ಕಾಂಗ್ರೆಸ್‌ ಅಭ್ಯರ್ಥಿ ನನಗೆ ಲೆಕ್ಕಕ್ಕಿಲ್ಲ: ಶಾಸಕ ಎಂ.ಸತೀಶ್‌ ರೆಡ್ಡಿ

ಚುನಾವಣೆ ಸಂದರ್ಭದಲ್ಲಿ ಬಂದು ಹೋಗುವ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೆಚ್ಚು ಗಮನವನ್ನು ನೀಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಎಂ.ಸತೀಶ್‌ ರೆಡ್ಡಿ ಹೇಳಿದರು. ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ಉಮೇದುವಾರಿಕೆ ಸಲ್ಲಿಸಿ ಮಾತನಾಡಿದರು. 

Karnataka Election 2023 MLA M Satish Reddy Slams On Congress gvd

ಬೊಮ್ಮನಹಳ್ಳಿ (ಏ.19): ಚುನಾವಣೆ ಸಂದರ್ಭದಲ್ಲಿ ಬಂದು ಹೋಗುವ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಹೆಚ್ಚು ಗಮನವನ್ನು ನೀಡುವ ಅವಶ್ಯಕತೆ ಇಲ್ಲ ಎಂದು ಶಾಸಕ ಎಂ.ಸತೀಶ್‌ ರೆಡ್ಡಿ ಹೇಳಿದರು. ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ಉಮೇದುವಾರಿಕೆ ಸಲ್ಲಿಸಿ ಮಾತನಾಡಿದರು. ಇದುವರೆಗೂ ಜನರಿಗೆ ಕಾಣಿಸಿಕೊಳ್ಳದ, ಕೊರೋನಾ ಸಂದರ್ಭದಲ್ಲಿ ಎಲ್ಲಿದ್ದರೂ ಎಂದು ಯಾರಿಗೂ ಗೊತ್ತಿಲ್ಲದ ಕಾಂಗ್ರೆಸ್‌ ಅಭ್ಯರ್ಥಿ ಈ ಬಾರಿ ಕಣದಲ್ಲಿದ್ದಾರೆ. ಅವರಿಗೆ ಠೇವಣಿ ಇಲ್ಲದಂತೆ ಈ ಬಾರಿ ಬೊಮ್ಮನಹಳ್ಳಿಯ ಜನತೆ ಮಾಡಲಿದ್ದಾರೆ ಎಂದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಡಬಲ್‌ ಫೋರ್ಸ್‌ನಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡಿವೆ. ಸತತ ಮೂರು ಬಾರಿ ಆಯ್ಕೆಯಾಗುವ ಮೂಲಕ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇವುಗಳ ಆಧಾರದ ಮೇಲೆ ಮತದಾರರು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂಬ ಆತ್ಮವಿಶ್ವಾಸದ ನುಡಿಗಳನ್ನಾಡಿದರು.

ಬೆಂಗಳೂರಿನಲ್ಲಿ ಕಾಂಗ್ರೆಸ್‌, ಬಿಜೆಪಿ, ಆಪ್‌ನಿಂದ ಒಟ್ಟು 21 ನಾಮಪತ್ರ: ಭಾರಿ ಮೆರವಣಿಗೆ

ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ಮೆರವಣಿಗೆಯಲ್ಲಿ ಆಗಮಿಸಿದ ಸತೀಶ್‌ ರೆಡ್ಡಿ, ಹೊಂಗಸಂದ್ರದ ಶ್ರೀ ವೀರಾಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಳಿಕ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ತಮಟೆ ವಾದ್ಯಗಳ ಮೂಲಕ ಬಿಬಿಎಂಪಿ ವಲಯ ಕಚೇರಿ ಪಕ್ಕದಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯದಿಂದ ಕಾರ್ಯಕರ್ತರು ಹಾಗೂ ಮುಖಂಡರು ಸತೀಶ್‌ ರೆಡ್ಡಿ ಅವರನ್ನು ಹೊತ್ತು ಬಿಬಿಎಂಪಿ ವಲಯ ಕಚೇರಿಗೆ ಕರೆತಂದರು. ಪತ್ನಿ ಆಶಾ ಸಮೇತ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿದ ಸತೀಶ್‌ ರೆಡ್ಡಿ ಅವರು ನಾಮಪತ್ರವನ್ನು ಸಲ್ಲಿಸಿದರು. ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರಾದ ಹೊಂಗಸಂದ್ರ ಶ್ರೀನಿವಾಸ್‌ ರೆಡ್ಡಿ, ನ್ಯಾನಪನಹಳ್ಳಿ ಮಂಜುನಾಥ್‌, ಮಂಜುನಾಥ್‌ ರೆಡ್ಡಿ, ಸಯ್ಯದ್‌ ಸಲಾಂ, ರಮೇಶ್‌, ಕೇಬಲ್‌ ಶ್ರೀನಿವಾಸ್‌ ರೆಡ್ಡಿ ಹಾಜರಿದ್ದರು.

ಸತೀಶ್‌ ರೆಡ್ಡಿ ಬಳಿ 151 ಕೋಟಿ ಆಸ್ತಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಸತೀಶ್‌ ರೆಡ್ಡಿ 151.25 ಕೋಟಿಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಆಸ್ತಿ ವಿವರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 4.83 ಕೋಟಿ ನಗದು ಹೊಂದಿರುವ ಸತೀಶ್‌ ರೆಡ್ಡಿ 32.58 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪತ್ನಿ ಆಶಾ ಸತೀಶ್‌ ಅವರು ವಿವಿಧ ಬ್ಯಾಂಕ್‌ಗಳ ಖಾತೆಯಲ್ಲಿ 78.66 ಲಕ್ಷ ನಗದು, 5.84 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪುತ್ರಿ ರಿಶಿಕಾ ಬ್ಯಾಂಕ್‌ಗಳ ಖಾತೆಯಲ್ಲಿ 13.61 ಲಕ್ಷ ಇದ್ದು, 47.61 ಲಕ್ಷ ಮೌಲ್ಯದ ಚರಾಸ್ತಿ ಇದೆ. 

ಸಚಿವ ಅಶೋಕ್‌ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಸ್ಪರ್ಧಿ ಯಾರು?: ಕುತೂಹಲ

ಅಂತೆಯೇ ಪುತ್ರ ನಿಶಾಂತ್‌ ಬ್ಯಾಂಕ್‌ಗಳ ಖಾತೆಯಲ್ಲಿ 12.65 ಲಕ್ಷ ಇದ್ದು, 46.65 ಲಕ್ಷ ಮೌಲ್ಯದ ಚರಾಸ್ತಿ ಇದೆ ಎಂದು ಆಸ್ತಿ ವಿವರದಲ್ಲಿ ಉಲ್ಲೇಖಿಸಲಾಗಿದೆ. ಸತೀಶ್‌ ರೆಡ್ಡಿ ಹೆಸರಲ್ಲಿ 94.61 ಕೋಟಿ ಮೌಲ್ಯದ ಸ್ಥಿರಾಸ್ತಿ ಇದ್ದು, ಈ ಪೈಕಿ 17.66 ಕೋಟಿ ಮೌಲ್ಯದ ಕೃಷಿ ಭೂಮಿ ಇದೆ. ಪತ್ನಿ ಹೆಸರಲ್ಲಿ 17.27 ಕೋಟಿ ಮೌಲ್ಯದ ಸ್ಥಿರಾಸ್ತಿ ಇದ್ದು, ಇದರಲ್ಲಿ 6.15 ಕೋಟಿ ಮೌಲ್ಯದ ಕೃಷಿ ಭೂಮಿ ಇದೆ. ಸತೀಶ್‌ ರೆಡ್ಡಿಗೆ 39.82 ಕೋಟಿ ಸಾಲ ಇದೆ. ಪತ್ನಿಗೆ 7.41 ಕೋಟಿ ಸಾಲ ಇದೆ ಎಂದು ನಮೂದಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios