Karnataka Election Result 2023 ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ!
ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ದಾಖಲಿಸಿದೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ. ಆದರೆ ಈ ಸಂಭ್ರಮದಲ್ಲಿ ಕಾಂಗ್ರೆಸ್ ಬೆಂಬಲಿಗರು ಪಾಕಿಸ್ತಾನ ಜಿಂದಾಬ್ ಘೋಷಣೆ ಕೂಗಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಬೆಂಗಳೂರು(ಮೇ.13): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನೊಂದಿಗೆ ಸಂಭ್ರಮ ಆಚರಿಸುತ್ತಿದೆ. ಬೀದಿ ಬೀದಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರು, ಕಾರ್ಯಕರ್ತರು ಸಂಭ್ರಮ ಆಚರಿಸುತ್ತಿದ್ದಾರೆ. ಆದರೆ ಅಭಿಮಾನಿಗಳು, ಬೆಂಬಲಿಗರ ಈ ಸಂಭ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.
ಬೆಳಗಾವಿ ಹಾಗೂ ಭಟ್ಕಳದಲ್ಲಿ ಕಾಂಗ್ರೆಸ್ ಬೆಂಬಲಿಗರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದೆ. ಭಾರಿ ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬೆಳಗಾವಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಕಾಂಗ್ರೆಸ್ ಗೆಲುವು ಸಂಭ್ರಮಿಸಿದ್ದಾರೆ. ಬಣ್ಣ ಎರಚಿ ಒಕುಳಿಯಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ಈ ವೇಳೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರು ಖಡಕ್ ವಾರ್ನಿಂಗ್ ನೀಡಿ ಎಲ್ಲರ ಬಾಯಿ ಮುಚ್ಚಿಸಿದ್ದಾರೆ.
Karnataka Election 2023 Live: ಮುಖ್ಯಮಂತ್ರಿ ಯಾರಾಗ್ತಾರೆ ಅನ್ನೋದೆ ಕುತೂಹಲವೀಗ!
ನಿಮ್ಮ ನಾಯಕನ ಪರ, ಪಕ್ಷದ ಪರ ಘೋಷಣೆ ಕೂಗಿ, ಇಲ್ಲಿ ಅನಗತ್ಯ ಘೋಷಣೆ ಬೇಕಿಲ್ಲ ಎಂದು ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಪೊಲೀಸರ ವಾರ್ನಿಂಗ್ ಬಳಿಕ ಕಾರ್ಯಕರ್ತರು ವಿವಾದಿತ ಘೋಷಣೆ ಕೂಗುವುದು ನಿಲ್ಲಿಸಿದ್ದಾರೆ. ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಈ ಘಟನೆ ನಡೆದಿರುವುದು ಇದೀಗ ಹೊಸ ಆತಂತಕ್ಕೆ ಕಾರಣವಾಗಿದೆ.
ಬೆಳಗಾವಿಯಲ್ಲಿ ಮಾತ್ರವಲ್ಲ ಭಟ್ಕಳದಲ್ಲೂ ಆತಂಕದ ಘಟನೆ ನಡೆದಿದೆ. ಭಟ್ಕಳ್‌ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ್ ವೈದ್ಯ ಗೆಲುವು ಸಾಧಿಸುತ್ತಿದ್ದಂತೆ ಭಟ್ಕಳ್ ಸಂಶುದ್ದೀನ್ ಸರ್ಕಲ್ ಬಳಿ ಜಮಾಯಿಸಿದ ಕಾಂಗ್ರೆಸ್ ಬೆಂಬಲಿಗರು ಇಸ್ಲಾಮಿಕ್ ಬಾವುಟ ಹಾರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದರ ವಿರುದ್ಧವೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಡಿಯೋ ಕೂಡ ವೈರಲ್ ಆಗಿದೆ. ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಪಾಕ್ ಜಿಂದಾಬಾದ್ ಘೋಷಣೆ ಮೊಳಗಿದೆ. ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಕತೆ ಏನು? ಎಂದು ಹಲವರು ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 134 ಕ್ಷೇತ್ರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದರೆ. ಇನ್ನುಳಿದ 4 ಕ್ಷೇತ್ರದಲ್ಲಿ ಬಹುತೇಕ ಗೆಲುವಿನ ಅಂಚಿನಲ್ಲಿದೆ. ಸದ್ಯ ಒಟ್ಟು 136 ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ. ಇತ್ತ ಬಿಜೆಪಿ 64 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಜೆಡಿಎಸ್ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇನ್ನು ಇತರರು 2 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
Karnataka Election Result 2023 ಪ್ರಮುಖ 10 ಸಮೀಕ್ಷೆಯಲ್ಲಿ ಒಬ್ಬರ ಭವಿಷ್ಯ ಪಕ್ಕಾ, ಉಳಿದವರ ಲೆಕ್ಕ ಉಲ್ಟಾ!
16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.