ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್‌: ಕಾಂಗ್ರೆಸ್‌ ವಿರುದ್ಧ ಕಿಡಿ

ಬಿಜೆಪಿ ಅಭ್ಯರ್ಥಿಗಳ ಪಟ್ಟಿಎನ್ನಲಾದ ನಕಲಿ ಪಟ್ಟಿಯೊಂದು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಪಟ್ಟಿಬಿಡುಗಡೆಯನ್ನು ಬಲವಾಗಿ ನಿರಾಕರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. 

Karnataka Election 2023 Fake list of BJP candidates went viral gvd

ಬೆಂಗಳೂರು (ಏ.05): ಬಿಜೆಪಿ ಅಭ್ಯರ್ಥಿಗಳ ಪಟ್ಟಿಎನ್ನಲಾದ ನಕಲಿ ಪಟ್ಟಿಯೊಂದು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಪಟ್ಟಿಬಿಡುಗಡೆಯನ್ನು ಬಲವಾಗಿ ನಿರಾಕರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. ಬಳಿಕ ಬಿಜೆಪಿ ವತಿಯಿಂದ ಕಾಂಗ್ರೆಸ್‌ ಪಕ್ಷದ ವಿರುದ್ಧ ಮಲ್ಲೇಶ್ವರ ಪೊಲೀಸ್‌ ಠಾಣೆ ಹಾಗೂ ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಲಾಗಿದೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ‘ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿಯು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರ ಹೆಸರು ಹಾಗೂ ಸೀಲು ನಕಲು ಮಾಡಿ ಬಿಜೆಪಿಯ 100 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ನಕಲಿ ಪಟ್ಟಿಬಿಡುಗಡೆ ಮಾಡಿದೆ. ಇದು ಕಾಂಗ್ರೆಸ್‌ನ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿಯನ್ನು ಮಣಿಸಲು ಸಾಧ್ಯವಾಗದೆ ಈ ರೀತಿ ಹತಾಶರಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಮ್ಮಲ್ಲಿ ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ.

ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

ರಾಷ್ಟ್ರೀಯ ಪಕ್ಷದ ಘನತೆಗೆ ಈ ಮೂಲಕ ಅವರು ಧಕ್ಕೆ ತಂದುಕೊಳ್ಳುತ್ತಿದ್ದಾರೆ. ಇದು ಚುನಾವಣೆ ಪ್ರಾರಂಭದ ಹಂತ. ಚುನಾವಣೆಯ ಅಂತಿಮ ಕಾಲದಲ್ಲಿ ಇನ್ನೂ ಯಾವ ತಳಮಟ್ಟಕ್ಕೆ ಇಳಿಯಬಹುದು?’ ಎಂದು ಪ್ರಶ್ನಿಸಿದರು. ‘ಕಾಂಗ್ರೆಸ್‌ ಈ ರೀತಿ ಮಾಡಿದ್ದಲ್ಲಿ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿ ಬಹಿರಂಗ ಕ್ಷಮೆ ಯಾಚಿಸಬೇಕು. ಒಂದು ವೇಳೆ ನಕಲಿ ಪಟ್ಟಿಬಿಡುಗಡೆ ಮಾಡಿಲ್ಲವಾದರೆ, ಈ ಸಂಬಂಧ ದೂರು ನೀಡಬೇಕು’ ಎಂದು ಆಗ್ರಹಿಸಿದ ಅವರು, ‘ಈಗಾಗಲೇ ನಾವು ಕಾಂಗ್ರೆಸ್‌ ಪಕ್ಷದ ವಿರುದ್ಧ ದೂರು ದಾಖಲಿಸಿದ್ದೇವೆ. 

ಬಿಎಸ್‌ವೈ, ಸಿದ್ದರಾಮಯ್ಯ ಒಳಒಪ್ಪಂದ: ದೇವೇಗೌಡ ಹೊಸ ಬಾಂಬ್‌

ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ, ಕೇಂದ್ರದ ಮುಖ್ಯ ಚುನಾವಣಾಧಿಕಾರಿಗೆ ದೂರಿನ ಪ್ರತಿ ಕಳುಹಿಸಲಾಗುವುದು. ಬಿಜೆಪಿ ಪಕ್ಷವು ಕಾಂಗ್ರೆಸ್‌ ಪಕ್ಷದ ಈ ತೃತೀಯ ದರ್ಜೆಯ ರಾಜಕಾರಣವನ್ನು ಖಂಡಿಸಲಿದೆ’ ಎಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios