ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ: ಸಚಿವ ಸುಧಾಕರ್
ರಾಜ್ಯಾದ್ಯಂತ ಬಿಜೆಪಿ ಪರವಾದ ಅಲೆ ಎದ್ದಿದ್ದು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಸಹಿತ ಇಡೀ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ (ಏ.03): ರಾಜ್ಯಾದ್ಯಂತ ಬಿಜೆಪಿ ಪರವಾದ ಅಲೆ ಎದ್ದಿದ್ದು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಸಹಿತ ಇಡೀ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಿಣಕನಗುರ್ಕಿ ಗ್ರಾಪಂ ವ್ಯಾಪ್ತಿಯ ಮುಖಂಡರಾದ ಲಕ್ಷ್ಮಣರೆಡ್ಡಿ, ಭಾಸ್ಕರರೆಡ್ಡಿ, ಶ್ರೀನಿವಾಸ, ಗಣೇಶರೆಡ್ಡಿ ಸಹಿತ ಹಲವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ನಂತರ ಮಾತನಾಡಿ, ಸಮೃದ್ದ ಕರ್ನಾಟಕ ನಿರ್ಮಿಸುವ ನಮ್ಮ ಸಂಕಲ್ಪದ ಸಾಧನೆಗೆ ಚುನಾವಣಾ ಫಲಿತಾಂಶವು ಮುನ್ನುಡಿ ಬರೆಯಲಿದೆ ಎಂದರು.
ಎಚ್ಚರಿಕೆಯಿಂದ ಚುನಾವಣೆ ಎದುರಿಸಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಹಾಗೂ ಹಿಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ನಡೆದಿರುವ ಅಭಿವೃದ್ದಿ ಕಾಮಗಾರಿಗಳನ್ನು ಜನರಿಗೆ ಮನವರಿಕೆ ಮಾಡಿಕೊಂಡುವ ಮೂಲಕ ಮತ್ತೊಮ್ಮೆ ಕರ್ನಾಟಕದಲ್ಲಿ ಕಮಲ ಅರಳುವಂತಹ ವಾತಾವರಣ ನಿರ್ಮಾಣವಾಗಿದೆ. ಕಾರ್ಯಕರ್ತರು ಅತಿಯಾದ ಆತ್ಮವಿಶ್ವಾಸದ ಬದಲಿಗೆ ಎಚ್ಚರಿಕೆಯಿಂದ ಚುನಾವಣೆ ಎದುರಿಸಬೇಕೆಂದರು.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಎಂ.ಬಿ.ಪಾಟೀಲ್ ವಿಶ್ವಾಸ
ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಶ್ರಮಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗಿದೆ. ಇಡೀ ದೇಶದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡುವ ಮೂಲಕ ಈ ಭಾಗದ ರೈತರು ಮತ್ತು ಬಡವರ ಮಕ್ಕಳು ಸಹ ವೈದ್ಯರಾಗುವ ಅವಕಾಶವನ್ನು ಕಲ್ಪಿಸಲಾಗಿದೆ ಜಿಲ್ಲೆಯು ಶೈಕ್ಷಣಿಕ ಕೇಂದ್ರವಾಗಿ ಹೊರಹೊಮ್ಮುತ್ತಿದೆಂದರು.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಪ್ರಚಾರ ಮಾಡಿ: ಮಾಜಿ ಸಚಿವ ಎಚ್.ವೈ.ಮೇಟಿ
22,000 ಮಂದಿಗೆ ನಿವೇಶನ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಈಗಾಗಲೇ 22 ಸಾವಿರ ಜನರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಂಡು ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರ ಹಸ್ತದಿಂದ ಹಕ್ಕುಪತ್ರಗಳನ್ನು ಸಹ ವಿತರಿಸಲಾಗಿದೆ ಆದರೂ ಸಹ ವಿರೋಧ ಪಕ್ಷದ ನಾಯಕರು ಜನರನ್ನು ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಿದ್ದಾರೆಂದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.