* ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷ, ಸದಸ್ಯರುಗಳ ನೇಮಕ* ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ ನೇಮಕ* ನಿಗಮ ಸ್ಥಾಪನೆಯಾದ ಎರಡೇ ದಿನದಲ್ಲಿ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿದ ಸರ್ಕಾರ
ಬೆಂಗಳೂರು, (ಜು.19): ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪಿಸಿದ ಬೆನ್ನಲ್ಲೇ ಇದೀಗ ಅದಕ್ಕೆ ನೂತನ ಅಧ್ಯಕ್ಷ, ಸದಸ್ಯರುಗಳನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೆಶ ಹೊರಡಿಸಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು (ಸೋಮವಾರ) ಆದೇಶಿಸಿದೆ.
ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಇನ್ನು ಮಾಜಿ ಶಾಸಕ ಸುರೇಶ್ ಗೌಡ ಹಾಗೂ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕೋಶಾಧ್ಯಕ್ಷೆ ಸುರಭಿ ರಘು ಅವರನ್ನ ಒಕ್ಕಲಿಗರ ಅಭಿವೃದ್ಧಿ ನಿಗಮದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಒಕ್ಕಲಿಗರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಶನಿವಾರ (ಜು.17) ಆದೇಶ ಹೊರಡಿಸಿತ್ತು. ಇದಾದ ಎರಡೇ ದಿನದಲ್ಲಿ ನಿಗಮಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಲಾಗಿದೆ.
ರಾಜ್ಯದಲ್ಲಿ ನಾಯಕತ್ವ ಚರ್ಚೆ ಕುರಿತು ಮತ್ತೊಂದು ಸುತ್ತಿನ ಚರ್ಚೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲೇ ಕೊಟ್ಟ ಮಾತುಗಳಂತೆ ಬಾಇ ಇರುವ ಎಲ್ಲಾ ಕೆಲಸಗಳನ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.
