ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿದ ಬೆನ್ನಲ್ಲೇ ಇದೀಗ ರಾಜ್ಯದ ಸಹಕಾರಿ ರಂಗದ ಎಲ್ಲಾ ಮಾದರಿಯ ಚುನಾವಣೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಿಸಿದೆ.

ಬೆಂಗಳೂರು, (ಜುಲೈ.14): ಕೊರೋನಾ ವೈರಸ್‌ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್‌ ಅಂತ್ಯದವರೆಗೆ ಮುಂದೂಡಿ ರಾಜ್ಯ ಸರ್ಕಾರ ಇಂದು (ಮಂಗಳವಾರ) ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಚುನಾವಣಾ ವೇಳಾ ಪಟ್ಟಿ ಹೊರಡಿಸಿ ಚುನಾವಣಾ ಪ್ರಕ್ರಿಯೆ ಜಾರಿಯಲ್ಲಿದ್ದಲ್ಲಿ ಅದನ್ನು ಸಹ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುವಂತೆ ಸಹಕಾರ ಇಲಾಖೆಯ ಸರಕಾರದ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ರಾಜ್ಯದಲ್ಲಿ 2496 ಜನರಿಗೆ ಕೊರೋನಾ: ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್..?

ಆಡಳಿತ ಅಧಿಕಾರಿ ನೇಮಕ
ಪ್ರಾಥಮಿಕ, ಮಾಧ್ಯಮಿಕ ಒಕ್ಕೂಟಗಳ (ಫೆಡರಲ್‌ ಸಂಸ್ಥೆ) ಮತ್ತು ಅಪೆಕ್ಸ್‌ ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳಲಿರುವ ಸಹಕಾರ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶದಲ್ಲಿ ಸೂಚಿಸಲಾಗಿದೆ.

ರಾಜ್ಯದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಜೂನ್‌ 16 ರಂದು ಹೊರಡಿಸಿರುವ ಆದೇಶವನ್ನು ಮುಂದುವರಿಸಲಾಗಿದೆ. ಈ ಹಿಂದೆ ಗ್ರಾಮ ಪಂಚಾಯತ್‌ ಚುನಾವಣೆಗಳನ್ನೂ ಮುಂದೂಡಲಾಗಿತ್ತು. ಅಲ್ಲದೇ ಆಡಳಿತಾಧಿಕಾರಿಗಳನ್ನ ನೇಮಕ ಮಾಡಲಾಗಿದೆ.

 ಇದೀಗ ಸಹಕಾರ ಸಂಘಗಳ ಚುನಾವಣೆಯನ್ನೂ ಮುಂದೂಡಲಾಗಿದ್ದು, ಆಡಳಿತಾಧಿಕಾರಿ ನೇಮಕ ಮಾಡುವುದೊಂದೇ ಬಾಕಿ ಇದೆ.