Asianet Suvarna News Asianet Suvarna News

Karnataka Election Result 2023 ಸಿಎಂ ಆಯ್ಕೆಗೆ ಸೋನಿಯಾ, ರಾಹುಲ್ ನಿರ್ಧಾರ ಕೇಳಿದ ಖರ್ಗೆ!

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಕಾಂಗ್ರೆಸ್ ಇದೀಗ ಸಿಎಂ ಆಯ್ಕೆ ಯಾರಾಗಬೇಕು ಅನ್ನೋ ಚರ್ಚೆಯಲ್ಲಿ ತೊಡಗಿದೆ. ಇದೀಗ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಆದರೆ ಈ ಸಭೆಗೂ ಮುನ್ನ ದೆಹಲಿಯಲ್ಲಿ ಸಭೆ ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ, ಸಿಎಂ ಆಯ್ಕೆಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲಹೆ ಕೇಳಿದ್ದಾರೆ.

Karnataka Election Result 2023 Mallikarjun kharge ask Sonai gandhi suggestion for congress chief minister elect ckm
Author
First Published May 14, 2023, 6:11 PM IST

ನವದೆಹಲಿ(ಮೇ.14): ಕರ್ನಾಟಕ ವಿಧಾನಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಕಾಂಗ್ರೆಸ್ ಸಂಭ್ರಮ ಮುಗಿಲು ಮುಟ್ಟಿದೆ. ಇತ್ತ ಕಾಂಗ್ರೆಸ್ ನಾಯಕರು, ಹೈಕಮಾಂಡ್ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಚರ್ಚೆಯಲ್ಲಿ ಮುಳುಗಿದ್ದಾರೆ. ಇಂದು(ಮೇ.14) ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈ ಸಭೆಯಲ್ಲಿ ಮುಂದಿನ ಸಿಎಂ ಯಾರು ಅನ್ನೋದು ಘೋಷಣೆಯಾಗುವ ಸಾಧ್ಯತೆ ಇದೆ. ಆದರೆ ಈ ಸಭೆಗೂ ಮುನ್ನ ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಸಭೆ ನಡೆಸಿದ್ದಾರೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲಹೆ ಕೇಳಿದ್ದಾರೆ.

ಕರ್ನಾಟಕದ ಸಿಎಂ ಆಯ್ಕೆ ಕುರಿತು ಮಲ್ಲಿಕಾರ್ಜುನ ಖರ್ಗೆ ತಮ್ಮ ದೆಹಲಿ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರ ಜೊತೆ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಒಂದೊಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದೀಗ ಮಲ್ಲಿಕಾರ್ಜುನ ಖರ್ಗೆ, ಸಿಎಂ ಆಯ್ಕೆ ಗೊಂದಲ ಪರಿಹರಿಸಲು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲಹೆ ಕೇಳಲು ನಿರ್ಧರಿಸಿದ್ದಾರೆ. ಸದ್ಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ತಂಗಿದ್ದಾರೆ. ಹೀಗಾಗಿ ದೂರವಾಣಿ ಮೂಲಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿ ಸಿಎಂ ಯಾರು ಅನ್ನೋ ಸೂಚನೆಯನ್ನು ಬೆಂಗಳೂರಿನಲ್ಲಿ ನಡೆಯಲಿರುವ ಸಿಎಲ್‌ಪಿ ಸಭೆಗೆ ರವಾನಿಸಲಿದ್ದಾರೆ. ಬಳಿಕ ಕರ್ನಾಟಕದ ಮುಖ್ಯಮಂತ್ರಿ ಘೋಷಣೆಯಾಗುವ ಸಾಧ್ಯತೆ ಇದೆ.

ನಾನು ಸೋತು ಸಿದ್ದರಾಮಯ್ಯಗೆ ಸಹಕಾರ ಕೊಟ್ಟಿರುವೆ, ಪರೋಕ್ಷವಾಗಿ ನಾನೇ ಸಿಎಂ ಎಂದ ಡಿಕೆಶಿ

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲಹೆ ಕೇಳಿ ಮುಖ್ಯಮಂತ್ರಿ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಹಾದಿ ಸುಗಮವಾಗುವ ಸಾಧ್ಯತೆ ಇದೆ. ಸೋನಿಯಾ ಹಾಗೂ ರಾಹುಲ್ ಇಬ್ಬರೂ ಡಿಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸುವ ಸಾಧ್ಯತೆ ಹೆಚ್ಚು. ಇತ್ತ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಆಯ್ಕೆ ಅಂತಿಮಗೊಳಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೇರುವ ಸಾಧ್ಯತೆ ಹೆಚ್ಚು. ಸಧ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲಹೆಯಂತೆ ಮುಂದುವರಿಯಲಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಬೆನ್ನಲ್ಲೇ ಸಮುದಾಯಗಳ ಒತ್ತಡವೂ ಹೆಚ್ಟಾಗುತ್ತಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದರ ಜೊತೆಗೆ ಹಲವು ಮುಸ್ಲಿಮ್ ಮುಖಂಡರು ಸಿದ್ದುಗೆ ಸಿಎಂ ಪಟ್ಟ ನೀಡಲು ಒತ್ತಾಯ ಮಾಡಿದ್ದಾರೆ. ಇತ್ತ ಒಕ್ಕಲಿಗ ಸಮುದಾಯ, ಸ್ವಾಮೀಜಿಗಳು ಸೇರಿದಂತೆ ಹಲವು ನಾಯಕರು ಡಿಕೆ ಶಿವಕುಮಾರ್ ಪರ ಒಲವು ವ್ಯಕ್ತಪಡಿಸಿದ್ದಾರೆ. 

ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ: ಸಿಎಂ ಆಗ್ತೀನಿ ಎಂಬ ನಂಬಿಕೆ ನನಗಿದೆ ಎಂದ ಶಿವಕುಮಾರ್‌

ಡಿಕೆ ಶಿವಕುಮಾರ್ ಈಗಾಗಲೇ ಬಹಿರಂಗವಾಗಿ ಸಿಎಂ ಆಸೆ ಬಿಚ್ಚಿಟ್ಟಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಲು ಎಲ್ಲರೂ ಸಹಕರಿಸಬೇಕು ಎಂದಿದ್ದಾರೆ. ಸಿದ್ದರಾಮಯ್ಯ ಕೂಡ ಇದು ತನ್ನ ಕೊನೆಯ ಚುನಾವಣೆ ಎಂದೇ ಪ್ರಚಾರ ಮಾಡಿದ್ದಾರೆ. ಹೀಗಾಗಿ ತಾನೇ ಸಿಎಂ ಎಂದು ಈಗಾಗಲೇ ಹೇಳಿಕೆ ನೀಡಿದ್ದರು. ಸಿದ್ದು ಹಾಗೂ ಡಿಕೆಶಿ ನಡುವಿನ ಸಿಎಂ ರೇಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ತಲೆನೋವು ಹೆಚ್ಚಿಸಿದೆ.

Follow Us:
Download App:
  • android
  • ios