ರಾಜ್ಯದ ಜನರಿಗೆ ಬಿಜೆಪಿಯೇ ಭರವಸೆಯಾದ್ರೆ ಕ್ಷೇತ್ರದ ಅಭಿವೃದ್ಧಿಗೆ ನಾನೇ ಭರವಸೆ: ಸಚಿವ ಕೆ.ಸಿ.ನಾರಾಯಣಗೌಡ

ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರವಳ್ಳಿ, ಮಂದಗೆರೆ ಮತ್ತು ಕಸಬಾ ಹೋಬಳಿಯ ಹರಿಹರಪುರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಕೆ.ಸಿ.ನಾರಾಯಣಗೌಡ ಬಿರುಸಿನ ಮತಯಾಚನೆ ಮಾಡಿದರು. 

Karnataka Election 2023 Minister KC Narayana Gowda Talks Over BJP gvd

ಕೆ.ಆರ್‌.ಪೇಟೆ (ಏ.28): ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರವಳ್ಳಿ, ಮಂದಗೆರೆ ಮತ್ತು ಕಸಬಾ ಹೋಬಳಿಯ ಹರಿಹರಪುರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಕೆ.ಸಿ.ನಾರಾಯಣಗೌಡ ಬಿರುಸಿನ ಮತಯಾಚನೆ ಮಾಡಿದರು. ಜನಾಶೀರ್ವಾದ ಯಾತ್ರೆ ಹೆಸರಿನಲ್ಲಿ ಅಕ್ಕಿಹೆಬ್ಬಾಳು ಹೋಬಳಿಯ ಬೀರವಳ್ಳಿ ಮತ್ತು ಮಂದಗೆರೆ ಗ್ರಾಪಂ ವ್ಯಾಪ್ತಿಯ ಬೀರವಳ್ಳಿ, ಗುಬ್ಬಹಳ್ಳಿ, ಚೌಡ ಸಮುದ್ರ, ಮೂಡನಹಳ್ಳಿ, ಆಲೇನಹಳ್ಳಿ, ಹೊನ್ನೇನಹಳ್ಳಿ, ಮಂದಗರೆ, ಬೇವಿನಹಳ್ಳಿ ಮುಂತಾದ ಗ್ರಾಮಗಳಲ್ಲಿ ಬುಧವಾರ ರಾತ್ರಿ ಪ್ರಚಾರ ಯಾತ್ರೆ ನಡೆಸಿದರು.

ಗುರುವಾರ ಬೆಳಗ್ಗೆ ಕಸಬಾ ಹೋಬಳಿಯ ಹರಿಹರಪುರ ಗ್ರಾಪಂ ವ್ಯಾಪ್ತಿಯ ತೆರ್ನೇನಹಳ್ಳಿ, ಹರಿಹರಪುರ, ಬೊಮ್ಮೇನಹಳ್ಳಿ, ಕೊಮ್ಮೇನಹಳ್ಳಿ, ಕತ್ತರಘಟ್ಟ, ಗೋವಿಂದೇಗೌಡನ ಕೊಪ್ಪಲು ಮತ್ತು ಬಿಲ್ಲರಾಮನಹಳ್ಳಿ ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ ಸಚಿವರು ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಬಿಜೆಪಿಯೇ ಭರವಸೆಯಾದರೆ ಕ್ಷೇತ್ರದ ಅಭಿವೃದ್ಧಿಗೆ ನಾನೇ ಭರವಸೆಯಾಗಿದ್ದೇನೆ. ಜೆಡಿಎಸ್‌ ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಅಂದಿನ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ ಎಂದರು.

‘ಮನ್‌ ಕಿ ಬಾತ್‌’ ಗಿನ್ನಿಸ್‌ ದಾಖಲೆ ಸೇರುವ ಸಾಧ್ಯ​ತೆ: ಸಂಸದ ಬಿ.ವೈ.ರಾಘವೇಂದ್ರ

ಕ್ಷೇತ್ರದ ಅಭಿವೃದ್ಧಿ, ಮಣ್ಣಿನ ಮಗ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪರನ್ನು ರಾಜ್ಯದ ಮುಖ್ಯಂತ್ರಿಯನ್ನಾಗಿಸಬೇಕೆನ್ನುವ ಸದುದ್ದೇಶದಿಂದ ಜೆಡಿಎಸ್‌, ಶಾಸಕ ಸ್ಥಾನವನ್ನು ತ್ಯಜಿಸಿ ಬಿಜೆಪಿ ಸೇರಿದೆ. ಕಳೆದ ಉಪ ಚುನಾವಣೆಯಲ್ಲಿ ನೀವೆಲ್ಲಾ ನನ್ನ ಕೈಹಿಡಿದು ಮುನ್ನಡೆಸಿದ ಪರಿಣಾಮ ಕಮಲವೇ ಅರಳದ ಮಂಡ್ಯ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಶಾಸಕನಾಗಿ ಮತ್ತು ಸಚಿವನಾಗಿ ಕೆಲಸ ಮಾಡುವ ಅವಕಾಶ ನನ್ನದಾಗಿದೆ ಎಂದರು. ಅಕ್ಕಿಹೆಬ್ಬಾಳು ಹೋಬಳಿಯ 11 ಕೆರೆಗಳನ್ನು ಹಾರಂಗಿ ನೀರಿನಿಂದ ತುಂಬಿಸುವ ಕೆಲಸಕ್ಕೆ ಚಾಲನೆ ನೀಡಿದ್ದೇನೆ. 

ಹೊಸಹೊಳಲು ಚಿಕ್ಕಕೆರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಪಟ್ಟಣದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ದೊರಕಿದೆ ಎಂದರು. ಪಟ್ಟಣದ ಒಳಾಂಗಣ ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕ್ರೀಡಾಂಗಣದಲ್ಲಿ ಐಟೆಕ್‌ ಒಳಾಂಗಣ ಕ್ರೀಡಾಂಗಣವನ್ನು ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಕುಂಭ ಮೇಳ, ಆರೋಗ್ಯ ಮೇಳ, ಉದ್ಯೋಗ ಮೇಳ ಸಂಘಟಿಸಿ ಧಾರ್ಮಿಕ, ಐದ್ಯೋಗಿಕ ಮತ್ತು ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿದ್ದೇನೆ ಎಂದರು. ಮತ್ತೊಮ್ಮೆ ನನಗೆ ಅಧಿಕಾರ ಕೊಟ್ಟರೆ ನನ್ನ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ ಕ್ಷೇತ್ರದ ಜನರ ಆರ್ಥಿಕ ಪ್ರಗತಿಗೆ ಶಕ್ತಿ ತುಂಬುತ್ತೇನೆ. 

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕ್ಷೇತ್ರದ ಜನ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ಗಮನ ನೀಡದೆ ಅಭಿವೃದ್ಧಿಗಾಗಿ ಬಿಜೆಪಿಗೆ ಮತಹಾಕುವಂತೆ ಮನವಿ ಮಾಡಿದರು. ಈ ವೇಳೆ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್‌, ಪುರಸಭಾ ಸದಸ್ಯ ಕೆ.ಎಸ್‌.ಸಂತೋಷ್‌ಕುಮಾರ್‌, ಮನ್ಮುಲ್‌ ಮಾಜಿ ಅಧ್ಯಕ್ಷ ಚನ್ನಿಂಗೇಗೌಡ, ಬೀರವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎನ್‌.ಕುಮಾರ್‌, ಬೇವಿನಹಳ್ಳಿ ರವಿ, ಮೂಡನಹಳ್ಳಿ ಆನಂದ, ರೈಸ್‌ ಮಿಲ ಕೃಷ್ಣೇಗೌಡ, ಶಾಮಿಯಾನ ಸತೀಶ್‌, ಶೋಬಿತ್‌, ಚಂದ್ರಪ್ಪ, ರವಿ, ಮಲ್ಲೇಶ್‌, ನಾಗರಾಜು, ಹರಿಹರಪುರ ಹರಿಶ್ಚಂದ್ರ, ಬೊಮ್ಮೇನಳ್ಳಿ ಹರ್ಷ, ಬಲರಾಮೇಗೌಡ ಹಲವರು ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

ಕಾಂಗ್ರೆಸ್‌ ಕೊಟ್ಟ ಭರವಸೆ ಈಡೇರಿಸಿಲ್ಲ: ನಿರ್ಮಲಾ ಸೀತಾರಾಮನ್‌

ಸಚಿವನಾಗಿ ನಾನು ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ದುಡಿದಿದ್ದೇನೆ. ಕಟ್ಟಹಳ್ಳಿ, ಗೂಡೇ ಹೊಸಹಳ್ಳಿ ಏತ ನೀರಾವರಿ ಯೋಜನೆ ಅನುಷ್ಟಾನಗೊಳಿಸುವ ಮೂಲಕ ತಾಲೂಕಿನ ಬರಪೀಡಿತ ಸಂತೇಬಾಚಹಳ್ಳಿ ಮತ್ತು ಶೀಳನೆರೆ ಹೋಬಳಿಯ ಸಮಗ್ರ ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಕಾರ್ಯ ಮಾಡಿದ್ದೇನೆ.
-ಕೆ.ಸಿ.ನಾರಾಯಣಗೌಡ ಕ್ರೀಡಾ ಸಚಿವ

Latest Videos
Follow Us:
Download App:
  • android
  • ios