ವಿಧಾನಸಭಾ ಸಾರ್ವತ್ರಿಕ ಚುನಾವಣೆ: ಚಾಮರಾಜನಗರದಲ್ಲಿ 24 ಅಭ್ಯರ್ಥಿಗಳಿಂದ 32 ನಾಮಪತ್ರ ಸಲ್ಲಿಕೆ
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಸೋಮವಾರ ಜಿಲ್ಲೆಯಲ್ಲಿ 24 ಅಭ್ಯರ್ಥಿಗಳಿಂದ 32 ನಾಮಪತ್ರ ಸಲ್ಲಿಕೆಯಾಗಿವೆ.
ಚಾಮರಾಜನಗರ (ಏ.17): ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಸೋಮವಾರ ಜಿಲ್ಲೆಯಲ್ಲಿ 24 ಅಭ್ಯರ್ಥಿಗಳಿಂದ 32 ನಾಮಪತ್ರ ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಾ. ಪ್ರೀತನ್. ಕೆ.ಎನ್, ಜಾತ್ಯಾತೀತ ಜನತಾ ದಳ ಅಭ್ಯರ್ಥಿಯಾಗಿ ಎಂ.ಆರ್. ಮಂಜುನಾಥ್, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿಯಾಗಿ ಎನ್. ಪ್ರದೀಪ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಸುರೇಶ. ಎಂ., ಪಕ್ಷೇತರ ಅಭ್ಯರ್ಥಿಗಳಾಗಿ ರಾಜಶೇಖರ್, ನವನೀತ್ ಗೌಡ. ಎನ್, ಮುಜಮಿಲ್ ಪಾಷ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎ.ಆರ್. ಕೃಷ್ಣಮೂರ್ತಿ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷದಿಂದ ಕೆಂಪರಾಜು. ವಿ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಜನತಾದಳ (ಜಾತ್ಯತೀತ) ಪಕ್ಷದಿಂದ ಬಿ. ಪುಟ್ಟಸ್ವಾಮಿ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎನ್. ರವಿಕುಮಾರ್, ಉತ್ತಮ ಪ್ರಜಾಕೀಯ ಪಕ್ಷದಿಂದ ವಿ. ವಿನಯ್ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಬಿ. ರಾಚಯ್ಯ, ಕೆ. ರಾಜು, ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಅಧಿಕಾರಕ್ಕೆ ಅಂಟಿಕೊಂಡು ಕೂರುವವ ನಾನಲ್ಲ: ಸಚಿವ ಎಂಟಿಬಿ ನಾಗರಾಜ್
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಿ. ಪುಟ್ಟರಂಗಶೆಟ್ಟಿ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಮಹೇಶ. ಆರ್, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿಯಾಗಿ ಅಭಿಲಾಷ್.ಕೆ, ಭಾರತೀಯ ಬೆಳಕು ಪಾರ್ಟಿ ಅಭ್ಯರ್ಥಿಯಾಗಿ ಪಿ. ಗುರುಸಿದ್ದಪ್ಪ, ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಪ್ರಸನ್ನ ಕುಮಾರ್. ಬಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಸೋಲಿಸುವ ಉದ್ದೇಶದಿಂದ ನನ್ನನ್ನು ಕಣಕ್ಕಿಳಿಸಿದ್ದಾರೆ: ಸಚಿವ ವಿ.ಸೋಮಣ್ಣ
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸಿ.ಎಸ್. ನಿರಂಜನ್ ಕುಮಾರ್ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಎಂ. ಶಾಂತಪ್ಪ, ಪ್ರತಾಪ್.ಎಂ., ಟಿಪ್ಪು ಸುಲ್ತಾನ್.ಎನ್.ಎಸ್. ,ಜಯಶ್ರೀ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.