಶ್‌ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.