Asianet Suvarna News Asianet Suvarna News

ಬೈ ಎಲೆಕ್ಷನ್: ನವೆಂಬರ್ 3ರಂದು ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ

ಇದೆ ನವೆಂಬರರ್ 3ರಂದು ಸರ್ಕಾರಿ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಇಂದು (ಗುರುವಾರ) ಆದೇಶ ಹೊರಡಿಸಿದೆ.

Karnataka Govt Announces Holiday On Nov 3 at Sira and RR Nagar constituency  For By Poll rbj
Author
Bengaluru, First Published Oct 15, 2020, 2:12 PM IST

ಬೆಂಗಳೂರು, (ಅ.15): ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಈ ಎರಡು ಕ್ಷೇತ್ರಗಳಿಗೆ ಇದೇ ನವೆಂಬರ್ 3 ರಂದು ಮತದಾನ ನಡೆಯಲಿದೆ. ಇದರಿಂದ ಅಂದು ಈ ಎರಡು ಕ್ಷೇತ್ರಗಳಲ್ಲಿ ಮಾತ್ರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 3 ರಂದು 2 ಕ್ಷೇತ್ರಗಳ ಸರ್ಕಾರಿ ಇಲಾಖೆಗಳು, ಸರ್ಕಾರಿ ಸಂಸ್ಥೆಗಳು, ಶಾಲೆ-ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

RR ನಗರ ಬೈ ಎಲೆಕ್ಷನ್: ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ ಬಿಗ್ ಶಾಕ್

ರಾಜ್ಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂ 3-11-2020ರ ಮಂಗಳವಾರದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಈ ರಜೆ ತುರ್ತು ಸೇವೇಗಳಿಗೆ ಅನ್ವಯಿಸುವುದಿಲ್ಲ. ಅದಾಗ್ಯೂ ಕೂಡ ತುರ್ತು ಸೇವೆಯಡಿ ಕೆಸಲ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂವಾಗುಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಸರ್ಕಾರಿ ಹೇಳಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.

Follow Us:
Download App:
  • android
  • ios