HD Kumaraswamy: ಎಚ್ಡಿಕೆ ಗೆಲುವಿಗೆ 2,500 ಲಡ್ಡು ಹಂಚಿದ ಅಭಿಮಾನಿಗಳು!
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಗುಡ್ಡೆ ತಿಮ್ಮಸಂದ್ರ ಗ್ರಾಮದ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಸ್ವಂತ ಖರ್ಚಿನಲ್ಲಿ 2500 ಲಡ್ಡು ತಯಾರಿಸಿ, ಗ್ರಾಮಸ್ಥರಿಗೆ ವಿತರಣೆ ಮಾಡಿದರು.
ಚನ್ನಪಟ್ಟಣ (ಮೇ.16) : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಗುಡ್ಡೆ ತಿಮ್ಮಸಂದ್ರ ಗ್ರಾಮದ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ಸ್ವಂತ ಖರ್ಚಿನಲ್ಲಿ 2500 ಲಡ್ಡು ತಯಾರಿಸಿ, ಗ್ರಾಮಸ್ಥರಿಗೆ ವಿತರಣೆ ಮಾಡಿದರು.
ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ(HD Kumaraswamy) 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದರ ಜತೆಗೆ ತಿಮ್ಮಸಂದ್ರ ಗ್ರಾಮದಲ್ಲಿ ಜೆಡಿಎಸ್‌ಗೆ ಹೆಚ್ಚು ಲೀಡ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಲಡ್ಡು(Ladu) ತಯಾರಿಸಿ ಹಂಚಲಾಗಿದೆ ಎಂದು ಗ್ರಾಮದ ಜೆಡಿಎಸ್ ಬೆಂಬಲಿಗರೊಬ್ಬರು ತಿಳಿಸಿದ್ದಾರೆ.
Karnataka election results: ಎಚ್‌ಡಿ ಕುಮಾರಸ್ವಾಮಿ ಗೆಲುವು : ಮುಡಿ ಹರಕೆ ತೀರಿಸಿದ ಬೆಂಬಲಿಗ
ಗ್ರಾಮದಲ್ಲಿ ಒಟ್ಟು 1002 ಮತದಾರರಿದ್ದು ಈ ಬಾರಿ ಚುನಾವಣೆಯಲ್ಲಿ 872 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ 494 ಮತಗಳು ಲಭಿಸಿದ್ದರೆ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 348 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎಸ್.ಗಂಗಾಧರ್ 9 ಮತ ಪಡೆದಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್‌ಗೆ 146 ಮತಗಳ ಲೀಡ್ ದೊರೆತಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಲಾಡು ತಯಾರಿಸಿ ಪಕ್ಷಾತೀತವಾಗಿ ಗ್ರಾಮದಲ್ಲಿ ವಿತರಣೆ ಮಾಡುತ್ತಿದ್ದೇವೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಶಂಕರಪ್ಪ, ತಾಲೂಕು ಯುವ ಜೆಡಿಎಸ್ ಎಸ್ಸಿ ಎಸ್ಟಿಘಟಕದ ಉಪಾಧ್ಯಕ್ಷ ಟಿ.ಎನ್.ನಿಂಗರಾಜು, ಮುಖಂಡರಾದ ಹುಚ್ಚೇಗೌಡ, ಟಿ.ಬಿ.ರಾಜು, ಹೊನ್ನೇಗೌಡ ತಿಳಿಸಿದ್ದಾರೆ.