Asianet Suvarna News Asianet Suvarna News

ಬಡವರ ವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ: ಶಾಸಕ ಯತೀಂದ್ರ

ಶ್ರೀಮಂತರ ಪರವಿರುವ, ಬಡವರ ವಿರೋಧಿಯಾಗಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್‌ ಸರ್ಕಾರವನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಬೇಕು ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. 

Karnataka Election 2023 MLA Yathindra Siddaramaiah Slams On BJP At Mysuru gvd
Author
First Published Apr 14, 2023, 10:21 PM IST

ಮೈಸೂರು (ಏ.14): ಶ್ರೀಮಂತರ ಪರವಿರುವ, ಬಡವರ ವಿರೋಧಿಯಾಗಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್‌ ಸರ್ಕಾರವನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಬೇಕು ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ವರುಣ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಹಡಜನ, ಮಾರಶೆಟ್ಟಹಳ್ಳಿ, ತುಕ್ಕಡಿ ಮಾದಯ್ಯನಹುಂಡಿ, ದೇವಲಾಪುರ, ಚಿಕ್ಕೇಗೌಡನಹುಂಡಿಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಅವರ ಪರವಾಗಿ ಗುರುವಾರ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಜನಸಾಮಾನ್ಯರು ಬಳಸುವಂತಹ ಗ್ಯಾಸ್‌, ಪೆಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ ಬೆಲೆಗಳನ್ನು ಏರಿಸುವುದರ ಜೊತೆಗೆ ಮಜ್ಜಿಗೆ ಮೊಸರಿಗೂ ಜಿಎಸ್‌ಟಿ ಹಾಕಿ ಬಡವರ ವಿರೋಧಿಯಾಗಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷ ಈ ಬಾರಿ ಬಡವರಿಗೆ ಹಲವಾರು ಕಾರ್ಯಕ್ರಮಗಳನ್ನು ಘೋಷಿಸಿದೆ. 200 ಯೂನಿಟ್‌ ವಿದ್ಯುತ್‌ ಉಚಿತ, ಪ್ರತಿ ಕುಟುಂಬದ ಮಹಿಳೆಗೆ 2000, ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ, ಪದವೀಧರರಿಗೆ 3000 ಹೀಗೆ ಹಲವಾರು ಕಾರ್ಯಕ್ರಮಗಳನ್ನು ಸರ್ಕಾರ ಬಂದ ತಕ್ಷಣ ಜಾರಿಗೆ ತರಲಿದ್ದು, ಎಲ್ಲರೂ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು. ಇದು ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆಯಾಗಿದ್ದು, ಕಳೆದ 40 ವರ್ಷದಿಂದ ನಿಮಗಾಗಿ ಸೇವೆ ಮಾಡಿದ್ದಾರೆ. ಅವರನ್ನು ಗೌರವಯುತವಾಗಿ ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ತಾವೆಲ್ಲರೂ ಸಹಕರಿಸುವುದರ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಮಾಡಬೇಕು ಎಂದು ಅವರು ಕೋರಿದರು.

ಈ ಬಾರಿ ಬಿಜೆಪಿ 140 ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು: ಸಚಿವ ಎಸ್‌.ಟಿ.ಸೋಮಶೇಖರ್‌

ಸಿದ್ದರಾಮಯ್ಯರವರ ಆಪ್ತ ಕಾರ್ಯದರ್ಶಿ ಎಂ. ರಾಮಯ್ಯ, ತಾಪಂ ಮಾಜಿ ಸದಸ್ಯರಾದ ಮಂಜುಳ ಮಂಜುನಾಥ್‌, ಎಂ.ಟಿ. ರವಿಕುಮಾರ್‌, ಗುರುಸ್ವಾಮಿ, ಸಿದ್ದಯ್ಯ, ನಂಜಪ್ಪ, ಪುರಸಭಾ ಮಾಜಿ ಅಧ್ಯಕ್ಷ ಹೆಳವರಹುಂಡಿ ಸೋಮು, ಮುಖಂಡರಾದ ಮಣಿ, ಮರಯ್ಯ, ಚೆನ್ನಾಜಮ್ಮ, ಛಾಯಾ, ಪಟ್ಟೆಹುಂಡಿ ಕಲ್ಪನಾ, ರಾಯನಹುಂಡಿ ರವಿ, ಸಕಳ್ಳಿ ಬಸವರಾಜು ಮೊದಲಾದವರು ಇದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಯಾರೇ ನಿಂತರೂ ಸಿದ್ದರಾಮಯ್ಯಗೆ ಜಯ: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳು ಯಾರೇ ನಿಂತರೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆದ್ದೇ ಗೆಲ್ಲುತ್ತಾರೆ ಎಂದು ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಅವರ ಪರವಾಗಿ ಮೆಲ್ಲಹಳ್ಳಿ, ಹಳ್ಳಿಕೆರೆಹುಂಡಿ, ಶಿವಪುರ, ಲಕ್ಷ್ಮೇಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿ ಅವರು ಮಾತನಾಡಿದರು. ಹಿರಿಯರಾದ ಸೋಮಣ್ಣ ಅವರಿಗೆ ವರುಣ ಕ್ಷೇತ್ರದಲ್ಲಿ ನಿಲ್ಲಲು ಇಷ್ಟವಿಲ್ಲದಿದ್ದರೂ ಬಲವಂತವಾಗಿ ಬಿಜೆಪಿಯವರು ನಿಲ್ಲಿಸಿದ್ದಾರೆ. 

ಚುನಾವಣೆ ಹಿನ್ನೆಲೆ, 50 ಸಾವಿರಕ್ಕೂ ಹೆಚ್ಚು ನಗದು ಒಯ್ಯುವಂತಿಲ್ಲ: ಡಿಸಿ ಯಶವಂತ ಗುರುಕರ್ ಸೂಚನೆ

ಅದಕ್ಕೆ ನಾವು ಸ್ವಾಗತಿಸುತ್ತೇವೆ. ಹಲವಾರು ಅಭಿವೃದ್ಧಿ ಕೆಲಸಗಳನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಮತದಾರರ ಮೇಲೆ ನಮಗೆ ವಿಶ್ವಾಸವಿದೆ. ಸಿದ್ದರಾಮಯ್ಯ ಅವರು ಹೆಚ್ಚುಮತಗಳ ಅಂತರದಿಂದ ಗೆಲ್ಲುವ ಅವಕಾಶ ಹೆಚ್ಚಾಗಿದೆ ಎಂದರು. ಸಿದ್ದರಾಮಯ್ಯ ಅವರು ವರುಣ ಕ್ಷೇತ್ರಕ್ಕೆ .2 ಸಾವಿರ ಕೋಟಿಗಿಂತಲೂ ಹೆಚ್ಚು ಅನುದಾನ ನೀಡಿ ರಸ್ತೆಗಳು, ಚರಂಡಿಗಳು, ಕುಡಿಯುವ ನೀರು, ಮನೆಗಳು, ಸಮುದಾಯ ಭವನಗಳು, ಕೆರೆ ತುಂಬಿಸುವ ಯೋಜನೆ, ನಿಗಮ ಮಂಡಳಿಗಳಿಂದ ವಾಹನಗಳು, ಗಂಗಾ ಕಲ್ಯಾಣ ಯೋಜನೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮತದಾರರ ಮೇಲೆ ನಮಗೆ ವಿಶ್ವಾಸವಿದೆ. ಸಿದ್ದರಾಮಯ್ಯ ಅವರು ಹೆಚ್ಚುಮತಗಳ ಅಂತರದಿಂದ ಗೆಲ್ಲುವ ಅವಕಾಶ ಹೆಚ್ಚಾಗಿದೆ ಎಂದರು.

Follow Us:
Download App:
  • android
  • ios