ಹನುಮ ಮಂದಿರಕ್ಕಾಗಿ ಬಿಜೆಪಿಗೆ ಮತ ನೀಡಿ: ಸಿ.ಟಿ.ರವಿ

ರಾಮಮಂದಿರ ನಿರ್ಮಾಣ ಮಾಡಿದವರಿಗೆ ನ್ಯಾಯ ಕೊಡಿಸಲು, ಶ್ರೀರಂಗಪ್ಪಟಣದ ಮೂಡಲ ಬಾಗಿಲ ಹನುಮ ಮಂದಿರದಲ್ಲಿ ಹನುಮ ಇರಬೇಕು ಎಂದಾದರೆ ನೀವು ಬಿಜೆಪಿಗೆ ಮತನೀಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕರೆ ನೀಡಿದರು. 

Karnataka Election 2023 Vote for BJP for Hanuman Mandir Says CT Ravi gvd

ಕೆ.ಆರ್‌.ಪೇಟೆ (ಏ.26): ರಾಮಮಂದಿರ ನಿರ್ಮಾಣ ಮಾಡಿದವರಿಗೆ ನ್ಯಾಯ ಕೊಡಿಸಲು, ಶ್ರೀರಂಗಪ್ಪಟಣದ ಮೂಡಲ ಬಾಗಿಲ ಹನುಮ ಮಂದಿರದಲ್ಲಿ ಹನುಮ ಇರಬೇಕು ಎಂದಾದರೆ ನೀವು ಬಿಜೆಪಿಗೆ ಮತನೀಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕರೆ ನೀಡಿದರು. ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಅಭ್ಯರ್ಥಿ ಸಚಿವ ನಾರಾಯಣಗೌಡರ ಪರವಾಗಿ ಮತಯಾಚನೆ ಮಾಡಿ ಮಾತನಾಡಿ, ದಲಿತರಿಗೆ ಮೀಸಲಾತಿ ಹೆಚ್ಚಳ ಮಾಡಿದ್ದು ಕಾಂಗ್ರೆಸ್‌ ಅಥವಾ ಜೆಡಿಎಸ್‌ ಅಲ್ಲ. ನಮ್ಮ ಬಿಜೆಪಿ ಎಂದರು. ಒಳ ಮೀಸಲಾತಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಒಕ್ಕಲಿಗರು ಮತ್ತು ಲಿಂಗಾಯಿತರಿಗೆ ಮೀಸಲಾತಿ ಹೆಚ್ಚಳ ಮಾಡಿದೆ. 

ಬಿಜೆಪಿಯಿಂದ ಮಾತ್ರ ಸಾಮಾಜಿಕ ನ್ಯಾಯ ಕೊಡಲು ಸಾಧ್ಯ ಎಂದು ಹೇಳಿದರು. ಮನೆ ಮನೆಗೂ ಕರೆಂಟ್‌ ನೀಡಿದ್ದು, ಪ್ರತೀ ಮನೆಗೂ ಗ್ಯಾಸ್‌ ಸಂಪರ್ಕ ಒದಗಿಸಿದ್ದು, ಜಲ ಜೀವನ್‌ ಮಿಷನ್‌ ಮೂಲಕ ಪ್ರತಿಯೊಂದು ಮನೆಗೂ ಶುದ್ದ ಕುಡಿಯುವ ನೀರು ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಜನಧನ್‌ ಖಾತೆ ತೆರೆದು ಪ್ರತಿಯೊಂದು ಕುಟಂಬಕ್ಕೂ ಬ್ಯಾಂಕಿಂಗ್‌ ಸೌಲಭ್ಯ, ಪ್ರದಾನ ಮಂತ್ರಿ ಆವಾಸ್‌ ಯೋಜನೆ, ರೈತರ ಖಾತೆಗೆ ಹಣ ಹಾಕಿ ರೈತರ ಕೃಷಿ ಕಾರ್ಯಕ್ಕೆ ಶಕ್ತಿ ನೀಡುವ ಯೋಜನೆ ರೂಪಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದು ತಿಳಿಸಿದರು.

ಚುನಾವಣೆಯಲ್ಲಿ ಮತ್ತೊಮ್ಮೆಎಚ್‌ಡಿಕೆಯನ್ನು ಜನ ಆರ್ಶಿವದಿಸಲಿದ್ದಾರೆ: ಅನಿತಾ ಕುಮಾರಸ್ವಾಮಿ

ರಾಷ್ಟ್ರದ ಸಮಗ್ರತೆಯನ್ನು ಕಡೆಗಣಿಸಿರುವ ಕಾಂಗ್ರೆಸ್‌ ಹಾಗೂ ಸ್ವಾರ್ಥ ಸಾಧನೆ ಮಾಡುತ್ತಿರುವ ಜೆಡಿಎಸ್‌ ಪಕ್ಷವನ್ನು ರಾಜ್ಯದ ಪ್ರಬುದ್ಧ ಮತದಾರ ಬಂಧುಗಳು ತಿರಸ್ಕರಿಸಿ ರಾಷ್ಟ್ರದ ಏಕತೆ, ಸಮಗ್ರತೆ ಹಾಗೂ ಅಭಿವೃದ್ಧಿಗಾಗಿ ರಾಷ್ಟ್ರ ಹಾಗೂ ರಾಜ್ಯದಲ್ಲಿ ದುಡಿಯುತ್ತಿರುವ ಬಿಜೆಪಿ ಸರ್ಕಾರವನ್ನು ಬೆಂಬಲಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗೆ ಹೋರಾಟಗಾರರನ್ನು ಏನಾದರೂ ಸಂಚು ಮಾಡಿ ರಾಜಕೀಯವಾಗಿ ಮುಗಿಸಬೇಕೆಂದು ಸಂಚು ರೂಪಿಸುತ್ತಿವೆ. ನನ್ನ ಮತಕ್ಷೇತ್ರವಾದ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡು ನನ್ನನ್ನು ಶತಾಯಗತಾಯ ಸೋಲಿಸಲು ಮುಂದಾಗಿವೆ ಎಂದು ಕಿಡಿಕಾರಿದರು.

ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ನಾರಾಯಣಗೌರನ್ನು ಸೋಲಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪ್ರತ್ಯೇಕವಾಗಿ ಹೋರಾಟ ಮಾಡುತ್ತಿವೆ. ನಾರಾಯಣಗೌಡರಿಗೆ ತಾಲೂಕಿನ ಜನತೆಯ ಆಶೀರ್ವಾದವಿದೆ. ನೀವು ಬಿಜೆಪಿ ಅಭ್ಯರ್ಥಿಗೆ ಮತ ನೀಡಿದರೆ ರಾಜ್ಯದಲ್ಲಿ ಸುಭದ್ರವಾದ ಬಿಜೆಪಿ ಸರ್ಕಾರವು ಮತ್ತೆ ಆಡಳಿತಕ್ಕೆ ಬರುತ್ತದೆ. ಬಿಜೆಪಿ ಪಕ್ಷವು ಯಾವುದೇ ಹಂಗಿಲ್ಲದೇ 150ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಸ್ವತಂತ್ರವಾಗಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಭ್ಯರ್ಥಿ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, ನಾನು ಯಾವುದೇ ಸರ್ಕಾರಿ ಆಸ್ತಿಯನ್ನು ಲೂಟಿ ಮಾಡಿಲ್ಲ. ಹಣ ಆಸ್ತಿ ಮಾಡಲು ರಾಜಕಾರಣಕ್ಕೆ ಬಂದಿಲ್ಲ. ತಾಲೂಕಿನ ಮಗ ಬೂಕನಕೆರೆ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ತಾಲೂಕಿನ ಅಭಿವೃದ್ಧಿಗಾಗಿ ದುಡಿದಿದ್ದೇನೆ. 

ನನಗೆ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಡಿಸುವಂತೆ ಮನವಿ ಮಾಡಿದರು. ರೋಡ್ ಷೋ ಹಾಗೂ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ, ಮುಖಂಡರಾದ ಮಹೇಶ್‌ ನಾಯಕ, ಆರ್‌.ವಾಸು, ಬಿ.ಜವರಾಯಿಗೌಡ, ಅಂ.ಚಿ.ಸಣ್ಣಸ್ವಾಮೀಗೌಡ ಸೇರಿದಂತೆ ಹಲವರಿದ್ದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

ಭರವಸೆ ಈಡೇರಿಸದಿದ್ದರೆ ಮುಂದಿನ ಚುನಾವಣೆಗೆ ನಿಲ್ಲೋಲ್ಲ: ಸಚಿವ ಸುಧಾಕರ್‌

ಒಳ ಮೀಸಲಾತಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಒಕ್ಕಲಿಗರು ಮತ್ತು ಲಿಂಗಾಯಿತರಿಗೆ ಮೀಸಲಾತಿ ಹೆಚ್ಚಳ ಮಾಡಿದೆ. ಬಿಜೆಪಿಯಿಂಜ ಮಾತ್ರ ಸಾಮಾಜಿಕ ನ್ಯಾಯ ಕೊಡಲು ಸಾಧ್ಯ.ರಾಷ್ಟ್ರದ ಸಮಗ್ರತೆಯನ್ನು ಕಡೆಗಣಿಸಿರುವ ಕಾಂಗ್ರೆಸ್‌ ಹಾಗೂ ಸ್ವಾರ್ಥ ಸಾಧನೆ ಮಾಡುತ್ತಿರುವ ಜೆಡಿಎಸ್‌ ಪಕ್ಷವನ್ನು ರಾಜ್ಯದ ಪ್ರಬುದ್ಧ ಮತದಾರ ಬಂಧುಗಳು ತಿರಸ್ಕರಿಸಿ ರಾಷ್ಟ್ರದ ಏಕತೆಗಾಗಿರುವ ಬಿಜೆಪಿ ಗೆಲ್ಲಿಸಬೇಕು
-ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Latest Videos
Follow Us:
Download App:
  • android
  • ios