ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಹಿಂದಕ್ಕೆ ಪಡೆಯುತ್ತೇವೆ ಎಂದು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಅವರಿಗೆ ತಾಕತ್ತಿದ್ದಲ್ಲಿ ಈ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಲಿ ಎಂದು ಬಿಜೆಪಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಸವಾಲು ಹಾಕಿದರು.

ಪುತ್ತೂರು (ಮಾ.12) : ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಹಿಂದಕ್ಕೆ ಪಡೆಯುತ್ತೇವೆ ಎಂದು ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಅವರಿಗೆ ತಾಕತ್ತಿದ್ದಲ್ಲಿ ಈ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಲಿ ಎಂದು ಬಿಜೆಪಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ(KS Eshwarappa) ಸವಾಲು ಹಾಕಿದರು.

ಬಿಜೆಪಿ ವಿಜಯ ಸಂಕಲ್ಪ ಯಾತ್ರೆ(BJP Vijayasankalpa yatre)ಯು ಶನಿವಾರ ಸಂಜೆ ಪುತ್ತೂರಿಗೆ ಆಗಮಿಸಿತು. ಈ ಸಂದರ್ಭದಲ್ಲಿ ನಗರದ ಶ್ರೀ ವೆಂಕಟರಮಣ ದೇವಳದ ಮುಂಭಾಗದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಜಾತಿವಾದಿಗಳಾದ ಸಿದ್ದರಾಮಯ್ಯ ಮತ್ತು ಡಿಕೆಶಿ(DK Shivakumar - siddaramaiah) ತಮ್ಮ ಸಮುದಾಯವನ್ನು ಮುಂದಿಟ್ಟು ರಾಜಕೀಯ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಜಾತಿವಾದಿಯಲ್ಲ ರಾಷ್ಟ್ರೀಯವಾದಿ ರಾಜಕೀಯ ನಡೆಸುತ್ತಿದೆ. ಕಾಂಗ್ರೆಸ್‌ ಈ ತನಕ ಮುಸ್ಲಿಂ ಓಟುಗಳನ್ನು ನಂಬಿಕೊಂಡಿತ್ತು. ಆದರೆ ಇದೀಗ ಎಸ್‌ಡಿಪಿಐ ಹುಟ್ಟಿಕೊಂಡಿದೆ. ಅದು ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ಅಧಿಕಾರ ಪಡೆಯುವ ಕನಸು ಕಾಣುತ್ತಿದೆ. ಆದರೆ ರಾಷ್ಟ್ರೀಯವಾದಿ ಕಾರ್ಯಕರ್ತರು ಇರುವ ತನಕ ಈ ಕನಸು ನನಸಾಗಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ನಾಯಿಗಳು ಮೋದಿ, ಬೊಮ್ಮಾಯಿಯನ್ನು ಕೆಟ್ಟದ್ದಾಗಿ ಬೈಯುತ್ತವೆ: ಈಶ್ವರಪ್ಪ

ನರೇಂದ್ರ ಮೋದಿ ಪ್ರಧಾನಿ(PM Narendra Modi)ಯಾದ ಬಳಿಕ ಪಾಕಿಸ್ತಾನ ಮತ್ತು ಚೈನಾಕ್ಕೆ ನೀಡಿರುವ ಉತ್ತರ ನಮ್ಮ ದೇಶದ ಬಗ್ಗೆ ಪ್ರಪಂಚಕ್ಕೆ ಅರಿವು ಮೂಡಿತು. ಆದರೆ ಪಾಕಿಸ್ತಾನ ಮತ್ತು ಸಿದ್ದರಾಮಯ್ಯ ಅವರಿಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ದ್ವೇಷ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪ್ರಧಾನಿಯನ್ನು ನರಹಂತಕ ಎನ್ನುತ್ತಾರೆ. ಇನ್ನೊಮ್ಮೆ ಹಾಗೆ ಹೇಳಿದರೆ ಅವರ ನಾಲಿಗೆ ಕಿತ್ತು ಬಿಸಾಕುತ್ತೇವೆ ಎಂದು ಈಶ್ವರಪ್ಪ ಕಿಡಿಕಾರಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ ಕುಮಾರ್‌(V Sunil kumar karkal) ಮಾತನಾಡಿ ಬಿಜೆಪಿ ಪಕ್ಷವು ಹಿಂದುತ್ವ ಮತ್ತು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಅಧಿಕಾರ ಪಡೆದುಕೊಂಡಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಶಾಸಕ ಸಂಜೀವ ಮಠಂದೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಪಕ್ಷದ ಮುಖಂಡರಾದ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ರಾಜೇಶ್‌ ಕಾವೇರಿ, ರಾಮದಾಸ್‌ ಬಂಟ್ವಾಳ, ಗೋಪಾಲಕೃಷ್ಣ ಹೇರಳೆ, ಕಸ್ತೂರಿ ಪಂಜ, ಬೂಡಿಯಾರ್‌ ರಾಧಾಕೃಷ್ಣ ರೈ, ದತ್ತಾತ್ರೇಯ, ಕಿಶೋರ್‌, ದೇವದಾಸ ಶೆಟ್ಟಿ, ಜಯಂತಿ ನಾಯ್‌್ಕ, ಆರ್‌.ಸಿ. ನಾರಾಯಣ, ಸುನಿಲ್‌ ದಡ್ಡು, ವಿದ್ಯಾಗೌರಿ, ಪುಡಾ ಅಧ್ಯಕ್ಷ ಭಾಮಿ ಅಶೋಕ್‌ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

ಕೊಡಗಿಗೆ ಮತ್ತೆ ಬರುತ್ತೇನೆ ಎಂದಿದ್ದ ಸಿದ್ದರಾಮಯ್ಯ: ಬರಲಿ ನೋಡೋಣ ಎಂದು ಈಶ್ವರಪ್ಪ ಸವಾಲು!

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್‌ ಬನ್ನೂರು ಮತ್ತು ಚಂದ್ರಶೇಖರ ರಾವ್‌ ಬಪ್ಪಳಿಗೆ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ಪುತ್ತೂರು ಬಸ್ಸು ನಿಲ್ದಾಣದ ಬಳಿಯಿಂದ ಸಭಾ ವೇದಿಕೆಯ ತನಕ ಮೆರವಣಿಗೆ ನಡೆಯಿತು.