ಸಿದ್ದರಾಮಯ್ಯ ಹಿಂದು ವಿರೋಧಿ, ಮುಸ್ಲಿಂ ನಾಯಕ: ಶೋಭಾ ಕರಂದ್ಲಾಜೆ

‘ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ. ಅದೇ ಪಕ್ಷದ ಡಿ.ಕೆ.ಶಿವಕುಮಾರ್‌ ಅವರು ಕ್ರಿಮಿನಲ್‌ಗಳು ಹಾಗೂ ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪಾದಿಸಿದ್ದಾರೆ. 

Karnataka Election 2023 Union Minister Shobha Karandlaje Slams On Siddaramaiah gvd

ಬೆಂಗಳೂರು (ಏ.21): ‘ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ. ಅದೇ ಪಕ್ಷದ ಡಿ.ಕೆ.ಶಿವಕುಮಾರ್‌ ಅವರು ಕ್ರಿಮಿನಲ್‌ಗಳು ಹಾಗೂ ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ’ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಆಪಾದಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಕೈ ಕಲುಷಿತಗೊಂಡಿದೆ. ಕಾಂಗ್ರೆಸ್‌ ಕೈಗೆ ರಕ್ತ ಅಂಟಿದೆ. 

ಸಿದ್ದರಾಮಯ್ಯ ಮತ್ತು ಶಿವಕುಮಾರ್‌ ಅವರು ಅಪರಾಧಿಗಳ ಜೊತೆ ಕೈ ಜೋಡಿಸಿದ್ದಾರೆ. ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣದ ಆರೋಪಿ ನನ್ನ ಸಹೋದರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮತಾಂತರ ತಡೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ ಹೇಳುತ್ತಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡು ರಸ್ತೆಯಲ್ಲಿ ಗೋವುಗಳನ್ನು ಹತ್ಯೆ ಮಾಡಿದ್ದ ಕಾಂಗ್ರೆಸ್‌ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ರಿಜಿನ್‌ ಚಂದ್ರನ್‌ ಬಳಿಕ ಗೋವಿನ ರಕ್ತದ ಜೊತೆ ಚೆಲ್ಲಾಟವಾಡಿದ್ದ. 

ಡಿಕೆಶಿ ವಿರುದ್ಧದ ಐಟಿ, ಇಡಿ ತನಿಖೆ ಬಗ್ಗೆ ಆತಂಕ: ಡಿಕೆಶಿ ನಾಮಪತ್ರ ಓಕೆ ಆದರೆ ಡಿಕೆಸು ವಾಪಸ್‌?

ಇಂಥವನ ಜೊತೆ ಶಿವಕುಮಾರ್‌ ಓಡಾಡುತ್ತಾರೆ. ರಾಹುಲ್‌ ಗಾಂಧಿ ಇವನ ಜೊತೆ ಪಾದಯಾತ್ರೆ ಮಾಡುತ್ತಾರೆ ಎಂದು ಕಿಡಿಕಾರಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಮೋದಿ, ಶಾ, ಯೋಗಿ ಬಿಜೆಪಿ ಸ್ಟಾರ್‌ ಪ್ರಚಾರಕರು: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಕೇಂದ್ರ ಸಚಿವರಾದ ಅಮಿತ್‌ ಶಾ, ನಿತಿನ್‌ ಗಡ್ಕರಿ, ಸ್ಮೃತಿ ಇರಾನಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ರಾಜ್ಯ ವಿಧಾನಸಭೆಯಲ್ಲಿ ಪ್ರಚಾರ ನಡೆಸಲಿರುವ 40 ಮಂದಿ ಸ್ಟಾರ್‌ ಪ್ರಚಾರಕರ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಬಿಜೆಪಿಯು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ: ಒಟ್ಟು 3632 ಮಂದಿ ಕಣಕ್ಕೆ

ಪಟ್ಟಿ ಹೀಗಿದೆ: ನರೇಂದ್ರ ಮೋದಿ, ಜೆ.ಪಿ.ನಡ್ಡಾ, ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿತಿನ್‌ ಗಡ್ಕರಿ, ಬಿ.ಎಸ್‌.ಯಡಿಯೂರಪ್ಪ, ನಳಿನ್‌ಕುಮಾರ್‌ ಕಟೀಲ್‌, ಬಸವರಾಜ ಬೊಮ್ಮಾಯಿ, ಪ್ರಹ್ಲಾದ್‌ ಜೋಶಿ, ಡಿ.ವಿ.ಸದಾನಂದಗೌಡ, ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌.ಅಶೋಕ್‌, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್‌, ಮನ್ಸುಖ್‌ ಮಾಂಡವಿಯ, ಕೆ.ಅಣ್ಣಾಮಲೈ, ಅರುಣ್‌ ಸಿಂಗ್‌, ಡಿ.ಕೆ.ಅರುಣಾ, ಸಿ.ಟಿ.ರವಿ, ಯೋಗಿ ಆದಿತ್ಯನಾಥ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ಹಿಮಂಬಿಸ್ವ ಶರ್ಮ, ದೇವೇಂದ್ರ ಫಡ್ನವೀಸ್‌, ಪ್ರಭಾಕರ್‌ ಕೋರೆ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ್‌ ಖೂಬ, ಅರವಿಂದ್‌ ಲಿಂಬಾವಳಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಡಾ.ಉಮೇಶ್‌ ಜಾಧವ್‌, ಛಲವಾದಿ ನಾರಾಯಣಸ್ವಾಮಿ, ಎನ್‌.ರವಿಕುಮಾರ್‌, ಜಿ.ವಿ.ರಾಜೇಶ್‌, ಜಗ್ಗೇಶ್‌, ಶ್ರುತಿ ಹಾಗೂ ತಾರಾ ಅನುರಾಧ.

Latest Videos
Follow Us:
Download App:
  • android
  • ios