Karnataka election result 2023: ಕಾಂಗ್ರೆಸ್ಸಿನ 5 ಗ್ಯಾರಂಟಿಗಳಿಗೆ ಷರತ್ತು ಅನ್ವಯ, 6ನೇ ಗ್ಯಾರಂಟಿ ರಿಲೀಸ್‌ಗೆ ಸಿದ್ಧತೆ!

ಚುನಾವಣೆ ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ 6ನೇ ಗ್ಯಾರಂಟಿ ರಿಲೀಸ್ ಆಗಿದೆ. ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ ಆಗಿದೆ.

Karnataka election result 2023 Congress 5 guarantees have more conditions apply sat

ಉಡುಪಿ (ಮೇ 15): ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ 6ನೇ ಗ್ಯಾರಂಟಿ ರಿಲೀಸ್ ಆಗಿದೆ. ಇದರನ್ವಯ ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ, ಪಾಕಿಸ್ತಾನ ಪರ ಘೋಷಣೆ, ಬಾವುಟ ವಿವಾದ ಇತ್ಯಾದಿಗಳು ಪ್ರಾರಂಭಗೊಂಡಿದ್ದು, ಕ್ರಮೇಣ ವಿಪರೀತ ಹಂತವನ್ನು ತಲುಪಲಿವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಹೇಳಿದ್ದಾರೆ.

ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಇಂತಹ ಕುಕೃತ್ಯವನ್ನು ಸಹಿಸುವುದಿಲ್ಲ. ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಜನರನ್ನು ಮರುಳುಗೊಳಿಸಲು ಘೋಷಿಸಿರುವ ಐದು ಗ್ಯಾರಂಟಿಗಳ ಬಗ್ಗೆ ಹೊಸ ಷರತ್ತುಗಳನ್ನು ವಿಧಿಸುತ್ತಿರುವ ಮೂಲಕ ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡ್ ಗಳ ನಿಜ ಬಣ್ಣ ಬಯಲಾಗಲಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ. ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ಉಡುಪಿಯ 5 ಕ್ಷೇತ್ರಗಳಲ್ಲಿಯೂ ಬಿಜೆಪಿ: ಜಿಲ್ಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟ ಹಾಗೂ ಕಾರ್ನರ್ ಮೀಟಿಂಗ್ ಗಳ ಮೂಲಕ ಜನತೆ ಕಾಂಗ್ರೆಸ್ಸಿನ ನಕಲಿ ಗ್ಯಾರಂಟಿ ಕಾರ್ಡ್ ಜಾಲದಿಂದ ಮೋಸ ಹೋಗದಂತೆ ಜಾಗೃತಿ ಮೂಡಿಸಿದ ಪರಿಣಾಮವಾಗಿ ದಾಖಲೆಯ ಅಂತರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ 5 ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿ ಹಿಂದುತ್ವದ ಭದ್ರಕೋಟೆಯೆಂಬ ಮಾತು ಸಾಬೀತು:  ರಾಜ್ಯದ ಇತರ ಎಲ್ಲಾ ಜಿಲ್ಲೆಗಳಿಗೆ ತುಲನೆ ಮಾಡಿದಾಗ, ಉಡುಪಿ ಜಿಲ್ಲೆಯ ಎಲ್ಲಾ 5 ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸಿದೆ. ಮಗದೊಮ್ಮೆ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವನ್ನಾಗಿಸಿದೆ. ರಾಜ್ಯದಲ್ಲೇ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು. ಈ ಮೂಲಕ ಉಡುಪಿ ಜಿಲ್ಲೆ ಹಿಂದುತ್ವದ ಭದ್ರ ಕೋಟೆ ಎಂಬುದನ್ನು ಸಾಬೀತುಪಡಿಸಿದೆ. ಈ ಯಶಸ್ಸಿಗೆ ಕಾರಣೀಭೂತರಾಗಿರುವ ಪಕ್ಷದ ಸಮಸ್ತ ಕಾರ್ಯಕರ್ತರಿಗೆ ಹಾಗೂ ಮತದಾರ ಬಾಂಧವರಿಗೆ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

Karnataka election 2023: ಸಿಎಂ ಕುರ್ಚಿಗೆ ಎಲ್ಲರೂ ಆಸೆ ಪಡ್ಲಿ, ನನ್ನೊಂದಿಗೆ 135 ಶಾಸಕರಿದ್ದಾರೆ!

ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಸೇವಾ ಸಂಪದ ಪ್ರಶಸ್ತಿ:  ದೆಹಲಿ ಸಾರ್ವಜನಿಕ ಶಾಲೆಯ ಸಭಾಂಗಣದಲ್ಲಿ ಬಂಟರ ಸಂಘ ಏರ್ಪಡಿಸಿದ್ದ ಬಂಟೋತ್ಸವ 2023 ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ 'ಸೇವಾ ಸಂಪದ" ಪ್ರಶಸ್ತಿ' ಯನ್ನು ನೀಡಿ ಗೌರವಿಸಲಾಯಿತು. ಈ 'ಸೇವಾ ಸಂಪದ' ಪ್ರಶಸ್ತಿಯು ಬಂಟ್ಸ್ ಸಂಘವು ಕತಾರ್ ದೇಶದಲ್ಲಿ ಪ್ರತಿ ವರ್ಷ ಸಮಾಜಕ್ಕೆ ಅತ್ಯುನ್ನತ ಸೇವೆಯನ್ನು ನೀಡುತ್ತಾ ಬಂದಿರುವ ಗಣ್ಯರಿಗೆ ನೀಡಿ ಗೌರವಿಸುತ್ತಿದೆ. 

Karnataka election result 2023 Congress 5 guarantees have more conditions apply sat

8 ವರ್ಷಗಳ ಸೇವೆಗೆ ಸಂದ ಪ್ರಶಸ್ತಿ: ಕತಾರಿನ ಭಾರತೀಯ ಸಮುದಾಯದಲ್ಲಿ ಈ ಪ್ರಶಸ್ತಿಗೆ ತನ್ನದೇ ಆದ ಸ್ಥಾನಮಾನಗಳಿವೆ. ಸುಮಾರು 8 ವರ್ಷಗಳಿಂದ ತಮ್ಮ ನಿಸ್ವಾರ್ಥ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕತಾರಿನಲ್ಲಿ ಕರೋನಾ ಮಹಾಮಾರಿಯ ತಾಂಡವದ ಮಧ್ಯೆ ಹಲವಾರು ಅವಶ್ಯಕತೆ ಇರುವ ಜನರಿಗೆ ಅನ್ನಾಹಾರ ಹಾಗು ತುರ್ತು ಪರಿಸ್ಥಿತಿಯಲ್ಲಿರುವವರಿಗೆ 'ಒಂದೇ ಭಾರತ್' ಸೇವೆಯಡಿಯಲ್ಲಿ ತಾಯ್ನಾಡಿಗೆ ವಿಮಾನಯಾನದ ವ್ಯವಸ್ಥೆಯನ್ನು ಕಲ್ಪಿಸಿಕೊಡುವಲ್ಲಿ ಮಹತ್ತರ ಕೊಡುಗೆಯನ್ನು ಸುಬ್ರಮಣ್ಯ ಹೆಬ್ಬಾಗಿಲು ನೀಡಿರುತ್ತಾರೆ.

Latest Videos
Follow Us:
Download App:
  • android
  • ios