ರಾಜ್ಯದಲ್ಲಿ ಮತ್ತು ದೇಶದಲ್ಲಿ ನೆಲೆ ಕಳೆದುಕೊಂಡ ಕಾಂಗ್ರೆಸ್: ಸಚಿವ ಬಿ.ಸಿ.ಪಾಟೀಲ್
ಕಾಂಗ್ರೆಸ್‌ಗೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಅದಕ್ಕಾಗಿ ಬಿಜೆಪಿಯಿಂದ ಆಗುತ್ತಿರುವ ಅಭಿವೃದ್ಧಿ ನೋಡಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಹಿರೇಕೆರೂರ (ಏ.27): ಕಾಂಗ್ರೆಸ್‌ಗೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ನೆಲೆ ಇಲ್ಲದಂತಾಗಿದೆ. ಅದಕ್ಕಾಗಿ ಬಿಜೆಪಿಯಿಂದ ಆಗುತ್ತಿರುವ ಅಭಿವೃದ್ಧಿ ನೋಡಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ತಾಲೂಕಿನ ಅರೀಕಟ್ಟಿ, ಬೆಟಕೇರೂರ, ಮತ್ತಿಹಳ್ಳಿ, ಕರಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮತಯಾಚನೆ ಮಾಡಿ ಅವರು ಮಾತನಾಡಿದರು. ಬಿಜೆಪಿ ದೇಶದ ಜನತೆಯ ಶ್ರೇಯೋಭಿವೃದ್ಧಿ ಉದ್ದೇಶದಿಂದ ಹತ್ತಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅನೇಕ ಜನಪ್ರಿಯ ಕಾರ್ಯಕ್ರಮಗಳು ದೇಶದ ಸಾಮಾನ್ಯ ಜನರು ಬದುಕು ಕಟ್ಟಿಕೊಳ್ಳಲು ಆಸರೆಯಾಗಿವೆ.
ಕಾಂಗ್ರೆಸ್ ಆಡಳಿತ ಕಾಲದಲ್ಲಿ ಜನರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸೀಗದೆ ಜನರು ಪರದಾಡುತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜನರು ಪ್ರತಿನಿತ್ಯದ ಜೀವನ ನಡೆಸಲು ಬೇಕಾದ ಎಲ್ಲ ಮುಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗಿದೆ ಎಂದರು. ಬಡ ಜನರು ತಾವು ಸ್ವಾಭಿಮಾನದ ಜೀವನ ನಡೆಸಲು ಸಬ್ಸಿಡಿಯಲ್ಲಿ ಅನೇಕ ಸಾಲ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯುವಕರಿಗೆ ಸ್ವಂತ ಉದ್ಯೋಗಕ್ಕಾಗಿ ಸಾಲ ಯೋಜನೆಗಳನ್ನು ತಂದು ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗಿದೆ.
ಸಾ.ರಾ. ಆಯ್ಕೆಮಾಡಿ, ಎಚ್‌ಡಿಕೆಗೆ ಬಹುಮತ ನೀಡಿ: ಎಚ್.ಡಿ.ದೇವೇಗೌಡ
ರೈತರಿಗಾಗಿ ಬಡ್ಡಿ ರಹಿತ ಬೆಳೆ ಸಾಲ ಯೋಜನೆ, ರಾಷ್ಟ್ರೀಯ ಕೃಷಿ ವಿಮಾ ಯೋಜನೆ, ತೋಟಗಾರಿಕೆ ಬೆಳೆಗಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಪ್ರೋತ್ಸಾಹಧನ ಯೋಜನೆ, ವಿವಾಹ ಪ್ರೋತ್ಸಾಹ ಧನ ಯೋಜನೆಗಳಂತಹ ಯೋಜನೆಗಳು ಜನರನ್ನು ನೆಮ್ಮದಿಯ ಜೀವನ ನಡೆಸಲು ಅನುಕೂಲಕರವಾಗಿವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡದೇ ಇಂದು ಅಧಿಕಾರ ಕಳೆದುಕೊಂಡು ಬರೀ ಟೀಕೆ ಮಾಡುತ್ತಾ ಚುನಾವಣೆ ವೇಳೆ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನಗೆ ಆರೋಗ್ಯಕ್ಕಿಂತ ಅಭ್ಯರ್ಥಿಗಳ ಗೆಲುವು ಮುಖ್ಯ: ಎಚ್.ಡಿ.ಕುಮಾರಸ್ವಾಮಿ
ಕಾಂಗೆಸ್ಸಿನವರ ಮಾತಿಗೆ ಕಿವಿಗೊಡದೇ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ಬಿಜೆಪಿಗೆ ಮತ ಹಾಕಿ. ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಬರುವಂತೆ ಮಾಡಿ ಎಂದು ಮನವಿ ಮಾಡಿದರು. ಈ ವೇಳೆ ಮಾಜಿ ಸಚೇತಕ ಡಿ.ಎಂ. ಸಾಲಿ, ಸಾಂಬಾರ ಮಂಡಳಿ ಅಧ್ಯಕ್ಷ ಎನ್.ಎಂ. ಈಟೇರ, ಜಯಣ್ಣ ಯಲವಾಳ, ಶಂಭು ಕರ್ಜಿಗಿ, ಗುರುಶಾಂತ ಯತ್ತಿನಹಳ್ಳಿ, ಮಂಜುಳಾ ಬಾಳಿಕಾಯಿ, ಶಿವಲಿಲಾ ರಂಗಕ್ಕನವರ, ಗ್ರಾಮದ ಮೂಖಂಡರು ಕಾರ್ಯಕರ್ತರು ಇದ್ದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.