ನನ್ನ ರಕ್ತದ ಕಣ ಕಣದಲ್ಲೂ ಬಿಜೆಪಿ-ಹಿಂದೂತ್ವ ತುಂಬಿದೆ, ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಎಂಪಿ ರೇಣುಕಾಚಾರ್ಯ
ನನ್ನ ರಕ್ತದ ಕಣ ಕಣದಲ್ಲೂ ಬಿಜೆಪಿ ಮತ್ತು ಹಿಂದುತ್ವ ತುಂಬಿಕೊಂಡಿದೆ. ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ, ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲವೆಂದು ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ದಾವಣಗೆರೆ (ಆ.16): ನನ್ನ ರಕ್ತದ ಕಣ ಕಣದಲ್ಲೂ ಬಿಜೆಪಿ ಮತ್ತು ಹಿಂದುತ್ವ ತುಂಬಿಕೊಂಡಿದೆ. ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ, ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲವೆಂದು ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರಕ್ಕೆ ಇಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ರೇಣುಕಾಚಾರ್ಯ, ಈ ಹಿಂದೆ ನಾನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ ಅವರನ್ನು ನಾಲ್ಕು ಸಲ ಭೇಟಿ ಮಾಡಿದ್ದೆ. ಆದರೆ ಕಾಂಗ್ರೆಸ್ ಸೇರುತ್ತೇನೆಂದು ಎಲ್ಲಿಯೂ ಹೇಳಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ, ಮುಂದೆಯೂ ಅವರ ನೇತೃತ್ವದಲ್ಲೇ ಅಧಿಕಾರಕ್ಕೆ ಬರಲಿದೆ. ಅವರಿಂದಲೇ ನಾವು ಶಾಸಕರು, ಸಚಿವರು ಆಗಿದ್ದು ಎಂದರು.
ಯಾರ ಹಂಗಿನಲ್ಲೂ ಇಲ್ಲ, ಸ್ವಾಭಿಮಾನಿಯಾಗಿರುವೆ: ಉಚ್ಚಾಟಿಸಿದರೂ ತೊಂದರೆಯಿಲ್ಲ ಎಂದ ವಿನಯ್ ಕುಮಾರ್
ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಬಗ್ಗೆ ಡಿಕೆ ಶಿವಕುಮಾರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ವಿಜಯೇಂದ್ರಗೆ ಯಾವ ಭಿಕ್ಷೆಯೂ ಇಲ್ಲ. ನಮ್ಮ ಪಕ್ಷದಲ್ಲಿ ಗೊಂದಲ ಸೃಷ್ಟಿಮಾಡೋಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಯತ್ನಾಳ್ ಪಾದಯಾತ್ರೆ ವಿಚಾರ ಪ್ರಸ್ತಾಪಿಸಿದ ಅವರು, ಬಸನಗೌಡ ಪಾಟೀಲ್ ಪಾದಯಾತ್ರೆಗೆ ಅನುಮತಿ ಕೊಟ್ಟರೆ ಮಾಡಲಿ. ನಮ್ಮ ಹೋರಾಟ ಸರ್ಕಾರದ ವಿರುದ್ಧವಾಗಿದೆ ಅನುಮತಿ ಕೊಟ್ಟರೆ ನಾವು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ. ಇದು ಪಕ್ಷ ಸಂಘಟನೆ ಮಾಡಲು ಹೊರತು ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟಪಡಿಸಿದರು.