Asianet Suvarna News Asianet Suvarna News

ಕರ್ನಾಟಕದ ಮಾಜಿ ಸ್ಪೀಕರ್ ನಿಧನ

*ಕರ್ನಾಟಕದ ಮಾಜಿ ಸ್ಪೀಕರ್ ನಿಧನ
*ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ವಿಧಿವಶ
* 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ

Karnataka ex speaker kr pete krishna passes away at Mysuru rbj
Author
Bengaluru, First Published May 21, 2021, 4:42 PM IST

ಮೈಸೂರು/ಮಂಡ್ಯ, (ಮೇ.21): ಆಧುನಿಕ ಗಾಂಧಿವಾದಿ ಎಂದೇ ಪ್ರಸಿದ್ಧಿಯಾಗಿದ್ದ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ (80) ಅವರು ಅನಾರೋಗ್ಯದಿಂದ  ನಿಧನರಾಗಿದ್ದಾರೆ.

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಚೈನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು (ಶುಕ್ರವಾರ) ಮಧ್ಯಾಹ್ನ ಮೈಸೂರಿನ ಕುವೆಂಪು ನಗರ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

ಹುಡ್ಗೀರ ಕಣ್ಮಣಿ BBK ಅರವಿಂದ್, 10 ಜಿಲ್ಲೆ ಸಂಪೂರ್ಣ ಬಂದ್; ಮೇ.21ರ ಟಾಪ್ 10 ಸುದ್ದಿ!

ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿದ್ದರು. 1996ರಲ್ಲಿ ಸೋಲಿಲ್ಲದ ಸರದಾರರಾಗಿದ್ದ ಮತ್ತೊಬ್ಬ ಗಾಂಧಿಯಾಗಿದ್ದ ಮಾಜಿ ಸಂಸದ ಜಿ.ಮಾದೇಗೌಡರನ್ನು ಸೋಲಿಸಿ ಸಂಸದರಾಗಿದ್ದರು.

1988ರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೆ.ಆರ್.ಪೇಟೆ ತಾಲೂಕಿನ ಮೊದಲ ಸಚಿವರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದರು.

ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 

  ಡಿಸಿಎಂ ಕಂಬನಿ
ಮಾಜಿ ಸಭಾಧ್ಯಕ್ಷರಾದ ಕೆ.ಆರ್.‌ಪೇಟೆ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಕಂಬನಿ ಮಿಡಿದಿದ್ದಾರೆ. ಅವರ ನಿಧನ ಬಹಳ ನೋವುಂಟು ಮಾಡಿದೆ. ಕೃಷ್ಣ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ, ಅವರ ಪಕ್ಷದ ಕಾರ್ಯಕರ್ತರಿಗೆ ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.

Follow Us:
Download App:
  • android
  • ios