Asianet Suvarna News Asianet Suvarna News

ಕೊರೋನಾ ಸೋಂಕಿನಿಂದ ಕರ್ನಾಟಕದ ಮಾಜಿ ಸಚಿವ ಸಾವು

ಕೊರೋನಾ ಮಹಾಮಾರಿಯಿಂದ ಕರ್ನಾಟಕದ ಮಾಜಿ ಸಚಿವರೊಬ್ಬರು ಮರಣ ಹೊಂದಿದ್ದಾರೆ. ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಸೋಮವಾರ ಕೊನೆಯುಸಿರೆಳೆದಿದ್ದಾರೆ.

Karnataka former Minister Raja Madan gopal Nayak passes away From Covid19
Author
Bengaluru, First Published Jul 27, 2020, 3:38 PM IST

ಯಾದಗಿರಿ, (ಜುಲೈ.27): ಕೋವಿಡ್-19 ಸೋಂಕಿನಿಂದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ.

ಕಫ, ನ್ಯುಮೋನಿಯಾ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಮದನಗೋಪಾಲ ನಾಯಕ ಇಂದು (ಸೋಮವಾರ) ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಬಿಂಬಿತರಾಗಿದ್ದ ರಾಜಾ ಮದನಗೋಪಾಲ ನಾಯಕ ಅವರಿಗೆ ಕಳೆದ ಐದು ದಿನಗಳ ಹಿಂದೆ ಕೊವಿಡ್ ಟೆಸ್ಟ್ ಮಾಡಿಸಿದ್ದಾಗ ಪಾಸಿಟಿವ್ ಎಂದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನ ಕಲಬುರಗಿಯಯ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ. 

ಕೊರೋನಾ ಗೆದ್ದು ಮನೆಗೆ ಬಂದಿದ್ದ ಬಿಜೆಪಿ ಹಿರಿಯ ಮುಖಂಡ ನಿಧನ: ಪ್ರಲ್ಹಾದ ಜೋಶಿ ಸಂತಾಪ

ವೀರಪ್ಪ ಮೊಯ್ಲಿ ಸಂಪುಟದಲ್ಲಿ ಸಚಿವ
Karnataka former Minister Raja Madan gopal Nayak passes away From Covid19
1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು. ನಂತರ 1985ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು. 

ನಂತರ 1989ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ರಾಯಚೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲುನುಭವಿಸಿದರು.

Follow Us:
Download App:
  • android
  • ios