* ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷದಿಂದ ಶ್ರುತಿಗೆ ಗೇಟ್‌ ಪಾಸ್* ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮಕ್ಕೆ ಹೊಸ ಅಧ್ಯಕ್ಷರ ನೇಮಕ* ಸಿಎಂ ಯಡಿಯೂರಪ್ಪ ಆಪ್ತಗೆ ಜಾಕ್‌ಪಾಟ್

ಬೆಂಗಳೂರು, (ಜು.18): ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕಾತಿಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೀಗ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರನ್ನಾಗಿ ಸಿಎಂ ಬಿಎಸ್ ಯಡಿಯೂರಪ್ಪನವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮೋದಿ ಮನವಿಗೆ ಕಿಮ್ಮತ್ತು ನೀಡದ ಜನ, ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ವರುಣ; ಜು.18ರ ಟಾಪ್ 10 ಸುದ್ದಿ!

ಶ್ರುತಿ ಅವರ ನೇಮಕಾತಿಯನ್ನು ಹಿಂಪಡೆದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರನ್ನಾಗಿ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ರಾಜ್ಯ ಸರ್ಕಾರ ಇಂದು (ಭಾನುವಾರ) ಆದೇಶಿಸಿದೆ.

 ಕಾಪು ಸಿದ್ದಲಿಂಗಸ್ವಾಮಿ ಅವರು ಈ ಹಿಂದೆ ಬಿಎಸ್ ಯಡಿಯೂರಪ್ಪನವರ ಆಪ್ತ ಸಹಾಯಕರಾಗಿದ್ದರು. ಅಲ್ಲದೇ 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾ.ಪು.ಸಿದ್ದಲಿಂಗಸ್ವಾಮಿ ಸ್ಪರ್ಧಿಸಿದ್ದರು.

ಒಟ್ಟಿನಲ್ಲಿ ಶ್ರುತಿ ಅವರನ್ನ ತೆಗೆದು ಯಡಿಯೂರಪ್ಪನವರ ಆಪ್ತ ಸಿದ್ದಲಿಂಗಸ್ವಾಮಿ ಅವರನ್ನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ಮಾಡಿರುವುದು ತೀವ್ರ ಕುತೂಹಲ ಹಾಗೂ ಅಚ್ಚರಿಗೆ ಕಾರಣವಾಗಿದೆ.