* ನಟಿ ಶ್ರುತಿಗೆ ಬೇರೆ ಹುದ್ದೆ ನೀಡದ ಸರ್ಕಾರ* ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ವಾಪಸ್ ಪಡೆದುಕೊಂಡ ಬೆನ್ನಲ್ಲೇ  ಶ್ರುತಿಗೆ ಬೇತೆ ಹುದ್ದೆ * ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು

ಬೆಂಗಳೂರು, (ಜು..19)) : ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ವಾಪಸ್ ಪಡೆದುಕೊಂಡ ಬೆನ್ನಲ್ಲೇ ಶ್ರುತಿ ಅವರಿಗೆ ಬೇರೊಂದು ಹುದ್ದೆ ನಿಡಲಾಗಿದೆ.

Add Asianetnews Kannada as a Preferred SourcegooglePreferred

ಹೌದು.. ನಟಿ ಶ್ರುತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಇಂದು (ಸೋಮವಾರ) ಆದೇಶ ಹೊರಿಡಿಸಿದೆ.

ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಅಧ್ಯಕ್ಷದಿಂದ ಶ್ರುತಿಗೆ ಗೇಟ್‌ ಪಾಸ್, ಬಿಎಸ್‌ವೈ ಆಪ್ತಗೆ ಜಾಕ್‌ಪಾಟ್

"

 ಮುಖ್ಯಮಂತ್ರಿ ಗೃಹ ಕಚೇರಿಯ ಟಿಪ್ಪಣಿಯಂತೆ ಶ್ರುತಿ ಅವರನ್ನ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇದರ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ ಎಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದಾರೆ.

 ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಶ್ರುತಿ ಅವರನ್ನ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನ ನೂತನ ಅಧ್ಯಕ್ಷರನ್ನಾಗಿ ಮಾಡಿ ಸರ್ಕಾರ ಆದೇಶಿಸಿತ್ತು.