ಲಿಂಗಾಯತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ: ರಾಜೀವ್‌ ಚಂದ್ರಶೇಖರ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತರೆಲ್ಲರೂ ಭ್ರಷ್ಟರು ಎನ್ನುವ ಅರ್ಥದಲ್ಲಿ ಮಾತನಾಡಿದ್ದು ಇಡೀ ಲಿಂಗಾಯತ ಸಮುದಾಯಕ್ಕೆ ಮಾಡಿದ ಅವಮಾನ. 

Karnataka Election 2023 Union Minister Rajeev Chandrasekhar Slams On Siddaramaiah gvd

ಬೆಂಗಳೂರು (ಏ.24): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತರೆಲ್ಲರೂ ಭ್ರಷ್ಟರು ಎನ್ನುವ ಅರ್ಥದಲ್ಲಿ ಮಾತನಾಡಿದ್ದು ಇಡೀ ಲಿಂಗಾಯತ ಸಮುದಾಯಕ್ಕೆ ಮಾಡಿದ ಅವಮಾನ. ಇದಕ್ಕೆ ಆ ಸಮುದಾಯವೇ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಕಾಂಗ್ರೆಸ್‌ ನಿಂದನೆ, ಸುಳ್ಳು ಆರೋಪ-ಭರವಸೆ ಒಡೆದು ಆಳುವ ಮತ್ತು ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್‌ ನಡೆಸುತ್ತಿದೆ. ಇದಕ್ಕೆ ಕಳೆದ 36 ಗಂಟೆಗಳಲ್ಲಿ ಕಾಂಗ್ರೆಸ್‌ ಪಕ್ಷದ ವಿವಿಧ ನಾಯಕರ ತೋರಿರುವ ನಡವಳಿಕೆ ಮತ್ತು ವರ್ತನೆಗಳೇ ನಿದರ್ಶನವಾಗಿವೆ. ಇದರಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ಟೀಕಿಸುವ ಭರದಲ್ಲಿ ಲಿಂಗಾಯತ ಸಮುದಾಯವನ್ನೇ ಅವಮಾನಿಸುವ ರೀತಿ ಮಾತನಾಡಿರುವುದೂ ಒಂದು ನಿದರ್ಶನವಾಗಿದೆ ಎಂದರು.

ಭ್ರಷ್ಟಾಚಾರ, ಹಗರಣದಿಂದಲೇ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌: ರಾಜೀವ್‌ ಚಂದ್ರಶೇಖರ್‌

ಸಿದ್ದರಾಮಯ್ಯ ಅವರು ಯಾವಾಗಲೂ ಹಿಂದೂ ವಿರೋಧಿ ನೀತಿ ಮತ್ತು ಲಿಂಗಾಯತರನ್ನು ಒಡೆದು ಆಳುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಕೂಡ ಲಿಂಗಾಯತ ಸಮುದಾಯವನ್ನು ಒಡೆಯುವ ಪ್ರಯತ್ನ ಮಾಡಿ ತಕ್ಕ ಪ್ರತಿಫಲ ಪಡೆದಿದ್ದರು. ಈಗ ಮತ್ತದೇ ಪ್ರಯತ್ನ ಮಾಡಿದ್ದಾರೆ. ‘ಲಿಂಗಾಯತರೇ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರೇ ರಾಜ್ಯವನ್ನು ಹಾಳು ಮಾಡಿದ್ದಾರೆ’ ಎಂದು ಹೇಳಿ ಇಡೀ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಮತ್ತೊಂದೆಡೆ ತಮ್ಮನ್ನು ಪ್ರಶ್ನೆ ಮಾಡಿದ ವ್ಯಕ್ತಿಯೊಬ್ಬರನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಕಪಾಳಮೋಕ್ಷ ಮಾಡಿದ್ದಾರೆ. ಇದೆಲ್ಲದಕ್ಕೂ ತಕ್ಕ ಉತ್ತರವನ್ನು ರಾಜ್ಯದ ಜನರೇ ನೀಡುತ್ತಾರೆ ಎಂದರು.

ದೆಹಲಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ವಸ್ತಾರೆ ಸುಪ್ರಿಯಾ ಶ್ರೀನಾಥೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮಸ್ಕರಿಸುತ್ತಿರುವ ಚಿತ್ರವನ್ನು ಹಾಕಿ ಸಾರಿ ಪೇ ಸಿಎಂ ಎಂಬುದಾಗಿ ನಿಂದಿಸಿದ್ದಾರೆ. ಹಾಲಿ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ವಿರುದ್ಧ ಅಸ್ಸಾಂ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಕಿರುಕುಳದ ದೂರು ನೀಡಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷ ಕಿರುಕುಳ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದೆ ಅಂಕಿತಾರನ್ನೇ ಪಕ್ಷದಿಂದ ಅಮಾನತುಗೊಳಿಸಿದೆ. 

ಹಾಸನಕ್ಕೆ ಇಂದು ಶಾ ಭೇಟಿ: ನಮಗೆ ದೇವೇಗೌಡ, ಕುಮಾರಣ್ಣನೇ ಸಾಕು, ಇನ್ಯಾರು ಬೇಡ ಎಂದ ಎಚ್.ಡಿ.ರೇವಣ್ಣ

ಇಂತಹ ವರ್ತನೆ, ನಡವಳಿಕೆ ತೋರುವ ಪಕ್ಷದವರಿಗೆ ಅಧಿಕಾರ ನೀಡಿದರೆ ಏನಾಗುತ್ತದೆ ಎಂದು ಜನರೇ ಯೋಚಿಸಬೇಕು ಎಂದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

Latest Videos
Follow Us:
Download App:
  • android
  • ios