ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯ: ವೀರಪ್ಪ ಮೊಯಿಲಿ

ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 

Karnataka first state to give reservation to women Says Veerappa Moily gvd

ಕಾರ್ಕಳ (ಸೆ.24): ಮಹಿಳೆಯರಿಗೆ ಮೀಸಲಾತಿ ನೀಡುವಲ್ಲಿ ಕರ್ನಾಟಕ ಮೊದಲ ರಾಜ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ಹೇಳಿದರು. ಅವರು ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. 1993ರಲ್ಲಿಯೇ ಮಹಿಳೆಯರಿಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಶೇ.50 ಮೀಸಲಾತಿಯನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿತ್ತು . ಅಂದಿನ ಪಂಚಾಯಿತಿ ಚುನಾವಣೆಯಲ್ಲಿ ಶೇ.52 ರಷ್ಟು ಮಹಿಳೆಯರು ಚುನಾವಣೆಯಲ್ಲಿ ಅಯ್ಕೆಯಾಗಿದ್ದರು ಎಂದರು.

ಬಿಜೆಪಿ ಪಕ್ಷ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಜಾತಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಮೊಯಿಲಿ, ಕಾಂಗ್ರೆಸ್‌ನ ವಿಜಯೋತ್ಸವ ಕಂಡು ಜೆಡಿಎಸ್ ಬಿಜೆಪಿ ಕಾಲು ಹಿಡಿದು ಸಖ್ಯ ಬೆಳೆಸಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸಿ, ಅಧಿಕಾರ ಶಾಶ್ವತವಲ್ಲ ಅದರೆ ,ಉಸ್ತುವಾರಿ ಅವಧಿಯಲ್ಲಿ ನಿರ್ವಹಿಸಿದ ಕಾರ್ಯಗಳು ಶಾಶ್ವತವಾಗಬೇಕು ಎಂದರು. ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸಲು ಮೂರು ವರ್ಷ ತಗುಲಿದೆ.

ಅದರೆ ಕಾರ್ಕಳ ತಾಲೂಕಿನಲ್ಲಿ ಮಾತ್ರ ಆರು ತಿಂಗಳಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿದ್ದಾರೆ. ಅದರಲ್ಲಿ ಜನರ ದಿಕ್ಕು ತಪ್ಪಿಸಿದ್ದಾರೆ. ಸತ್ಯಾಸತ್ಯತೆ ತಿಳಿದಿದೆ ಎಂದರು. ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಕಡೆಗಣಿಸಿ ಜಿ.ಪಂ ಹಾಗೂ ತಾ.ಪಂ ಚುನಾವಣೆಗಳನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾರ್ಯಕರ್ತರಿಗೆ ಕರೆನೀಡಿದರು.‌ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಮಾತನಾಡಿ ಪಕ್ಷದ ಕಾರ್ಯಕರ್ತರು ನಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ , ಬಿಜೆಪಿ ಧರ್ಮವನ್ನಿಟ್ಟುಕೊಂಡು ರಾಜಕಾರಣ ಮಾಡುತ್ತಿದೆ ಎಂದರು.

ಅನಂತ್‌ ಇದ್ದಿದ್ದರೆ ‘ಕಾವೇರಿ ವಿವಾದ’ ಭುಗಿಲೇಳುತ್ತಿರಲಿಲ್ಲ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಸುಧೀರ್ ಮರೋಳಿ ಮಾತನಾಡಿದರು. ರಾಜ್ಯ ಕೃಷಿ ಘಟಕ ಕಾರ್ಯದರ್ಶಿ ಉದಯ ವಿ. ಶೆಟ್ಟಿ, ಕಾರ್ಯದರ್ಶಿ, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ, ಹೆಬ್ರಿ ಬ್ಲಾಕ್ ಮಾಜಿ ಅಧ್ಯಕ್ಷ ಮಂಜುನಾಥ ಪೂಜಾರಿ, ಜಿಲ್ಲಾ ವಕ್ತಾರರ ಬಿಪಿನಚಂದ್ರ ಪಾಲ್, ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್‌, ರಾಘವ ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಸದಸ್ಯ ಶಿರಿಯಣ್ಣ ಶೆಟ್ಟಿ, ಸುಭೋದ್ ಶೆಟ್ಟಿ, ಇಂಟಕ್ ಅದ್ಯಕ್ಷ ಕಿರಣ್ ಹೆಗ್ಡೆ, ಡಾ. ಪ್ರೇಮ್ ದಾಸ್‌, ಜಿಲ್ಲಾ ಅಲ್ಪಸಂಖ್ಯಾತ ಸಮಿತಿ ಸದಸ್ಯ ಮೊಯಿದ್ದಿನಬ್ಬಇನ್ನಾ, ಆರೀಫ್ ಕಲ್ಲೊಟ್ಟೆ, ಜಿಲ್ಲಾ ಮಹಿಳಾ ಕಾಂಗ್ರೇಸ್ ಅಧ್ಯಕ್ಷ ಗೀತಾ ವಾಗ್ಲೆ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಮಾಲಿನಿ ಎನ್. ರೈ, ಜಿಲ್ಲಾ ಯುವ ಕಾಂಗ್ರೆಸ್ ದೀಪಕ್ ಕೋಟ್ಯನ್ , ಮೊದಲಾದವರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios