Karnataka Election 2023: ಸಿದ್ದರಾಮಯ್ಯ ಈ ಜನ್ಮದಲ್ಲಿ ಸಿಎಂ ಆಗಲ್ಲ: ಗೋವಿಂದ ಕಾರಜೋಳ
ಸಿದ್ದರಾಮಯ್ಯನವರು ಈ ಜನ್ಮದಲ್ಲಿ ತಿರುಗಿ ಸಿಎಂ ಆಗೋದಿಲ್ಲ. ನಾವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿದ್ದರಾಮಯ್ಯನವರು ಈ ಜನ್ಮದಲ್ಲಿ ತಿರುಗಿ ಸಿಎಂ ಆಗುವುದಿಲ್ಲ.
ಬಾಗಲಕೋಟೆ (ಮೇ.10): ಸಿದ್ದರಾಮಯ್ಯನವರು ಈ ಜನ್ಮದಲ್ಲಿ ತಿರುಗಿ ಸಿಎಂ ಆಗೋದಿಲ್ಲ. ನಾವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿದ್ದರಾಮಯ್ಯನವರು ಈ ಜನ್ಮದಲ್ಲಿ ತಿರುಗಿ ಸಿಎಂ ಆಗುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ. ಸಿದ್ದರಾಮಯ್ಯ ಸಿಎಂ ಆಗೋದು ಎಲ್ಲಿಂದ ಬಂತು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಬೆಳಗಲಿಯಲ್ಲಿ ಬುಧವಾರ ಮಾತನಾಡಿದರು. ಮಾಜಿ ಸಿಎಂ ಎಚ್‌ಡಿಕೆ ಕಿಂಗ್‌ಮೇಕರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇವತ್ತಿನ ವಾತಾವರಣ ನೋಡಿದರೆ ನಮಗೆ ಸ್ಪಷ್ಟಬಹುಮತ ಬರುತ್ತೆ. 125 ಸ್ಥಾನಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ. ಸ್ವಂತ ಬಲದ ಮೇಲೆ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಮುಧೋಳ ಕ್ಷೇತ್ರದಲ್ಲಿ ಈ ಬಾರೀ ಹೆಚ್ಚಿನ ಮತಗಳ ಅಂತರದ ಗೆಲುವು ದಾಖಲಿಸುತ್ತೇನೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ: ಬಾಲಚಂದ್ರ ಜಾರಕಿಹೊಳಿ
ನಾನು ಮತ್ತೆ ಶಾಸಕನಾಗಿ ಆಯ್ಕೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 130 ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದೆ. ನಾನು ಮುಧೋಳ ಮತಕ್ಷೇತ್ರದ ಶಾಸಕನಾಗಿ, ವಿವಿಧ ಇಲಾಖೆಗಳ ಸಚಿವನಾಗಿ, ಉಪ-ಮುಖ್ಯ ಮಂತ್ರಿಯಾಗಿ ಮುಧೋಳ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೊಳಿಸಿದ್ದೇನೆ. ನಾನು ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿರುವ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಬಿಜೆಪಿ ಅಭ್ಯರ್ಥಿ, ಸಚಿವ ಗೋವಿಂದ ಕಾರಜೋಳ ಹೇಳಿದರು.
ಬುಧವಾರ ಬೆಳಿಗ್ಗೆ ಅವರು ಕುಟುಂಬದ ಸದಸ್ಯರ ಜೊತೆ ತೆರಳಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಗೆಲವು ಖಚಿತ ಎಂಬುವುದರಲ್ಲಿ ಯಾವುದೇ ಸಂಶಯವಿಲ್ಲ. ನಾನು ಮತ್ತೆ ಕ್ಷೇತ್ರದ ಶಾಸಕನಾಗಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ. ಮತಕ್ಷೇತ್ರದ ಮತದಾರರ ಋುಣವನ್ನು ತೀರಿಸುತ್ತೇನೆಂದು ಹೇಳಿದರು.
20 ಸಾವಿರ ಮತಗಳಿಂದ ಗೆಲವು: ಮುಧೋಳ ವಿಧಾನಸಭಾ ಮೀಸಲು ಮತಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ. ಈ ಚುನಾವಣೆಯಲ್ಲಿ ಕನಿಷ್ಠ 140 ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ನಳನಳಿಸಲಿದೆ ಶಿರಸಿ ಜೈನ ಮಠದ ಕೆರೆ: 30 ಅಡಿ ಆಳದವರೆಗೆ ಹೂಳು ತೆರವು
ಬುಧವಾರ ಅವರು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸಲಿದೆ. ಅಷ್ಟೇ ಅಲ್ಲ ಮುಧೋಳ ಮತಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಮತ ಹಾಕಲಿದ್ದಾರೆ. ಪರಿಣಾಮ ನಾನು ಕನಿಷ್ಠ 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ನನಗಿದೆ ಎಂದು ಸುಳ್ಳು ಭರವಸೆ ನೀಡಿ ಮತದಾರರಿಗೆ ಮೋಸ ಮಾಡುತ್ತಿರುವ ಬಿಜೆಪಿ ಈ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆಂದು ಹೇಳಿದರು.